ಬರಿದಾಗುತ್ತಿದೆ ಅಂತರ್ಜಲ: ಕರಾವಳಿಗರಿಗೆ “ಹಾಟ್” ನ್ಯೂಸ್! ಮುಂದಿದೆ ಸಂಕಷ್ಟ?

ದಕ್ಷಿಣ ಕನ್ನಡದಲ್ಲಿ ಬಿಸಿಲಿನ ತೀವ್ರತೆ: ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರಿಗೆ ಆತಂಕ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈ ಬಾರಿ ಪರಿಸ್ಥಿತಿ ತೀವ್ರವಾಗಿ ಬದಲಾಗಿದೆ. 35–36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಸಿಯುತ್ತಿದೆ ಅಂತರ್ಜಲ, ಬರಿದಾಗುತ್ತಿವೆ ಬಾವಿಗಳು ಜಿಲ್ಲೆಯ ಹಲವು ಭಾಗಗಳಲ್ಲಿ, ವಿಶೇಷವಾಗಿ ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ, ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದೆ. ಎಂದಿಗೂ ನೀರಿನಿಂದ […]
ಉಡುಪಿ- ದ.ಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ, ಪರಿಸರ, ಅರಣ್ಯ ನಾಶದಿಂದ ಭವಿಷ್ಯ ಘೋರ ! ವರದಿ ಹೇಳಿದ್ದೇನು?

ಉಡುಪಿ/ದ.ಕ: ರಾಜ್ಯದ ಅತ್ಯಧಿಕ ಮಳೆಯ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಈ ಬಾರಿ ಪರಿಸ್ಥಿತಿ ಭೀಕರವಾಗಿದೆ. ಹೆಸರಿಗೆ ಸ್ಮಾರ್ಟ್ ಸಿಟಿ ಎಂದು ಕರೆಸಿಕೊಳ್ಳುತ್ತಿರುವ ಮಂಗಳೂರು ಮತ್ತು ಇಡೀ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಅಲ್ಲದೇ ಸಾಮಾನ್ಯವಾಗಿ ಮಳೆಯ ಸಮೃದ್ಧಿಯಿಂದ ಪ್ರಸಿದ್ಧಿಯಾಗಿರುವ ದ.ಕ ಜಿಲ್ಲೆಯಲ್ಲಿ ಈಗ ಬಿಸಿಲಿನ ತೀವ್ರತೆ ಹೆಚ್ಚಾಗಿ ಜನರನ್ನು ಕಂಗೆಡಿಸಿದೆ. ನೀರಿನ ಮೂಲಗಳೇ ಮಾಯ:ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ತಾಪಮಾನ 35ರಿಂದ 36 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಿದ್ದು, ಅದರ ಪರಿಣಾಮವಾಗಿ […]
ಕುಂದಾಪುರ: ಆರು ತಿಂಗಳ ಹಿಂದೆ ಇಟ್ಟಿದ್ದ ಬೋನಿಗೆ ಬಿತ್ತು ಹೆಣ್ಣುಚಿರತೆ!

ಕುಂದಾಪುರ: ಉಳ್ಳೂರು-74 ಗ್ರಾಮದ ಯಡಹಕ್ಲು ಪ್ರದೇಶದಲ್ಲಿ ಆರು ತಿಂಗಳ ಹಿಂದೆ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಹೆಣ್ಣು ಚಿರತೆಯೊಂದು ಬಿದ್ದಿದ್ದು ಗ್ರಾಮಸ್ಥರಲ್ಲಿ ಮೂಡಿದ್ದ ಆತಂಕಕ್ಕೆ ತೆರೆ ಬಿದ್ದಿದೆ. ಕಳೆದ ಹಲವು ತಿಂಗಳಿಂದ ಯಡಹಕ್ಲು ಸುತ್ತಮುತ್ತ 2–3 ಚಿರತೆಗಳು ರಾತ್ರಿ ವೇಳೆ ಸಂಚರಿಸುತ್ತಿದ್ದವು. ಇದರಿಂದ ಜನರು ಭಯಭೀತರಾಗಿದ್ದು, ಸ್ಥಳೀಯ ನಿವಾಸಿ ರತ್ನಾಕರ ನಾಯ್ಕ ಅವರು ಸಾಕಿದ್ದ ಕೋಳಿಗಳು ಹಾಗೂ ಸಾಕು ನಾಯಿಗಳು ಚಿರತೆಯ ಬಲಿಯಾಗಿದ್ದವು. ಈ ಹಿನ್ನೆಲೆಯನ್ನು ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅವರ ಮನೆಯ ಅಂಗಳದ […]
ದ.ಕ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು/ಉಡುಪಿ: ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಿಶ್ರ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು Indian Meteorological Department (ಐಎಂಡಿ) ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಮತ್ತು ತೇವಾಂಶ ಹೆಚ್ಚಾಗಿಯೇ ಮುಂದುವರಿಯಲಿದ್ದು, ಏಪ್ರಿಲ್ 26ರಿಂದ 29ರವರೆಗೆ ಗುಡುಗು-ಮಿಂಚಿನೊಂದಿಗೆ ಮಧ್ಯಮ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮಳೆಯ ಸಾಧ್ಯತೆ ಇದ್ದರೂ ಮಧ್ಯಾಹ್ನ ವೇಳೆಯಲ್ಲಿ ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದ್ದು, ಕೆಲವು ಭಾಗಗಳಲ್ಲಿ ಶಾಖದ ಅಲೆಗಳ ಲಕ್ಷಣಗಳು ಕಾಣಿಸಬಹುದು […]
ಮುಂದಿನ ದಿನಗಳಲ್ಲಿ ಅನ್ನ, ನೀರಿಗೂ ಹಾಹಾಕಾರ ಸೃಷ್ಟಿಯಾಗುತ್ತೆ: ಕೋಡಿಮಠ ಶ್ರೀಗಳ ಭವಿಷ್ಯವಾಣಿ!

ಮಂಡ್ಯ, ಏ.26: ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ದೇಶದ ಭವಿಷ್ಯದ ಕುರಿತು ಮತ್ತೆ ಎಚ್ಚರಿಕೆ ನೀಡಿದ್ದು, ಹವಾಮಾನ ವೈಪರಿತ್ಯದಿಂದ ಮುಂದಿನ ದಿನಗಳಲ್ಲಿ ಅನ್ನ-ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಅವರು, ಪ್ರಕೃತಿಯಲ್ಲಿ ಭಾರೀ ಏರುಪೇರುಗಳು ಕಾಣಿಸಿಕೊಂಡು, ದೇಶದ ಕೆಲ ಭಾಗಗಳಲ್ಲಿ ಅನ್ನ ಮತ್ತು ನೀರಿನ ಹಾಹಾಕಾರ ಉಂಟಾಗಬಹುದು ಎಂದು ಹೇಳಿದರು. ಹವಾಮಾನ ಬದಲಾವಣೆಯ ಪರಿಣಾಮವಾಗಿ ಅಪಮೃತ್ಯುಗಳ ಸಂಖ್ಯೆಯೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅವರು […]