ಕೊಡವೂರು ಮಹಾ ರುದ್ರಯಾಗದಿಂದ ದೇಶ, ರಾಜ್ಯ ಸುಭಿಕ್ಷೆ ಹೊಂದಲಿ: ಸಚಿವ ರಾಮಲಿಂಗಾರೆಡ್ಡಿ

ಉಡುಪಿ: ಸುಮಾರು 75 ವರ್ಷಗಳ ಬಳಿಕ ಈ ಭಾಗದಲ್ಲಿ ರುದ್ರಯಾಗ ನಡೆಯುತ್ತಿದ್ದು, ಪ್ರಸಾದ್‌ರಾಜ್ ಕಾಂಚನ್ ಅವರಿಗೆ ಈ ಯೋಗ ದೊರೆತಿದೆ. ಲೋಕಕಲ್ಯಾಣಾರ್ಥವಾಗಿ ನಡೆದ ಈ ಯಾಗದಿಂದ ದೇಶ, ರಾಜ್ಯಕ್ಕೆ ಬಂದ ಯಾವುದೇ ಸಂಕಷ್ಟಗಳು ದೂರವಾಗಿ, ಈ ನಾಡು ಸುಭೀಕ್ಷೆ ಹೊಂದಲಿ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ ಹಾರೈಸಿದರು.ಅವರು ಶುಕ್ರವಾರ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಮಹಾ ರುದ್ರಯಾಗದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಇತ್ತೀಚಿನ […]
ಕೊಡವೂರು ಮಹಾರುದ್ರಯಾಗ: ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ; ಪುರೋಹಿತರಿಂದ ಮಹಾರುದ್ರ ಪಠಣ ಆರಂಭ

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿರುವ ಮಹಾರುದ್ರಯಾಗ ಅಂಗವಾಗಿ ಇಂದು ಬೆಳಿಗ್ಗೆಯಿಂದ ರುದ್ರಜಪ, ಉಗ್ರಾಣ ಮುಹೂರ್ತ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.ವೇದ ಮೂರ್ತಿ ಹಯವದನ ತಂತ್ರಿಗಳು ಪುತ್ತೂರು, ಮಧುಸೂದನ ತಂತ್ರಿಗಳು, ಸುಬ್ರಹ್ಮಣ್ಯ ಭಟ್, ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8.30ಕ್ಕೆ ಋತ್ವಿಜರ ಸ್ವಾಗತ, ಪ್ರಾರ್ಥನೆ, ತೋರಣ ಮುಹೂರ್ತ ನೆರವೇರಿಸಲಾಯಿತು.ನಂತರ ಉಗ್ರಾಣ ಮುಹೂರ್ತ, ಅರಣಿ ಮಥನ, ಅಗ್ನಿ ಜನನ, ಬ್ರಹ್ಮಕೂರ್ಚ ಹೋಮ ನೆರವೇರಿತು. ಕಂಕಣ ಬಂಧ, ದ್ವಾದಶ ನಾರಿಕೇಳ ಗಣಯಾಗ ನೆರವೇರಿತು. ಪುರೋಹಿತರಿಂದ […]
ಉಡುಪಿ: ಮೇ 17ರಂದು ಶಿವಾಜಿ ಜಯಂತ್ಯೋತ್ಸವ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಉಡುಪಿ: ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ವಿದ್ಯಾರ್ಥಿವೇತನ ಮತ್ತು ಸಹಾಯಧನ ವಿತರಣಾ ಸಮಾರಂಭ ಮೇ 17 ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂದಾರ್ತಿಯ ಕರ್ನಾಟಕ ಮರಾಠ ಪರಿಷತ್ ನಿವೇಶನದಲ್ಲಿ ನಡೆಯಲಿದೆ ಎಂದು ಪರಿಷತ್ ನ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್ ಕವಡೆ ಹೇಳಿದ್ದಾರೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಮಂದಾರ್ತಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್ .ಧನಂಜಯ […]
ಕೊಡವೂರು ಮಹಾರುದ್ರಯಾಗ: ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿರುವ ಮಹಾರುದ್ರಯಾಗ ಅಂಗವಾಗಿ ಮೇ 15ರಂದು ಸಂಜೆ 6 ಗಂಟೆಗೆ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ವನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಲಿದ್ದಾರೆ.ಮಹಾ ರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್ ಕಾಂಚನ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಶ್ರೀ ಮಹರ್ಷಿ ಆನಂದ ಗುರೂಜಿ ಆಶೀರ್ವಚನ ನೀಡುವರು.ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ದಕ್ಷಿಣ ಕನ್ನಡ […]
ಬಜೆ ಅಣೆಕಟ್ಟಿಗೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ

ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಉಡುಪಿ ನಗರದ ಜನತೆಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು. ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ […]