ಬಿಜೆಪಿ ಮಾಜಿ ನಾಯಕನ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ: ಸಂತ್ರಸ್ತ ಯುವತಿಗೆ ಪ್ರತೀ ತಿಂಗಳು ರೂ.75 ಸಾವಿರ ನೀಡಲು ಕೋರ್ಟ್ ಆದೇಶ

ಮಂಗಳೂರು: ಮದುವೆಯಾಗುವ ಭರವಸೆ ನೀಡಿ ಯುವತಿಯನ್ನು ನಂಬಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆರೋಪಿ ಕೃಷ್ಣ ಜೆ. ರಾವ್ ಅವರು ಸಲ್ಲಿಸಿದ್ದ ಪ್ರಕರಣ ರದ್ದುಪಡಿಸುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದೆ. ಆದರೆ, ಈ ತಡೆಯಾಜ್ಞೆಯು ನ್ಯಾಯಾಲಯ ವಿಧಿಸಿರುವ ಒಂದು […]

ಕುಂದಾಪುರ: ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ- ಇಬ್ಬರು ಕಳ್ಳರ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ […]

ಡಾ.ಕೆ. ಎಂ. ರಾಘವ ನಂಬಿಯಾರ್ ಗೆ ಪಾರ್ತಿಸುಬ್ಬ ಪ್ರಶಸ್ತಿ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಸಂಶೋಧಕ, ಪ್ರಸಂಗಕರ್ತ ಹಾಗೂ ಭಾಗವತ ಉಡುಪಿ ಇಂದ್ರಾಳಿಯ ಡಾ.ಕೆ. ಎಂ. ರಾಘವ ನಂಬಿಯಾರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 1 ಲಕ್ಷ ರೂ., ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿದೆ. ಮೇ 3ರಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿರುವ 2025ನೇ ಸಾಲಿನ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ನಂಬಿಯಾರ್ ಅವರನ್ನು ಸನ್ಮಾನಿಸಲಾಗುವುದು […]

ಬಿಪಿಸಿಎಲ್‌ನಲ್ಲಿ ಬಂಪರ್ ಉದ್ಯೋಗಾವಕಾಶ!

ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಕಂಪೆನಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 250ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 17 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ ಅಸೋಸಿಯೇಟ್ ಎಕ್ಸಿಕ್ಯೂಟಿವ್: ಈ ಹುದ್ದೆಗೆ ಆಯ್ಕೆಯಾದವರಿಗೆ ₹40,000 ರಿಂದ ಆರಂಭವಾಗಿ ಗರಿಷ್ಠ ₹1,40,000 ವರೆಗೆ ವೇತನ ದೊರೆಯುತ್ತದೆ. ಜೂನಿಯರ್ ಎಕ್ಸಿಕ್ಯೂಟಿವ್: ಈ ತಾಂತ್ರಿಕ ಹುದ್ದೆಗಳಿಗೆ ₹30,000 ರಿಂದ ₹1,20,000 ವರೆಗೆ ಮಾಸಿಕ ಸಂಭಾವನೆ ಇರಲಿದೆ. ಸಂಬಳದ ಜೊತೆಗೆ ವೈದ್ಯಕೀಯ ಸೌಲಭ್ಯ, ರಜೆ ಭತ್ಯೆ […]

ಭಾರತದಲ್ಲಿ 10 ವರ್ಷ ಪೂರೈಸಿರೋ ಈ ಮೊಬೈಲ್ ಕಂಪನಿ, ಗ್ರಾಹಕರಿಗೆ ಬರೋಬ್ಬರಿ “ರಿಪ್ಲೇಸ್‌ಮೆಂಟ್ ಆಫರ್” ಘೋಷಿಸಿದೆ!

ಈಗ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಯ್ತು ಅಂದ್ರೆ ಅದನ್ನು ಸರಿಮಾಡಿಸೋದೇ ಒಂದು ದೊಡ್ಡ ತಲೆಬಿಸಿಯ ಕೆಲಸ. ಈ ಮಧ್ಯೆ ಭಾರತದಲ್ಲಿ 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಐಟೆಲ್ ಕಂಪನಿ, ತನ್ನ ಗ್ರಾಹಕರಿಗೆ ವಿಶೇಷ ಉಡುಗೊರೆಯಾಗಿ ಫೀಚರ್ ಫೋನ್‌ಗಳ ಮೇಲೆ ಒಂದು ವರ್ಷದ ‘ಕೌಂಟರ್ ರಿಪ್ಲೇಸ್‌ಮೆಂಟ್’ ಆಫರ್ ಅನ್ನು ಘೋಷಿಸಿದೆ. ಈ ಆಫರ್‌ನಡಿ, ಫೋನ್‌ನಲ್ಲಿ ಯಾವುದೇ ಉತ್ಪಾದನಾ ದೋಷ ಕಂಡುಬಂದರೆ ರಿಪೇರಿ ಮಾಡುವ ಬದಲು ನೇರವಾಗಿ ಹೊಸ ಫೋನ್ ನೀಡಲಾಗುತ್ತದೆ. ಕಡಿಮೆ ಬೆಲೆ, ಉತ್ತಮ ಗುಣಮಟ್ಟ ಮತ್ತು […]