ರಾಜ್ಯದಲ್ಲಿ ತೀವ್ರ ಉಷ್ಣಾಂಶದ ಏರಿಕೆ: ಆರೋಗ್ಯ ಇಲಾಖೆ ಎಚ್ಚರಿಕೆ! ಸಾರ್ವಜನಿಕರಿಗೆ ನೀಡಿದ ಸೂಚನೆಗಳೇನು?

ಕರ್ನಾಟಕದಲ್ಲಿ ಈ ಬಾರಿ ಬಿಸಿಲಿನ ತೀವ್ರತೆ ಗಣನೀಯವಾಗಿ ಹೆಚ್ಚಾಗಿದೆ. ಹಲವರು ಇಂತಹ ಉಷ್ಣತೆಯನ್ನು ಹಿಂದೆ ಅನುಭವಿಸಿಲ್ಲ ಎನ್ನುವ ಮಟ್ಟಿಗೆ ಪರಿಸ್ಥಿತಿ ಬದಲಾಗಿದೆ. ಕೆಲ ಪ್ರದೇಶಗಳಲ್ಲಿ ಉಷ್ಣಾಂಶವು ಉತ್ತರ ಭಾರತದ ಮಟ್ಟವನ್ನೇ ಮೀರಿಸುವಂತಾಗಿದೆ.ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಹಾಗೂ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಸೂಚಿಸಿದೆ. ಹೀಟ್ ಸ್ಟ್ರೋಕ್ ನಿಯಂತ್ರಣಕ್ಕೆ ವಿಶೇಷ ಕ್ರಮಗಳು ಆರೋಗ್ಯ ಇಲಾಖೆ ನೀಡಿರುವ ಪ್ರಮುಖ ನಿರ್ದೇಶನಗಳು: ಸಾರ್ವಜನಿಕರಿಗೆ ನೀಡಿದ ಸೂಚನೆಗಳೇನು? ಜಿಲ್ಲಾವಾರು ಉಷ್ಣಾಂಶ (ಗರಿಷ್ಟ) ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನೇ ದಿನೇ ಹೆಚ್ಚುತ್ತಿರುವುದರಿಂದ, […]

ಜಿಲ್ಲೆಯಲ್ಲಿ ಪ್ರಾರಂಭಿಸಲಾದ ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಭಾರತದ ಜ್ಞಾನ ಸಂಪತ್ತನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶದಿಂದ ರಾಷ್ಟ್ರಾದ್ಯಂತ ಇರುವ ಹಸ್ತಪ್ರತಿಗಳನ್ನು ಸಂರಕ್ಷಿಸುವ ಉದ್ದೇಶದೊಂದಿಗೆ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯ ಜಿಲ್ಲೆಯಲ್ಲಿ ಈಗಾಗಲೇ ಪ್ರಾರಂಭವಾಗಿದೆ. ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಎನ್.ಐ. ಸಿ ಹಾಲ್ ನಲ್ಲಿ, ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತ ಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ […]

ವರನಟ ಡಾ.ರಾಜ್ ಕುಮಾರ್ ಅವರ ಬದುಕು ಅನುಕರಣೆ ಮಾಡುವುದು ಸೂಕ್ತ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ಕನ್ನಡದ ವರನಟ ಡಾ.ರಾಜ್‌ಕುಮಾರ್ ಜಯಂತಿ ಒಂದು ಅಪರೂಪದ ಕಾರ್ಯಕ್ರಮ. ಒಬ್ಬ ಚಿತ್ರ ನಟನ ಜಯಂತಿ ಕಾರ್ಯಕ್ರಮವನ್ನು ಆಚರಿಸುವುದು ದೇಶದಲ್ಲೇ ಅತ್ಯಂತ ಅಪೂರ್ವವಾಗಿದೆ. ರಾಜ್‌ಕುಮಾರ್ ಅವರು ಕೇವಲ ನಟ ಮಾತ್ರವಲ್ಲ, ಅವರೊಬ್ಬ ಸರಳ-ಸಜ್ಜನ ವ್ಯಕ್ತಿ. ಸರಳತೆಯಿಂದ ಅವರು ಬದುಕಿದ ರೀತಿ ಅನುಕರಣೆ ಮಾಡುವುದು ಯೋಗ್ಯ. ಒಬ್ಬ ನಟನಾಗಿಯೂ ಸಮಾಜಕ್ಕೆ ಕೊಡುಗೆ ನೀಡಬಹುದು ಎಂದು ತೋರಿಸಿಕೊಟ್ಟ ಅವರ ಮಾನವೀಯ ಮೌಲ್ಯಗಳು ಜನರಿಗೆ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಜಯಂತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. […]