ಇಂದಿನಿಂದ ಮತ್ತೆ ಮಳೆಯ ಮುನ್ಸೂಚನೆ: ಯಾವೆಲ್ಲಾ ಜಿಲ್ಲೆಗಳಲ್ಲಿ ತಂಪೆರೆಯಲಿದ್ದಾನೆ ವರುಣ?

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ಇದೀಗ ಕೊಂಚ ನೆಮ್ಮದಿ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಹಾಸನ, ಕೊಡಗು […]
ಉಡುಪಿಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲ್ಯಾಕ್ಸ್

ಉಡುಪಿ: ಉಡುಪಿ ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳಿಗ್ಗೆ 10ಗಂಟೆಗೆ ಸುಮಾರಿಗೆ ಶುರುವಾದ ಗುಡುಗು ಸಹಿತ ಮಳೆಯು ಎರಡು ತಾಸುಗಿಂತಲೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ನಗರ, ಸಂತೆಕಟ್ಟೆ, ಮಣಿಪಾಲ, ಅಲೆವೂರು, ಪರ್ಕಳ, ಮಲ್ಪೆ ಮೊದಲಾದ ಕಡೆಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಳಿಕ ಎಡಬಿಡದೆ ಸುರಿದ ಮಳೆಯು […]