ಕಡಿಮೆ ಕಲಿತರೂ ಇಲ್ಲಿದೆ ಕೆಲಸ, ಪುನರ್ವಸತಿ ಕಾರ್ಯಕರ್ತರ ನೇಮಕಾತಿ, ಆಸಕ್ತಿ ಇದ್ಯಾ, ಈಗಲೇ ಅರ್ಜಿ ಹಾಕಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಂಟಿಯಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಿವೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಲಯ ಕಚೇರಿ–01 ಮತ್ತು ವಲಯ ಕಚೇರಿ–07ರಲ್ಲಿ ಖಾಲಿ ಇರುವ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಯೋಜನೆಯ ಮುಖ್ಯ ಉದ್ದೇಶ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ, UDID ಕಾರ್ಡ್, ತರಬೇತಿ, ಉದ್ಯೋಗ ಸೌಲಭ್ಯಗಳು ಹಾಗೂ ಆರೋಗ್ಯ ಸೇವೆಗಳಂತಹ […]

ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಬಳಸಲು ಯಾವ ಅಡ್ಡಿಯೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳ ಬಳಕೆಯ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಸ್ಪಷ್ಟನೆ ನೀಡಿದ್ದು, ಪ್ರಾಥಮಿಕ ಶಾಲೆಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಸಾಂಪ್ರದಾಯಿಕವಾಗಿ ಅನುಸರಿಸುತ್ತಿರುವ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ. ಮೈಸೂರಿನ ನಿವಾಸದಲ್ಲಿ ಮೇ 14ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಸೇರಿದಂತೆ ಹಿಂದಿನಿಂದಲೂ ಪಾಲಿಸಿಕೊಂಡು ಬರುತ್ತಿರುವ ಧಾರ್ಮಿಕ ಸಂಪ್ರದಾಯಗಳಿಗೆ ಯಾವುದೇ ತಡೆ ಇಲ್ಲ. ಆದರೆ ಶಾಲಾ ಆವರಣದಲ್ಲಿ ಹೊಸದಾಗಿ ಯಾವುದೇ ಧಾರ್ಮಿಕ ಆಚರಣೆಗಳು ಅಥವಾ ಸಂಕೇತಗಳನ್ನು ಹುಟ್ಟುಹಾಕುವಂತಿಲ್ಲ” […]

ಕಾಂಗ್ರೆಸ್ ಸರಕಾರದಿಂದ ಉಡುಪಿ ಜಿಲ್ಲೆಯ ನಿರ್ಲಕ್ಷ್ಯ: ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ- ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ

ಉಡುಪಿ: ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಮೇ 16ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ. 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ […]

ಮೂಡ್ಲಕಟ್ಟೆಯ ಐ ಎಂ ಜೆ ಕ್ವಾಂಟಮ್ ತಂತ್ರಜ್ಞಾನ ಸಂಶೋಧನಾ ಸಂಸ್ಥೆಗೆ ಸಚಿವರ ಭೇಟಿ

ಕುಂದಾಪುರ: ಕರ್ನಾಟಕ ಸರಕಾರದಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಮಾನ್ಯ ಶ್ರೀ ಎನ್. ಎಸ್. ಬೋಸರಾಜು ಅವರು 2026 ಮೇ 13ರಂದು ಐ ಎಂ ಜೆ ಸಂಶೋಧನಾ ಸಂಸ್ಥೆಯಲ್ಲಿರುವ ಕ್ವಾಂಟಮ್ ಕಂಪ್ಯೂಟಿಂಗ್ ಪ್ರಯೋಗಾಲಯ, ಡೆಲ್ಟಾ-Q ಗೆ ಭೇಟಿ ನೀಡಿದರು. ಭೇಟಿ ವೇಳೆ ಮಾನ್ಯ ಸಚಿವರು ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಅಯಾನ್-ಟ್ರ್ಯಾಪ್ ಆಧಾರಿತ 16-ಕ್ವಿಬಿಟ್ ಕ್ವಾಂಟಮ್ ಪ್ರೊಸೆಸರ್‌ನ ಪ್ರಾಯೋಗಿಕ ವ್ಯವಸ್ಥೆಯನ್ನು ವೀಕ್ಷಿಸಿದರು. ಮಾನ್ಯ ಸಚಿವರು ಸಂಸ್ಥೆಯ ಸಂಶೋಧನಾ ದೃಷ್ಟಿಕೋನ ಮತ್ತು ನಡೆಯುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು. ಗ್ರಾಮೀಣ ಕರ್ನಾಟಕದಲ್ಲಿ ಇಂತಹ […]

“ಒಂದೇ ದಿನದ ಅಂತರದಲ್ಲಿ ‘ಹಿಟ್ಲರ್ ಕಲ್ಯಾಣ’ದ ಇಬ್ಬರು ನಟರು ಹೃದಯಾಘಾತಕ್ಕೆ ಬಲಿ!”

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಇಬ್ಬರು ನಟರು ಒಂದೇ ದಿನದ ಅಂತರದಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವುದು ಅಭಿಮಾನಿಗಳಿಗೆ ಶಾಕ್ ನೀಡಿದೆ. ವರ್ಷಗಳ ಹಿಂದೆ ರಾಕೇಶ್ ಪೂಜಾರಿ, ಇದೀಗ ದಿಲೀಪ್ ರಾಜ್ ಅಕಾಲಿಕವಾಗಿ ಮರಣವನ್ನಪ್ಪಿದ್ದಾರೆ.ದಿಲೀಪ್ ರಾಜ್ ನಿಧನಕನ್ನಡ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡ ಪ್ರತಿಭಾನ್ವಿತ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಝೀ ಕನ್ನಡದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಇವರು ನಾಯಕರಾಗಿ ನಟಿಸಿದ್ದರು. ಕಳೆದ ವರ್ಷ ಇದೇ ಸಮಯದಲ್ಲಿ ಧಾರಾವಾಹಿಯ ಹಾಸ್ಯ ಕಲಾವಿದ […]