ಉಡುಪಿ: ಬಂಟಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೩ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡಿಗೆ ಸಮಾರಂಭವು ದಿನಾಂಕ ೦೯ ಮೇ ೨೦೨೬ ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಡಾ. ರಾಧಾಕೃಷ್ಣ ಎಸ್ ಐತಾಳ್ ಇವರು ಮಾತನಾಡಿ ವಿದ್ಯಾರ್ಥಿಗಳು ಕಾಲೇಜು ಹಾಗೂ ಉಪನ್ಯಾಸಕರ ಬಗ್ಗೆ ವ್ಯಕ್ತಪಡಿಸಿದಸಕಾರಾತ್ಮಕ ಅಭಿಪ್ರಾಯದ ಬಗ್ಗೆ ಸಂತಸ ವ್ಯಕ್ತ ಪಡಿಸಿದರು ಮತ್ತು ವಿದ್ಯಾರ್ಥಿಗಳ ವಿನಯ ಶೀಲತೆಯು ಅವರ ವ್ಯಕ್ತಿತ್ವ ಮತ್ತು ಪದವಿಯಮೌಲ್ಯವನ್ನು ಹೆಚ್ಚಿಸುತ್ತದೆ ಎಂದರು. […]

ಸರ್ಕ್ಯೂಟ್ರಿಕ್ಸ್ ಸ್ಪರ್ಧೆಯಲ್ಲಿ ನಿಟ್ಟೆ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ಕಾರ್ಕಳ: ಎಸ್ಡಿಎಂ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಇತ್ತೀಚೆಗೆ ನಡೆದ ‘ಸೃಷ್ಟಿ ಇನ್ನೋವೇಶನ್ ಎಕ್ಸ್ಚೇಂಜ್ 2026 ರ ಸಮಯದಲ್ಲಿ ನಡೆದ ರಾಜ್ಯ ಮಟ್ಟದ “ಸರ್ಕ್ಯೂಟ್ರಿಕ್ಸ್ – ಸರ್ಕ್ಯೂಟ್ ಡಿಸೈನ್ ಮತ್ತು ಡೀಬಗ್ಗಿಂಗ್” ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ನಾಲ್ಕನೇ ಸೆಮಿಸ್ಟರ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ (ಇಸಿಇ) ವಿದ್ಯಾರ್ಥಿಗಳಾದ ಧನುಷ್ ಎಸ್ ಪೂಜಾರಿ ಮತ್ತು ಆಕಾಶ್ ಶೆಟ್ಟಿ ರನ್ನರ್-ಅಪ್ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ರಾಜ್ಯದಾದ್ಯಂತದ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು […]

SSLC ಪರೀಕ್ಷೆಯಲ್ಲಿ ಕನ್ನಡದಲ್ಲೇ ಅತ್ಯಧಿಕ ವಿದ್ಯಾರ್ಥಿಗಳು ಅನುತ್ತೀರ್ಣ, ಕನ್ನಡದ ಅಂಕ 125ರಿಂದ 100ಕ್ಕೆ ಇಳಿಸಲು ಒತ್ತಡ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಥಮ ಭಾಷೆ ಕನ್ನಡ ವಿಷಯದ ಗರಿಷ್ಠ ಅಂಕಗಳನ್ನು 125ರಿಂದ 100ಕ್ಕೆ ಇಳಿಸಬೇಕೆಂಬ ಬೇಡಿಕೆ ಮತ್ತೆ ತೀವ್ರಗೊಂಡಿದೆ. ಪ್ರಥಮ ಭಾಷೆಯಾಗಿ ಕನ್ನಡವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಲ್ಲಿ ಅನುತ್ತೀರ್ಣರಾಗುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದೇ ಈ ಚರ್ಚೆ ಮರುಕಳಿಸಲು ಪ್ರಮುಖ ಕಾರಣವಾಗಿದೆ. ಕಳೆದ ಶೈಕ್ಷಣಿಕ ವರ್ಷದ ಆರಂಭದಲ್ಲೇ ಶಿಕ್ಷಣ ಇಲಾಖೆ ಪ್ರಥಮ ಭಾಷೆಯ ಅಂಕಗಳನ್ನು ಇತರ ವಿಷಯಗಳಂತೆ 100ಕ್ಕೆ ಸೀಮಿತಗೊಳಿಸುವ ಬಗ್ಗೆ ಚಿಂತನೆ ನಡೆಸಿತ್ತು. ಆದರೆ ಸಾಹಿತ್ಯ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ […]

ಮೇ 25 ರಂದು ಕುಂದಾಪುರ-ಗುಡ್ಡೆಂಗಡಿಯಲ್ಲಿ “SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್” ಶುಭಾರಂಭ.

ಕುಂದಾಪುರ: ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ತಾಂತ್ರಿಕ ಕೌಶಲ್ಯಗಳನ್ನು ಕಲಿಸಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ, ಗುಡ್ಡೆಂಗಡಿಯಲ್ಲಿ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಮೇ 25ರಂದು ಶುಭಾರಂಭಗೊಳ್ಳಲಿದೆ. ಈ ಕೇಂದ್ರವನ್ನು ಡಾ. ಜಿ. ರಾಮಕೃಷ್ಣ ಆಚಾರ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ SKF Elixer India Pvt. ಮೂಡಬಿದ್ರಿ ಸಂಯುಕ್ತವಾಗಿ ಸ್ಥಾಪಿಸಿ ನಿರ್ವಹಿಸಲಿವೆ. ಇಂದಿನ ಕೈಗಾರಿಕಾ ಕ್ಷೇತ್ರದ ಅಗತ್ಯಗಳನ್ನು ಮನಗಂಡು, ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ರೂಪಿಸುವುದು ಇದರ ಪ್ರಮುಖ ಗುರಿಯಾಗಿದೆ. ಕೈಗಾರಿಕಾ ತರಬೇತಿಯ ಜೊತೆಗೆ ಸೃಜನಾತ್ಮಕ ವೃತ್ತಿಜೀವನಕ್ಕೂ ಅವಕಾಶ: AI […]

ಆದಾಯದಲ್ಲಿ ಇತಿಹಾಸ ಸೃಷ್ಟಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ಸತತ 15 ವರ್ಷಗಳಿಂದ ರಾಜ್ಯದ ಶ್ರೀಮಂತ ದೇವಸ್ಥಾನದ ಪಟ್ಟ, ಈ ಸಲದ ಆದಾಯವೆಷ್ಟು ಗೊತ್ತಾ?

ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿ ಸತತ 15ನೇ ವರ್ಷವೂ ಅತಿ ಹೆಚ್ಚು ಆದಾಯ ಗಳಿಸಿದ ದೇವಸ್ಥಾನವಾಗಿ ಹೊಸ ದಾಖಲೆ ನಿರ್ಮಿಸಿದೆ. 2025-26ನೇ ಆರ್ಥಿಕ ವರ್ಷದಲ್ಲಿ ದೇವಸ್ಥಾನವು ಬರೋಬ್ಬರಿ 167 ಕೋಟಿ 89 ಲಕ್ಷ 9 ಸಾವಿರ 80 ರೂಪಾಯಿ 77 ಪೈಸೆ ಆದಾಯ ಗಳಿಸಿದ್ದು, ಕಳೆದ ವರ್ಷದಿಗಿಂತ ಸುಮಾರು 12 ಕೋಟಿ ರೂ. ಹೆಚ್ಚಳ ಕಂಡಿದೆ. 2024-25ನೇ ಸಾಲಿನಲ್ಲಿ ದೇವಸ್ಥಾನದ ಒಟ್ಟು ಆದಾಯ ಸುಮಾರು 155 ಕೋಟಿ ರೂ. ಆಗಿದ್ದರೆ, […]