ರಾಷ್ಟ್ರಸೇವೆಯ ಕನಸಿಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನಿಂದ ಬಲ: ಎನ್‌ಡಿಎಯಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣ

ಮೂಡುಬಿದಿರೆ: ಕೇಂದ್ರದ ಲೋಕಸೇವಾ ಆಯೋಗದ ಮೂಲಕ ನಡೆಯುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿ ರಾಷ್ಟçದ ಗಮನ ಸೆಳೆದಿದ್ದಾರೆ. ಭಾರತೀಯ ಸೇನೆ, ನೌಕಾಪಡೆ ಹಾಗೂ ವಾಯುಪಡೆಯ ಅಧಿಕಾರಿಗಳಾಗಲು ಎನ್‌ಡಿಎ ಪ್ರಮುಖ ಘಟ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಗೊಳಿಸುವ ಕಾರ್ಯವನ್ನು ಆಳ್ವಾಸ್ ಪದವಿಪೂರ್ವ ಕಾಲೇಜು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಾದ ವಿವೇಕ್ ಎ, ಅದ್ವೆöತ್ ವಿಕ್ರಾಂತ್ ಶೆಂಡೆ, ಅಮೋಘ್ ನಾಗರಾಜ್ ಬಿಲ್ಲೂರ್, ಮೊಹಮ್ಮದ್ ಯೂಸುಫ್ ನಿಸಾರ್ […]
ಕೊಡವೂರು: ಮೇ 14 -19 ಮಹಾ ರುದ್ರಯಾಗದ ಪ್ರಯುಕ್ತ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಚಾಲನೆ

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ನಡೆಯಲಿದ್ದು, ಇದರ ಪ್ರಯುಕ್ತ ಬೃಹತ್ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಇಂದು ಚಾಲನೆ ನೀಡಲಾಯಿತು. ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಬಿ ಕಾಂಚನ್ ರಿಬ್ಬನ್ ಕತ್ತರಿಸುವುದರ ಮೂಲಕ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಚಾಲನೆ ನೀಡಿದರು. ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಪ್ರತಿಭಾ ಪ್ರದರ್ಶನ […]
ಧಾರವಾಡದ ಅಪೂಸ್‌ಗೆ ವಿದೇಶಗಳಲ್ಲಿ ಭಾರೀ ಡಿಮ್ಯಾಂಡ್, ಸಿಂಗಾಪುರಕ್ಕೆ 2 ಟನ್ ರಫ್ತು, ರೈತರಿಗೆ ಭರ್ಜರಿ ಲಾಭ

ಬೆಂಗಳೂರು: ಪೇಡಾ ನಗರಿ ಧಾರವಾಡದ ಮಾವಿನ ಸುವಾಸನೆ ಇದೀಗ ವಿದೇಶಿಗರ ಮನಸೆಳೆಯುತ್ತಿದೆ. ಮಾವಿನಹಣ್ಣುಗಳ ರಾಜ ಎಂದೇ ಖ್ಯಾತಿಯಾಗಿರುವ ಅಪೂಸ್ ಮಾವು ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಂಡಿದ್ದು, ಧಾರವಾಡದ ಅಪೂಸ್ ಮಾವು ವಿದೇಶಿ ಗ್ರಾಹಕರ ಬಾಯಿ ಚಪ್ಪರಿಸುವಂತೆ ಮಾಡಿದೆ. ಈ ಬಾರಿ ಜಿಲ್ಲೆಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶದಲ್ಲಿ ಮಾವು ಬೆಳೆ ಬೆಳೆದಿದ್ದು, ಮಾರುಕಟ್ಟೆ ವಿಸ್ತರಣೆ ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಆದರೆ ಹವಾಮಾನ ವೈಪರೀತ್ಯದಿಂದ ನಿರೀಕ್ಷಿತ ಇಳುವರಿ ಸಿಗದೆ ರೈತರು ಸಂಕಷ್ಟ ಅನುಭವಿಸಿದ್ದರೂ, […]
ಕಾರ್ಕಳ: ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಕಾರ್ಕಳ: ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (CITU) ಮತ್ತು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮವು ಕಾರ್ಕಳದ ಸಿಐಟಿಯು ಕಚೇರಿಯಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಾಜ್ಯದಾದ್ಯಂತ ಬೀಡಿ ಕಾರ್ಮಿಕರಿಗೆ ಈ ಸ್ಮಾರ್ಟ್ ಕಾರ್ಡ್ ನೀಡುತ್ತಿದೆ. ಈ ಕಾರ್ಡ್ ಮೂಲಕ ಅಪಘಾತ ಪರಿಹಾರ ಮತ್ತು ಸಹಜ ಮರಣ ಪರಿಹಾರ ಸೌಲಭ್ಯಗಳು ದೊರೆಯುತ್ತವೆ. ಸಂಘದ ಮುಖಂಡ ಕವಿರಾಜ್ ಎಸ್. ಕಾಂಚನ್ ಅವರು ಮಾತನಾಡಿ, […]
ಮಂಗಳೂರು ರೈಲು ನಿಲ್ದಾಣದಲ್ಲಿ ಮನೆಕಳ್ಳನ ಬಂಧನ; ₹13 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಕುಖ್ಯಾತ ಆರೋಪಿಯನ್ನು ಬಂಧಿಸಿ, ಸುಮಾರು ₹13 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಂಞಗಾಡಿನ ಗಾರ್ಡ್ರವಲಪ್ಪಿಲ್ ನಿವಾಸಿ ಆಶಿಫ್ ಪಿ.ಎಚ್. (25) ಎಂದು ಗುರುತಿಸಲಾಗಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ 2/3ನೇ ಪ್ಲಾಟ್‌ಫಾರ್ಮ್‌ನಲ್ಲಿ ಶಂಕಾಸ್ಪದವಾಗಿ ಸಂಚರಿಸುತ್ತಿದ್ದ ಆಶಿಫ್‌ನನ್ನು RPF ಹಾಗೂ ಸಿಐಬಿ ಸಿಬ್ಬಂದಿ ತಡೆದು ವಿಚಾರಣೆ ನಡೆಸಿದರು. […]