ಮೇ 18-22: MSDC ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ‘ರೆಸಿನ್ ಆರ್ಟ್’ ಸಮರ್ ಕ್ಯಾಂಪ್.

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ‘ರೆಸಿನ್ ಆರ್ಟ್’ ಸಮರ್ ಕ್ಯಾಂಪ್ ನ್ನು ಮೇ 18ರಿಂದ ಮೇ 22 ರವರೆಗೆ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿಗಳು ನಡೆಯಲಿವೆ. ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಶಿಬಿರವನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಇಲ್ಲಿ ಅತ್ಯುತ್ತಮ ಕರಕುಶಲ ಕಲೆಗಳನ್ನು ಕಲಿಯುವ ಅವಕಾಶ ದೊರೆಯಲಿದೆ. ಈ ಶಿಬಿರದಲ್ಲಿ ಓಶನ್ ಆರ್ಟ್, ಕೋಸ್ಟರ್ಸ್ ಮತ್ತು ಕೀಚೇನ್ಸ್ ತಯಾರಿ, ಬುಕ್‌ಮಾರ್ಕ್ಸ್ ಹಾಗೂ ಡೆಕರ್ ವಸ್ತುಗಳ ನಿರ್ಮಾಣ, […]
ಉಡುಪಿ: ಕಟಪಾಡಿ ಎಸ್ ಎಲ್ ಮೋಟಾರ್ಸ್’ನಲ್ಲಿ ವಿವಿಧ ಹುದ್ದೆಗಳಿಗೆ ಜನ ಬೇಕಾಗಿದ್ದಾರೆ

ಉಡುಪಿ: ಕಟಪಾಡಿಯಲ್ಲಿರುವ ಎಸ್ ಎಲ್ ಮೋಟಾರ್ಸ್’ನಲ್ಲಿ ವಿವಿಧ ಹುದ್ದೆಗಳಿಗೆ ಜನ ಬೇಕಾಗಿದ್ದಾರೆ. ಹುದ್ದೆಗಳು *ಮೆಕ್ಯಾನಿಕ್ *ಸರ್ವಿಸ್ ಅಡ್ವೈಸರ್ *ಆಫೀಸ್ ಬಾಯ್ *ಸರ್ವಿಸ್ ಟೆಕ್ನಿಷಿಯನ್ 10ನೇ, 12ನೇ, ಐಟಿಐ, ಡಿಪ್ಲೊಮಾ, ಪದವಿ ಪಡೆದವರಿಗೆ ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ.ಆಸಕ್ತರು ಸಂಪರ್ಕಿಸಿ:9880799200, 9880279404
ಬೀದಿ ನಾಯಿಗಳ ಹಾವಳಿ ತಡೆಗೆ ಇರುವ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ನಗರ ಪ್ರದೇಶದಲ್ಲಿ 7197 ಹಾಗೂ ಗ್ರಾಮೀಣ ಭಾಗದಲ್ಲಿ 13,185 ಸೇರಿದಂತೆ ಸುಮಾರು 20,382 […]
ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ

ಉಡುಪಿ: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ, ಸಮಸ್ಯೆ ನಿವಾರಣೆ ಕುರಿತು ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆ : 8217075359 ಅನ್ನು ತೆರೆಯಲಾಗಿದ್ದು, ಸಾರ್ವಜನಿಕರು ಈ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ ಪ್ರಕಟಣೆ ತಿಳಿಸಿದೆ.
ಹಿರಿಯ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ನಿಧನ; ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಉಡುಪಿ: ಬಡಗುತಿಟ್ಟಿನ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ, ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ಅವರು ಬುಧವಾರ ನಿಧನ ಹೊಂದಿದರು. ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಐದು ದಶಕಗಳ ಕಲಾಸೇವೆ:ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ಅವರು ಯಕ್ಷಗಾನದ ದಿಗ್ಗಜ ಕಲಾವಿದರಾದ ಕೆರೆಮನೆ ಶಿವರಾಮ ಹೆಗಡೆ, ಮಹಾಬಲ ಹೆಗಡೆ, ಶಂಭು ಹೆಗಡೆ, ನೆಬ್ಬೂರು ನಾರಾಯಣ ಹೆಗಡೆ, ಕರ್ಕಿ ಸತ್ಯನಾರಾಯಣ, ಪ್ರಭಾಕರ […]