ಬಾರಕೂರಿನ ಗತವೈಭವ ಮತ್ತೆ ಮರುಕಳಿಸಲು ಕ್ರಮ: ಸಚಿವ ಹೆಚ್.ಕೆ ಪಾಟೀಲ್

ಉಡುಪಿ: ಬಾರಕೂರಿನ ಐತಿಹಾಸಿಕ ಮಹತ್ವವುಳ್ಳ ಕೋಟೆ-ಕೊತ್ತಲ, ಗುಡಿ ಗೋಪುರ ಸೇರಿದಂತೆ ಇಲ್ಲಿನ ಗತವೈಭವವನ್ನು ಸಾರುವ ಆಸ್ತಿಗಳನ್ನು ಸಂರಕ್ಷಿಸಿ, ಅವುಗಳ ಮೂಲಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪುನರುಜ್ಜೀವನ ಗೊಳಿಸಿ, ಇಲ್ಲಿನ ಭವ್ಯ ಪರಂಪರೆಯನ್ನು ಹಾಗೂ ಈ ನಾಡನ್ನು ಆಳಿದ ಅಳುಪರ ಆಡಳಿತ ವ್ಯವಸ್ಥೆ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ ಪಾಟೀಲ್ […]

ತೋಟಗಾರಿಕೆ ಇಲಾಖೆ ವತಿಯಿಂದ ಬಿಸಿಗಾಳಿಗೆ ರೈತರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು

ಉಡುಪಿ: ಇತ್ತೀಚಿನ ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಪರಿಣಾಮವಾಗಿ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿ ಏರಿಕೆಯಾಗುತ್ತಿದೆ. ಈ ಬಿಸಿಗಾಳಿ ಪರಿಸ್ಥಿತಿ ತೋಟಗಾರಿಕೆ ಬೆಳೆಗಳ ಬೆಳವಣಿಗೆ, ಹೂವು-ಹಣ್ಣು ಕಚ್ಚುವಿಕೆ, ಹಿಡುವಿಕೆ ಮತ್ತು ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಂತ ಅಗತ್ಯವಾಗಿದೆ. ಹೆಚ್ಚಿನ ತಾಪಮಾನದಿಂದ ಗಿಡಗಳಲ್ಲಿ Transpiration Loss ವೇಗವಾಗಿ ಹೆಚ್ಚುತ್ತದೆ. ಇದರಿಂದ ಸಸ್ಯಗಳಲ್ಲಿ ತೇವಾಂಶ ಕೊರತೆ ಉಂಟಾಗಿ, ಗಿಡ ಒಣಗುವಿಕೆ ಸಂಭವಿಸುತ್ತದೆ. ಬಿಸಿಗಾಳಿಯಿಂದ Photosynthesis ಪ್ರಕ್ರಿಯೆ ಕುಂಠಿತವಾಗಿ ಸಸ್ಯಗಳಲ್ಲಿ ಆಹಾರ ಉತ್ಪಾದನೆ ಕಡಿಮೆಯಾಗುತ್ತದೆ. […]

ಉಡುಪಿ: ಮಕ್ಕಳ ಜೊತೆ ಹಿರಿಯ ನಟ ಪ್ರಕಾಶ್ ರಾಜ್ ಡ್ಯಾನ್ಸ್ – ವಿಡಿಯೋ ವೈರಲ್

ಉಡುಪಿ: ಕರಾವಳಿಯಲ್ಲಿ ನಟ ಪ್ರಕಾಶ್ ರಾಜ್ ನಿರ್ದಿಗಂತ ಹುಟ್ಟು ಹಾಕಿದ್ದಾರೆ. ರಂಗ ಚಟುವಟಿಕೆಗೆಂದೇ ಈ ಸಂಸ್ಥೆ ತಲೆ ಎತ್ತಿದ್ದು ಕಳೆದ ಕೆಲವು ದಿನಗಳಿಂದ ಇಲ್ಲಿ ರಂಗ ಚಟುವಟಿಕೆ ನಡೆಯುತ್ತಿದೆ. ಉಡುಪಿ ಬೆಳ್ಳಂಪಳ್ಳಿಯ ನಿರ್ದಿಗಂತದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ‘ಕಾವು ಗೂಡು-2026’ ಇದರ ಸಮಾರೋಪ ಸಮಾರಂಭದಲ್ಲಿ ಪ್ರಕಾಶ್ ರಾಜ್ ಮಕ್ಕಳ ಜೊತೆ ಮಗುವಾಗಿ ಕುಣಿದದ್ದು ವೈರಲ್ ಆಗುತ್ತದೆ. ಈ ಶಿಬಿರವನ್ನು ಮಕ್ಕಳಿಗಾಗಿಯೇ ಆಯೋಜಿಸಲಾಗಿದ್ದು ಸಮಾರೋಪದಲ್ಲಿ ಖುದ್ದು ಭಾಗವಹಿಸಿ ಎಲ್ಲವನ್ನೂ ಮರೆತು ಮಕ್ಕಳ ಜೊತೆ ಕುಣಿದದ್ದು ಅಲ್ಲಿದ್ದ ಮಕ್ಕಳು […]

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ -1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ […]

ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ

ಉಡುಪಿ: ಉಡುಪಿ–ಕೊಕ್ಕರ್ಣೆ ಮಾರ್ಗದಲ್ಲಿ ಬ್ರಹ್ಮಾವರ, ಮಟಪಾಡಿ–ನೀಲಾವರ ಮೂಲಕ ಸಂಚರಿಸಲಿರುವ ನೂತನ ಸರ್ಕಾರಿ ಸಾರಿಗೆ ಬಸ್ಸಿಗೆ ಮಟಪಾಡಿ ಗ್ರಾಮದಲ್ಲಿ ಸಂಭ್ರಮದ ಸ್ವಾಗತ ಕೋರಲಾಯಿತು. ಫ್ರೆಂಡ್ಸ್ ಮಟಪಾಡಿ ಯೂಥ್ ಕ್ಲಬ್ ವತಿಯಿಂದ ಗ್ರಾಮಕ್ಕೆ ಆಗಮಿಸಿದ ಬಸ್ಸಿಗೆ ಹೂವಿನ ಹಾರ ಹಾಕಿ, ಆರತಿ ಬೆಳಗಿ, ತೆಂಗಿನಕಾಯಿ ಒಡೆದು ಹಾಗೂ ಪಟಾಕಿ ಸಿಡಿಸಿ ಭವ್ಯ ಸ್ವಾಗತ ನೀಡಲಾಯಿತು. ಇದೇ ವೇಳೆ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರಿಗೆ ತಂಪು ಪಾನೀಯ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಮಟಪಾಡಿ ಯೂಥ್ ಕ್ಲಬ್ ಅಧ್ಯಕ್ಷ ಚೇತನ್ ಜಿ ಪೂಜಾರಿ, ಪ್ರಧಾನ […]