ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ,ಮೊದಲೇ ತೆರೆದಿತ್ತು ಮತಪೆಟ್ಟಿಗೆಯ ಸೀಲ್, ಗಂಭೀರ ಆರೋಪ!

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇಂದು ಚಿಕ್ಕಮಗಳೂರಿನ ಐಡಿಎಸ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರಂಭವಾಗಿದೆ. ಒಟ್ಟು 1,822 ಅಂಚೆ ಮತಗಳನ್ನು ಮರು ಎಣಿಕೆಗೆ ಒಳಪಡಿಸಲಾಗುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮತ ಎಣಿಕೆ ಆರಂಭಕ್ಕೂ ಒಂದು ಗಂಟೆ ಮುನ್ನವೇ ಮತಪೆಟ್ಟಿಗೆಯ ಸೀಲ್ ತೆರೆಯಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಶಾಸಕನ ಏಜೆಂಟ್ ಸೇರಿದಂತೆ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ಪ್ರತಿನಿಧಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂಬಂಧ […]