ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಿದಾಗ ರೋಗಿಗಳಿಗೆ ಅಗತ್ಯ ಚಿಕಿತ್ಸಾ ನೆರವುಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ […]
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿರಿಯ ನಟ ಶಶಿಕುಮಾರ್ ಭೇಟಿ

ಉಡುಪಿ: ಕನ್ನಡ ಚಲನಚಿತ್ರ ಖ್ಯಾತ ಹಿರಿಯ ನಟ ಶಶಿಕುಮಾರ್ ಮೇ 1ರಂದು ಉಚ್ಚಂಗಿ ಸಹಿತ ಮಾರಿಯಮ್ಮನ ಕ್ಷೇತ್ರ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ಈ ಸಂದರ್ಭ ಮಾತನಾಡಿದ ಅವರು ಮಾರಿಯಮ್ಮನ ಸ್ವರ್ಣ ಗದ್ದುಗೆ ಮತ್ತು ವಿವಿಧ ಶೈಲಿಯ ಕಲಾತ್ಮಕ ಕೆತ್ತನೆಗಳನ್ನು ಕಂಡು ಈ ಕೆಲಸವನ್ನೆಲ್ಲ ಕಾಪುವಿನ ಅಮ್ಮನ ಮಾಡಿಸಿಕೊಂಡಿದ್ದಾರೆ, ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದರು. ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ […]
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಅಂಜರಾಡಿ ನಿವಾಸಿ ಭಾಸ್ಕರ (66) ಎಂಬ ವ್ಯಕ್ತಿಯು ಏಪ್ರಿಲ್ 18 ರಂದು ಬೆಳಗ್ಗೆ 8.30 ರ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಮನೆಯವರಲ್ಲಿ ಹೇಳಿ ಹೋದವರು ಇದುವರೆಗೂ ಮನೆಗೆ ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 155 ಸೆಂ.ಮೀ. ಎತ್ತರ, ಗೋಧಿ ಮೈಬಣ್ಣ, ಕೋಲುಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡಬಲ್ಲವರಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ […]
ಗ್ರಾಮೀಣ ಶಿಕ್ಷಣದಲ್ಲಿ ಶ್ರೇಷ್ಠತೆ: ಮದರ್ ತೆರೆಸಾ ಸಂಸ್ಥೆಗೆ ರಾಷ್ಟ್ರೀಯ ಗೌರವ “ಇಂಡಿಯನ್ ಎಜುಕೇಷನ್ ಅವಾರ್ಡ್ಸ”

ಕುಂದಾಪುರ: ತಾಲ್ಲೂಕಿನ ಶಂಕರನಾರಾಯಣದ ಗ್ರಾಮೀಣ ಪ್ರದೇಶದಲ್ಲಿ ಕಳೆದ 28 ವರ್ಷಗಳಿಂದ ಶಿಕ್ಷಣ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಗೆ 2026ರ “ಇಂಡಿಯನ್ ಎಜುಕೇಷನ್ ಅವಾರ್ಡ್ಸ”ನಲ್ಲಿ “ಗ್ರಾಮೀಣ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಯಲ್ಲಿ ಶ್ರೇಷ್ಠ ಶಾಲೆ ಮತ್ತು ಪಿಯು ಕಾಲೇಜು” ಎಂಬ ಗೌರವ ಪ್ರಶಸ್ತಿ ಲಭಿಸಿದೆ. ಉಡುಪಿ ಜಿಲ್ಲಾ ಮಟ್ಟದಲ್ಲಿ ಈ ಗೌರವವನ್ನು ಪಡೆದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಈ ಸಂಸ್ಥೆ ಪಾತ್ರವಾಗಿದೆ. Anyelp Groups ವತಿಯಿಂದ ಆಯೋಜಿಸಲಾದ ಈ ಭವ್ಯ ಸಮಾರಂಭವು ಏಪ್ರಿಲ್ 08 […]
ರಂಗಭೂಮಿ ಆನಂದೋತ್ಸವ ಸಂಪನ್ನ: ಸಾಯಿರಾಧ ಮನೋಹರ್ ಶೆಟ್ಟಿ ಅವರಿಗೆ ತಲ್ಲೂರ್ಸ್ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ

ಉಡುಪಿ: ನಾಟಕ ರಂಗಭೂಮಿ ಮೊದಲಾದ ರಂಗಕಲೆಗಳಿಂದ ಸುಸಂಸ್ಕೃತ ಸಮಾಜದ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಇಂತಹ ಕಲೆಗಳಿಗೆ ಪ್ರೋತ್ಸಾಹ ನೀಡುವವರನ್ನು ಗುರುತಿಸಿ ಗೌರವಿಸುವುದು ಉತ್ತಮ ಬೆಳವಣಿಗೆ ಎಂದು ಮಣಿಪಾಲ ಮಾಹೆಯ ಸಹಕುಲಾಧಿಪತಿ, ಡಾ. ಎಚ್ಎಸ್ ಬಲ್ಲಾಳ್ ಹೇಳಿದರು. ಅವರು ಶುಕ್ರವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ಸಂಸ್ಥೆ ವತಿಯಿಂದ ಸಂಸ್ಥೆಯ ಸ್ಥಾಪಕ ದಿ. ಕುತ್ಪಾಡಿ ಆನಂದ ಗಾಣಿಗ ಅವರ ಸ್ಮರಣಾರ್ಥ ಹಮ್ಮಿಕೊಂಡ ಎರಡು ದಿನಗಳ ರಂಗಭೂಮಿ ಆನಂದೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಉಡುಪಿಯ […]