ರಸಗೊಬ್ಬರ ಖರೀದಿಗೆ ಎಫ್.ಐ.ಡಿ ಕಡ್ಡಾಯ

ಉಡುಪಿ: ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್.ಐ.ಡಿ) ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದ್ದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಿoದ ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಪ್ರಮಾಣದ ಗೊಬ್ಬರವನ್ನು ಮಾತ್ರ ‘ಕೆ-ಕಿಸಾನ್’ ತಂತ್ರಾoಶದ ಮೂಲಕ ವಿತರಿಸಲಾಗುವುದು. ಈವರೆಗೆ ಫಾರ್ಮರ್ ಐಡಿ […]

ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಐ.ಟಿ.ಐ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೇ. 35 ರಷ್ಟು ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಅರ್ಜಿಯನ್ನು ಪಡೆದು, ಮೇ 18 ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದು […]

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದಲ್ಲಿ ಅತ್ಯುತ್ತಮ ಸಾಧನೆ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಎಪ್ರಿಲ್ 23, 24 ರಂದು ಕುಂದಾಪುರ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯೋಜಿಸಿದ್ದ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ಸಾವಿಷ್ಕರ್ – ೨೦೨೬ ರಲ್ಲಿ ಸಮಗ್ರ ಚಾಂಪಿಯಶಿಪ್ ಪ್ರಶಸ್ತಿ ಪಡೆದಿರುತ್ತಾರೆ.ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳಾದ ಗುರು ಗಣೇಶ್ ಎನ್ ಭಟ್, ಕಾಮಾಕ್ಷಿ ಜಿ ನಾಯಕ್, ನಾಗರಾಜ, ಸಾತ್ವಿಕ್ ಜೆ ಮತ್ತು ಸಂಜನಾ ಇವರು ಸಿನಿಕ್ಯಾಪ್ಚರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶಿನ್ ಲರ್ನಿಂಗ್ […]

ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ನಲ್ಲಿ ಶುರುವಾಗಿದೆ ಉದ್ಯೋಗಾಧಾರಿತ ಕೋರ್ಸ್ ಗಳಿಗೆ ಪ್ರವೇಶಾತಿ: ಅತ್ಯುತ್ತಮ ಸೌಲಭ್ಯಗಳ ಜೊತೆ ಪಡೀರಿ, ಗುಣಮಟ್ಟದ ಶಿಕ್ಷಣ

ಮಣಿಪಾಲ: ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಶುರುವಾಗಿದೆ. ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಪರಂಪರೆ ಹೊಂದಿರುವ ಈ ಸಂಸ್ಥೆ, ಗುಣಮಟ್ಟದ ಶಿಕ್ಷಣ ಹಾಗೂ ಆಧುನಿಕ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಭವಿಷ್ಯದ ಸುಂದರ ದಾರಿ ತೋರಿಸುತ್ತಿದೆ. 1985ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ, ಎಐಸಿಟಿಇ ಅನುಮೋದನೆ ಹೊಂದಿದ್ದು ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯ ಅಂಗಸಂಸ್ಥೆಯಾಗಿದೆ. ಕೈಗಾರಿಕಾ ಅವಶ್ಯಕತೆಗಳಿಗೆ ತಕ್ಕ ಪಠ್ಯಕ್ರಮ, ಅನುಭವೀ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಕೇಂದ್ರಿತ ಬೋಧನಾ ವಿಧಾನಗಳು ಸಂಸ್ಥೆಯ ವಿಶೇಷತೆಯಾಗಿವೆ. […]

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸಿದ ಉಡುಪಿ ಕೋರ್ಟ್

ಉಡುಪಿ: ಇತ್ತೀಚಿಗೆ ಕಾರ್ಕಳದಲ್ಲಿ ಸಂಚಲನ ಉಂಟುಮಾಡಿದ್ದ ಉದ್ಯಮಿ ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆಯಾಗಿದೆ‌. ಸುದೀಪ್‌ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್‌ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಶನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿಯೇ ಕಾರಣ ಎಂದು ಸುದೀಪ್‌ ತಂದೆ ದಾಮೋದರ್ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸೌಮ್ಯ ಶೆಟ್ಟಿಯನ್ನು ಎ. […]