ಕರಾವಳಿಯಲ್ಲಿ ಹೆಚ್ಚುತ್ತಿದೆ ಬಿಸಿ ಗಾಳಿ, ಎ. 27 ರ ವರೆಗೂ ಉರಿ ಉರಿ ಧಗೆ: ಈ ಬಿಸಿಲಿಗೆ ಹೆಚ್ಚು ನೀರು ಕುಡೀರಿ, ಅನಾರೋಗ್ಯದಿಂದ ದೂರವಿರಿ!

ಕರಾವಳಿಯಲ್ಲಿ ಬಿಸಿಗಾಳಿ ಮುಂದಿನ ಎರಡು-ಮೂರು ದಿನಗಳಲ್ಲಿ ಜಾಸ್ತಿಯಾಗಲಿದೆ ಎನ್ನುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.  ಹೆಚ್ಚಾಗಿ ಮಧ್ಯಾಹ್ನದ ಹೊತ್ತು ಹೊರಗೆ ಕೆಲಸ ಮಾಡದಂತೆ ಸೂಚನೆ ನೀಡಿದೆ. ಇಂತಹ ಬಿರುಬೇಸಿಗೆಯಲ್ಲಿಯೇ ನಿರ್ಜಲೀಕರಣದ ಸಮಸ್ಯೆ ನಮ್ಮಲ್ಲಿ ಜಾಸ್ತಿಯಾಗುತ್ತದೆ. ಕಡಿಮೆ ನೀರು ಕುಡಿಯುದರಿಂದ ಈ ಸಮಸ್ಯೆ ಜಾಸ್ತಿಯಾಗುತ್ತದೆ.  ಬೇಸಿಗೆಯ ತಾಪಮಾನ ಹೆಚ್ಚಾದಂತೆ ದೇಹದಲ್ಲಿ ಬೆವರುವಿಕೆ ಹೆಚ್ಚಾಗಿ, ನಿರ್ಜಲೀಕರಣ (Dehydration) ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚುತ್ತದೆ. ದೇಹದಲ್ಲಿ ನೀರಿನ ಕೊರತೆಯಿಂದ ತಲೆನೋವು, ತಲೆತಿರುಗುವಿಕೆ ಹಾಗೂ ಆಯಾಸ ಕಾಣಿಸಿಕೊಳ್ಳಬಹುದು. ಸಾಕಷ್ಟು ನೀರು ಕುಡಿಯದಿದ್ದರೆ ಮೂತ್ರಪಿಂಡದ […]

ಎ.26ರಂದು ಉಡುಪಿಯಲ್ಲಿ “ದೇಶಾಭಿಮಾನಿ ಸಮಾವೇಶ”- ನಟ ದುನಿಯಾ ವಿಜಯ್ ಉದ್ಘಾಟನೆ

ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಹಬಾಳ್ವೆ ಉಡುಪಿ, ಸಿಐಟಿಯು, ಭಾರತೀಯ ಕ್ರೈಸ್ತ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಹಿತ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಪ್ರಯುಕ್ತ “ದೇಶಾಭಿಮಾನಿ ಸಮಾವೇಶ” ವನ್ನು ಇದೇ ಎ.26ರಂದು ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು ತಿಳಿಸಿದರು. ಉಡುಪಿಯಲ್ಲಿ ನಡೆದ […]

ಎಸ್ಸೆಸ್ಸೆಲ್ಸಿ ಫಲಿತಾಂಶ: ಬಸ್ ಕಂಡಕ್ಟರ್ ಮಗ ಪ್ರೀತಮ್ ರಾಜ್ಯಕ್ಕೆ ಟಾಪರ್!

ಉಡುಪಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಪ್ರೀತಮ್ ಪೂಜಾರಿ ಸೇರಿ ಒಟ್ಟು ಏಳು ಮಂದಿ ಗರಿಷ್ಠ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆಪ್ರೀತಮ್ ಬಿದ್ಕಲ್ಕಟ್ಟೆ ನಿವಾಸಿ ಗಣಪತಿ ಪೂಜಾರಿ-ನಾಗರತ್ನಾ ದಂಪತಿಯ ಇಬ್ಬರ ಮಕ್ಕಳ ಪೈಕಿ ಹಿರಿಯ ಪುತ್ರ. ತಂದೆ ಗಣಪತಿ ಅವರು ಶ್ರೀ […]

ಎ.26ಕ್ಕೆ ಉದ್ಯಾವರದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮ

ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮವು ಇದೇ ಎ.26ರಂದು ಸಂಜೆ 5 ಗಂಟೆಗೆ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾಪು […]

SSLC ಪರೀಕ್ಷೆ ಫಲಿತಾಂಶ ಪ್ರಕಟ: ದ.ಕ. ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ

ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು. ಎಸ್​ಎಸ್​ಎಲ್​ಸಿ ಫಲಿತಾಂಶ: 7 ಮಂದಿ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಶಂಕರನಾರಾಯಣ ಶಾಲೆಯ ಪ್ರೀತಂ ಜಿ. ಪೂಜಾರಿ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ […]