ಸರಕಾರದ ನಿಯಮ ಪಾಲಿಸಿದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಮಾತ್ರ ಅನುಮತಿ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ: ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನುಮತಿ ನೀಡುವಾಗ ಸರಕಾರ ಜಾರಿಗೆ ತಂದಿರುವ ನಿಯಮಗಳನ್ನು ಪಾಲನೆ ಮಾಡಿದ ಸಂಸ್ಥೆಗಳಿಗೆ ಮಾತ್ರ ಅನುಮತಿ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಕ್ಷಮ ಪ್ರಾಧಿಕಾರ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಸಾರ್ವಜನಿಕರಿಗೆ ಉತ್ತಮ […]
“ಆಕರ್ಷಕ ಭಾಷಣದಿಂದ ಅಚ್ಚೇದಿನ್ ತರಲು ಸಾಧ್ಯವಿಲ್ಲ ಎಂಬುದನ್ನು ಮೋದಿಯವರು ತಿಳಿದುಕೊಳ್ಳಲಿ : ರಮೇಶ್ ಕಾಂಚನ್”

ದೇಶದ ಜನರು ಒಂದು ವರ್ಷಗಳ ಕಾಲ ವಿದೇಶ ಪ್ರವಾಸ ಮಾಡಬೇಡಿ, ಪೆಟ್ರೋಲ್ ಡಿಸೇಲ್ ಮಿತವಾಗಿ ಬಳಸಿ, ಚಿನ್ನ ಖರೀದಿಸಬೇಡಿ ಎಂಬ ಮುತ್ತಿನ ಮಾತುಗಳನ್ನಾಡಿ ಪ್ರಧಾನಿ ನರೇಂದ್ರ ಮೋದಿಯವರೇ ಮೇ 15ರಿಂದ ಐದು ದೇಶಗಳ ವಿದೇಶ ಪ್ರವಾಸ ಕೈಗೊಂಡಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಇವರು ನೀಡಿದ ಹೇಳಿಕೆ ನಿಜಕ್ಕೂ ಬಾಲಿಶತನದ್ದಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ವ್ಯಂಗವಾಡಿದ್ದಾರೆ. ತಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶವು ಪ್ರತಿಯೊಂದು ವಿಚಾರದಲ್ಲಿ ಸ್ವಾವಲಂಬನೆ ಸಾಧಿಸಿದ್ದು ಹಿಂದಿನ ಸರಕಾರಗಳು […]
ಉಡುಪಿ ಡಾ ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಉಡುಪಿ: ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ಸಿಗಬೇಕಾದರೆ ತರಗತಿ ಒಳಗಿನ ಪಾಠಗಳ ಜತೆಗೆ ಅವರನ್ನು ಸಾಂಸ್ಕೃತಿಕ ಮತ್ತು ಕ್ರೀಡಾಕ್ಷೇತ್ರಗಳಲ್ಲಿ ಭಾಗವಹಿಸುವಂತೆ ಹುರಿದುಂಬಿಸಬೇಕು. ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯ, ಕಲೆ ಮತ್ತು ಸಂಸ್ಕೃತಿಗಳ ವಿಚಾರಗಳನ್ನು ಬೆಳೆಸಿ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದ್ದದು ಎಂದು ಜಿಲ್ಲೆಯ ಶಾಸಕರು ಹಾಗೂ ಕಾಲೇಜು ಅಭಿವದ್ಧಿ ಸಮಿತಿಯ ಅಧ್ಯಕ್ಷರು ಯಶ್‌ಪಾಲ್ ಎ ಸುವರ್ಣ ಅಬಿಪ್ರಾಯಪಟ್ಟರು. ಅವರು ಜಿಲ್ಲೆಯ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ .ಡಾ ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು […]
ಆಕರ್ಷಕ ಭಾಷಣದಿಂದ ಅಚ್ಚೇದಿನ್ ತರಲು ಸಾಧ್ಯವಿಲ್ಲ ಎಂಬುದನ್ನು ಮೋದಿಯವರು ತಿಳಿದುಕೊಳ್ಳಲಿ: ರಮೇಶ್ ಕಾಂಚನ್

