ಕೃಷಿ ಹಾಗೂ ಪಶು ವಿಜ್ಞಾನ ಪ್ರಾಯೋಗಿಕ ಪರೀಕ್ಷೆ ಅವಧಿ ವಿಸ್ತರಣೆ

ಉಡುಪಿ: ರೈತರ ಮಕ್ಕಳಿಗಾಗಿ ಮೀಸಲಿರುವ ಕೃಷಿ ವಿಜ್ಞಾನ ಹಾಗೂ ಪಶು ವೈದ್ಯಕೀಯ ವಿಜ್ಞಾನ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗಾಗಿ ಪ್ರಾಯೋಗಿಕ ಪರೀಕ್ಷೆಯು ಮೇ 10 ರಂದು ಬೆಳಿಗ್ಗೆ 9.00 ಗಂಟೆಗೆ ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ ಮತ್ತು ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಅರ್ಹ ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷೆಗೆ ಹಾಜರಾಗಬಹುದು. ಕೃಷಿಕರ ಕೋಟಾದಲ್ಲಿ ಈಗಾಗಲೇ ಸಿ.ಇ.ಟಿ ಅರ್ಜಿ ಸಲ್ಲಿಸಿ, ಅನರ್ಹರಾಗಿರುವ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು ಸಲ್ಲಿಸಲು ಮತ್ತು ಹೊಸದಾಗಿ […]

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಯಾಗಿ ಬೋಧನೆ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ವಿಷಯಗಳು: ಅನ್ವಯಿಕ ಕಲೆ, ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಛಾಯಾಗ್ರಹಣ, ಕಲಾ ಇತಿಹಾಸ, ಕನ್ನಡ, ಇಂಗ್ಲಿಷ್, ಭಾರತೀಯ ಸಂವಿಧಾನ, ಪರಿಸರ ಅಧ್ಯಯನ. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ತಮ್ಮ ಬಯೋಡೇಟಾ ಮತ್ತು ಅಗತ್ಯ ದಾಖಲೆಗಳೊಂದಿಗೆ (ವಿದ್ಯಾರ್ಹತೆ, ಅನುಭವ) ಕಾವಾ ಕಚೇರಿಗೆ […]

ವಸತಿ/ನಿವೇಶನ ರಹಿತರ ಸೇರ್ಪಡೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 2018 ರ ವಸತಿ ರಹಿತ ಮತ್ತು ನಿವೇಶನ ರಹಿತರ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು ಮೇ 15 ರ ವರೆಗೆ ಅಂತಿಮ ಕಾಲಾವಕಾಶ ಕಲ್ಪಿಸಲಾಗಿದ್ದು, ಅರ್ಹ ಫಲಾನುಭವಿಗಳು ಅರ್ಜಿಯನ್ನು ಸಮೀಪದ ಗ್ರಾಮ ಪಂಚಾಯತ್ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ: ಮೇ 5 ರಂದು ನೇರ ಸಂದರ್ಶನ

ಉಡುಪಿ: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ್‌ನ ಮನೋಹರ್ ಭವನ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಡಿಪ್ಲೋಮಾ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ […]

ಕಾಪು: ಭೀಕರ ಅಪಘಾತ- ಸ್ಕೂಟರ್ ಸವಾರ ಮೃತ್ಯು

ಉಡುಪಿ: ಸ್ಕಾರ್ಪಿಯೋ ಕಾರು, ಟ್ಯಾಂಕರ್ ಮತ್ತು ಸ್ಕೂಟರ್ ನಡುವಿನ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸಹ ಸವಾರ ಮೃತಪಟ್ಟ ಘಟನೆ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದ ಬಳಿ ಗುರುವಾರ ಸಂಜೆ ಸಂಭವಿಸಿದೆ.ಮೃತರನ್ನು ವಿಶ್ವನಾಥ ಕೆ.ಪುತ್ರನ್ ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಸಂತೋಷ್ ಎನ್. ಅಮೀನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೈಪುಂಜಾಲು ನಿವಾಸಿ ಸಂತೋಷ್ ಅಮೀನ್ ಅವರು ತಮ್ಮ ಸ್ನೇಹಿತ ವಿಶ್ವನಾಥ ಅವರೊಂದಿಗೆ ಸ್ಕೂಟರ್‌ನಲ್ಲಿ ಕಾಪುವಿಗೆ ಹೋಗುತ್ತಿದ್ದರು. ಸಂಜೆ 5:30ರ ಸುಮಾರಿಗೆ ಪಾಂಗಾಳದ ಬಳಿ […]