ಹಿಜಾಬ್ ನಿಷೇಧ ಹಿಂಪಡೆಯುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ; ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ಮತ ಬಡವ ಶ್ರೀಮಂತ ಎಂಬ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಶಾಲಾ ಸಮವಸ್ತ್ರದ ಆಶಯಕ್ಕೆ ವಿರುದ್ಧವಾಗಿ ಇದೀಗ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯದ […]

ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆಯೊಂದೇ ಪರಿಹಾರ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ: ಕಾಲುಬಾಯಿ ರೋಗವು ಜಾನುಬಾರುಗಳಲ್ಲಿ ಅತ್ಯಂತ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಈ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ 9 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ […]

ಮೇ 15 ರಂದು ನೇರ ಸಂದರ್ಶನ

ಉಡುಪಿ: ಉಡುಪಿಯ ನಿಟ್ಟೂರಿನ ಅಭರಣ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇಲ್ಲಿ ಮೇ 15 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 […]

ಮಣಿಪಾಲ MSDC ಯಿಂದ ಲಿಪ್ಪನ್ ಆರ್ಟ್ ಸಮರ್ ಕ್ಯಾಂಪ್: ಕಲೆಗಳ ಕಲಿಕೆಗೆ ಒಳ್ಳೆಯ ಅವಕಾಶ*

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಲಿಪ್ಪನ್ ಆರ್ಟ್ ಕುರಿತ ಸಮರ್ ಕ್ಯಾಂಪ್ ನ್ನು ಮೇ 16ರಂದು ಶನಿವಾರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಮಣಿಪಾಲದ ಈಶ್ವರ್ ನಗರದಲ್ಲಿರುವ MSDC-Orane, 3ನೇ ಮಹಡಿಯಲ್ಲಿಆಯೋಜಿಸಲಾಗಿದೆ. ಸೃಜನಾತ್ಮಕ ಕಲೆಯನ್ನು ಕಲಿಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಹಾಗೂ ಕಲಾಭಿಮಾನಿಗಳಿಗೆ ಈ ಶಿಬಿರ ಉತ್ತಮ ಅವಕಾಶವಾಗಲಿದೆ. ಶಿಬಿರದಲ್ಲಿ “ಬನ್ನಾ ಬನ್ನಿ” ಫ್ರಿಡ್ಜ್ ಮ್ಯಾಗ್ನೆಟ್ ತಯಾರಿ ಹಾಗೂ ಬುದ್ಧ ವಾಲ್ ಡೆಕೋರ್ ಆರ್ಟ್ ಕಲಿಕೆಗೆ ಅವಕಾಶವಿದೆ. “Create. Reflect. Shine!” ಎಂಬ […]

ಕುಕ್ಕೆ ಸುಬ್ರಹ್ಮಣ್ಯ: ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಹೊಸ ವೇಳಾಪಟ್ಟಿಯನ್ನು ಜಾರಿಗೆ ತಂದಿದ್ದು, ಭಕ್ತರಿಗೆ ಇದೀಗ ಪ್ರತಿದಿನ ಹೆಚ್ಚುವರಿ ಒಂದು ಗಂಟೆ ದರ್ಶನದ ಅವಕಾಶ ದೊರೆಯಲಿದೆ. ಈ ಮೊದಲು ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಹೊಸ ನಿರ್ಧಾರದಂತೆ ಇದೀಗ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನ ಬಂದ್ ಮಾಡಲಾಗುತ್ತದೆ. ಇದರಿಂದ ಮಧ್ಯಾಹ್ನದ ವೇಳೆಯಲ್ಲಿ ಭಕ್ತರಿಗೆ ಹೆಚ್ಚುವರಿ ದರ್ಶನ ಸೌಲಭ್ಯ […]