ಉಡುಪಿ: ಕಾಂಗ್ರೆಸ್ ಮುಖಂಡರು ಪ್ರಧಾನಿ ಹೇಳಿಕೆಯನ್ನು ಅರ್ಥೈಸಿಕೊಳ್ಳಲು ಆಗದಷ್ಟು ದುರ್ಬಲರಾಗಿದ್ದಾರೆ- ಸಂಸದ ಕೋಟ

ಉಡುಪಿ: ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಯವರು ಚಿನ್ನ ಖರೀದಿ ಮಾಡಬೇಡಿ ಎಂದು ಭಾರತೀಯರಲ್ಲಿ ಮನವಿ ಮಾಡಿದ್ದು ಸಾಕಷ್ಟು ಚರ್ಚೆಗೆ ಈಡಾಗಿತ್ತು. ಈ ಸಂಬಂಧ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಧಾನಿ ಮೋದಿಯವರು ಚಿನ್ನ ಖರೀದಿಯನ್ನು ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಮಾಡಿ, ಅವಶ್ಯಕತೆಗೆ ತಕ್ಕಂತೆ ಖರೀದಿ ಮಾಡಿ ಎಂದು ಕರೆ ಕೊಟ್ಟಿದ್ದಾರೆ. ಇದಕ್ಕೆ ಬೇರೆ ಕಾರಣ ಇಲ್ಲ. ದೇಶದ ಹಿತದೃಷ್ಟಿಯಿಂದ ಈ ಕರೆಯನ್ನು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಅದೇ ರೀತಿ ಎಲೆಕ್ಟ್ರಿಕ್ […]
ನಾಲ್ಕೈದು ತಿಂಗಳಲ್ಲಿ ಉಡುಪಿ ವಿಜ್ಞಾನ ಕೇಂದ್ರ ಪೂರ್ಣ- ಸಚಿವ ಭೋಸರಾಜು

ಉಡುಪಿ: ಉಡುಪಿ ತಾಲೂಕಿನ ಅಲೆವೂರು ಗ್ರಾಪಂ ವ್ಯಾಪ್ತಿಯ ಪ್ರಗತಿ ನಗರದ ಐದು ಎಕರೆ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಉಡುಪಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಯು ಮುಂದಿನ ನಾಲ್ಕೈದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದ್ದಾರೆ. ಮಣಿಪಾಲ ಪ್ರಗತಿನಗರದಲ್ಲಿ ನಿರ್ಮಾಣವಾಗುತ್ತಿರುವ ಉಡುಪಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡು ವರ್ಷಗಳ ಹಿಂದೆ ಕೇಂದ್ರ ಮಂಜೂರಾಗಿದ್ದು, ಜಾಗದ ವಿವಾದ ದಿಂದ […]
ಮೇ 14 ರಿಂದ 17 ರ ವರೆಗೆ ಉಡುಪಿ ದೊಡ್ಡಣಗುಡ್ಡೆಯಲ್ಲಿ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳ

ಉಡುಪಿ: ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘ, (ರಿ), ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆ ಇವರ ವತಿಯಿಂದ ಮೇ 14 ರಿಂದ 17 ರ ವರೆಗೆ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿರುತ್ತದೆ.ಮಾವು ಮೇಳ-2026 ರ ಉದ್ಘಾಟನಾ ಸಮಾರಂಭವು ಮೇ 14 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ […]