ಮೂಡಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, ಸ್ಕೂಟರ್ ಸವಾರ ಗಂಭೀರ, ಹಲವರಿಗೆ ಗಾಯ

ಮೂಡುಬಿದಿರೆ: ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಸಂಚರಿಸುತ್ತಿದ್ದ ‘ವಿಶಾಲ್’ ಖಾಸಗಿ ಬಸ್ ಬನ್ನಡ್ಕದ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ಸಂಭವಿಸಿದೆ. ಅಪಘಾತದ ವೇಳೆ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಸಹ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಹಾಗೂ ಸಾರ್ವಜನಿಕರು ಗಾಯಾಳುಗಳ ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ […]

ಕೊನೆಗೂ ಮ್ಯಾಜಿಕ್ ನಂಬರ್ ಗೆದ್ದು ಬೀಗಿದ ದಳಪತಿ, 121 ಶಾಸಕರ ಬಲ, ಶೀಘ್ರದಲ್ಲಿ ತಮಿಳುನಾಡಿನ ಸಿಎಂ ಪಟ್ಟವೇರಲಿದ್ದಾರೆ ವಿಜಯ್ ?

ಚೆನ್ನೈ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುವ ಕ್ಷಣ ಸಮೀಪಿಸಿದೆ. ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ರಚನೆಯ ಹಕ್ಕು ಮಂಡಿಸಲು ಇಂದು ಚೆನ್ನೈನ ರಾಜಭವನಕ್ಕೆ ಆಗಮಿಸಿದೆ. ಚೊಚ್ಚಲ ವಿಧಾನಸಭಾ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಸಂಚಲನ ಮೂಡಿಸಿದ್ದ ಟಿವಿಕೆಗೆ ಇದೀಗ ಮಿತ್ರಪಕ್ಷಗಳ ಬೆಂಬಲದೊಂದಿಗೆ ಒಟ್ಟು 121 ಶಾಸಕರ ಬಲ ದೊರೆತಿದ್ದು, ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ. ಟಿವಿಕೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ 5 ಶಾಸಕರು, ಭಾರತೀಯ ಕಮ್ಯುನಿಸ್ಟ್ ಪಕ್ಷನ 2 […]

ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಗಡಿ ಗುರುತಿಸುವಿಕೆಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವ ಅವಧಿ ಮೇ 8ರಂದು ಅಂತ್ಯಗೊಂಡಿದ್ದು, ಶೀಘ್ರದಲ್ಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು. ನಂತರ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನೂ ನಡೆಸಲಾಗುವುದು ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ […]

IFS ಪರೀಕ್ಷೆಯಲ್ಲಿ ಭರ್ಜರಿ ಸಾಧನೆ ಮಾಡಿದ ಕನ್ನಡದ ಹುಡುಗರು, ಬಸವರಾಜ ಕೆಂಪವಾಡ ದೇಶಕ್ಕೆ ಫಸ್ಟ್ ರ‍್ಯಾಂಕ್, ಮುಖ್ಯಮಂತ್ರಿ ಅಭಿನಂದನೆ

ಬೆಂಗಳೂರು: ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ಕನ್ನಡಿಗರು ಭರ್ಜರಿ ಸಾಧನೆ ಮಾಡಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಅಥಣಿ ತಾಲೂಕಿನ ಸವದಿಯ ಬಸವರಾಜ ಕೆಂಪವಾಡ ಅವರು ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದು ಅನನ್ಯ ಸಾಧನೆ ಮಾಡಿದ್ದಾರೆ. ಇದೇ ವೇಳೆ ದೀಕ್ಷಿತ್ ಎನ್. ಅವರು 14ನೇ ರ‍್ಯಾಂಕ್ ಪಡೆದು ರಾಜ್ಯದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಈ ಸಾಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಕನ್ನಡಿಗರ ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ […]

ಮಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಾವಕಾಶ: NMPAಯಲ್ಲಿ12 ಮ್ಯಾನೇಜರ್ ಹುದ್ದೆಗಳ ನೇಮಕಾತಿ, ಸಂಬಳ ಎಷ್ಟು? ಏನು ಅರ್ಹತೆ !

ಮಂಗಳೂರು: New Mangalore Port Authority ಅಡಿಯಲ್ಲಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಕೇಂದ್ರ ಸರ್ಕಾರದ ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎನ್‌ಎಂಪಿಎ ಇದೀಗ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 12 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಮಂಗಳೂರಿನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಚೀಫ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹಾಗೂ […]