ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಆಯೋಜಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ಪಂಚ ಗ್ಯಾರಂಟಿ ಯೋಜನೆ ಸಮಾವೇಶ”ದಲ್ಲಿ ಅವರು ಮಾತನಾಡಿದರು. ನಾನು ಸೋತವ, ವಿಧಾನಸಭೆಗೆ ಪ್ರವೇಶಿಸಲು ನನಗೆ ನೀವೇ ಅಧಿಕಾರ ಕೊಡಲಿಲ್ಲ. ಆದರೂ ಹೊಳೆಬೈಲಿನ ಗ್ರಾಮಸ್ಥರು ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿ ಶೌಚಾಲಯ ನಿರ್ಮಿಸಿಕೊಡುವ […]
ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯದಲ್ಲೇ ಬರಲಿದೆ BMTC–ಮೆಟ್ರೋ ಸ್ಮಾರ್ಟ್ ಕಾರ್ಡ್

ನಗರ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಒಂದೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ. ನಗರದಲ್ಲಿ ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ಮೆಟ್ರೋ ಹಾಗೂ ಬಿಎಂಟಿಸಿ ಬಸ್‌ಗಳನ್ನು ಬಳಸಿ ಸಂಚರಿಸುತ್ತಿದ್ದಾರೆ. ಆದರೆ, ಇಂದಿನ ವ್ಯವಸ್ಥೆಯಲ್ಲಿ ಎರಡಕ್ಕೂ ಬೇರೆ ಬೇರೆ ಟಿಕೆಟ್ ಅಥವಾ ಕಾರ್ಡ್ ಬಳಸಬೇಕಾದ ಅನಿವಾರ್ಯತೆ ಇದೆ. ಇದರಿಂದ ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿದ್ದು, ಸಮಯವೂ ವ್ಯರ್ಥವಾಗುತ್ತಿದೆ. ಈ ಸಮಸ್ಯೆಗೆ ಪರಿಹಾರವಾಗಿ, […]