ಉಡುಪಿ: ದೇಶದ ಜನರು ಒಂದು ವರ್ಷಗಳ ಕಾಲ ವಿದೇಶ ಪ್ರವಾಸ ಮಾಡಬೇಡಿ, ಪೆಟ್ರೋಲ್ ಡಿಸೇಲ್ ಮಿತವಾಗಿ ಬಳಸಿ, ಚಿನ್ನ ಖರೀದಿಸಬೇಡಿ ಎಂಬ ಮುತ್ತಿನ ಮಾತುಗಳನ್ನಾಡಿ ಪ್ರಧಾನಿ ನರೇಂದ್ರ ಮೋದಿಯವರೇ ಮೇ 15ರಿಂದ ಐದು ದೇಶಗಳ ವಿದೇಶ ಪ್ರವಾಸ ಕೈಗೊಂಡಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಇವರು ನೀಡಿದ ಹೇಳಿಕೆ ನಿಜಕ್ಕೂ ಬಾಲಿಶತನದ್ದಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ವ್ಯಂಗವಾಡಿದ್ದಾರೆ. ತಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶವು ಪ್ರತಿಯೊಂದು ವಿಚಾರದಲ್ಲಿ ಸ್ವಾವಲಂಬನೆ ಸಾಧಿಸಿದ್ದು ಹಿಂದಿನ […]
ನಿಮ್ಮ ವೃತ್ತಿ ಬದುಕಿಗೆ ಆತ್ಮವಿಶ್ವಾಸದ ದಾರಿ ತೋರಿಸುತ್ತೆ ಉಡುಪಿಯ ಸ್ನೇಹ ಟ್ಯೂಟೋರಿಯಲ್ ಕಾಲೇಜು, ಅತ್ಯುತ್ತಮ ಸೌಲಭ್ಯಗಳ ಜೊತೆಗೆ ಮೌಲ್ಯಯುತ ಶಿಕ್ಷಣ

ಉಡುಪಿ: 1998ರ ಜೂನ್ 8ರಂದು ಆರಂಭಗೊಂಡ ಉಡುಪಿಯ ಸ್ನೇಹ ಟ್ಯೂಟೋರಿಯಲ್ ಕಾಲೇಜಿಗೆ ಜಿಲ್ಲೆಯಲ್ಲಿ ವಿಶೇಷ ಹೆಗ್ಗಳಿಕೆ ಇದೆ. 2023-24ನೇ ಸಾಲಿನಲ್ಲಿ ರಜತ ಮಹೋತ್ಸವವನ್ನು ಯಶಸ್ವಿಯಾಗಿ ಆಚರಿಸಿದ ಸಂಸ್ಥೆ, ಕರಾವಳಿ ಹಾಗೂ ಮಲೆನಾಡು ಭಾಗದ ಅನೇಕ ವಿದ್ಯಾರ್ಥಿಗಳ ಬದುಕಿಗೆ ಹೊಸ ದಿಕ್ಕು ತೋರಿಸಿದೆ. ಶಿಕ್ಷಣದ ಜೊತೆಗೆ ಶಿಸ್ತು, ಮೌಲ್ಯಗಳನ್ನು ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿದೆ. ವರ್ಷದಿಂದ ವರ್ಷಕ್ಕೆ ಪಾಠ ಪ್ರವಚನಗಳಲ್ಲಿ ಹೊಸ ಪ್ರಯೋಗಗಳನ್ನು ಅಳವಡಿಸಿಕೊಂಡು, ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಪದ್ಧತಿಯನ್ನು ಅನುಸರಿಸಿ ಅತ್ಯುತ್ತಮ ಸೇವೆ ನೀಡಿದೆ. ಪ್ರತೀ ವರ್ಷವೂ ವಿದ್ಯಾರ್ಥಿಗಳ […]