ಸುಪ್ರಿಂ ಕೋರ್ಟ್ ಮಹತ್ವದ ಆದೇಶ, ನಟ ದರ್ಶನ್ ಗೆ ಜಾಮೀನು ನಿರಾಕರಣೆ, ಪರಪ್ಪನ ಅಗ್ರಹಾರವೇ ಗತಿ

ಬೆಂಗಳೂರು: ದರ್ಶನ್ ವಿರುದ್ಧದ ರೇಣುಕಾ ಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ನಟ ದರ್ಶನ್ ಅವರಿಗೆ ಜಾಮೀನು ನಿರಾಕರಿಸಿದೆ. ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠ, ಪ್ರಕರಣದ ವಿಚಾರಣೆಯನ್ನು ವೇಗವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ. “ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ನಿಗದಿತ ಅವಧಿಯೊಳಗೆ ಟ್ರಯಲ್ ಮುಗಿಯದಿದ್ದರೆ ಜಾಮೀನು ಪರಿಗಣಿಸಲಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಕಳೆದ ಏಳು ತಿಂಗಳಲ್ಲಿ ಕೇವಲ 10 ಮಂದಿಯ […]

Petrol Diesel Price: ಚುನಾವಣೆ ನಂತರ ಜನರ ಜೇಬಿಗೆ ಕತ್ತರಿ? ಪೆಟ್ರೋಲ್​ ಡೀಸೆಲ್​ ಬೆಲೆಯಲ್ಲಿ ಇಷ್ಟೊಂದು ಏರಿಕೆ ಬಗ್ಗೆ ಕೋಟಕ್ ಈಕ್ವಿಟೀಸ್ ಭವಿಷ್ಯ!

ಮಧ್ಯಪ್ರಾಚ್ಯದ ಯುದ್ಧ ದೇಶದ ಮೇಲೆ ಭಾರೀ ಎಫೆಕ್ಟ್​ ಆಗುತ್ತಿದೆ. ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತೀವ್ರವಾಗಿ ಏರಬಹುದು ಎಂಬ ಎಚ್ಚರಿಕೆ ಹೊರಬಿದ್ದಿದೆ. ಕೋಟಕ್ ಇನ್ಸ್ಟಿಟ್ಯೂಷನಲ್ ಈಕ್ವಿಟೀಸ್‌ ಪೆಟ್ರೋಲ್​ ಡೀಸೆಲ್​ ಬೆಲೆಯಲ್ಲಿ ಭಾರೀ ಏರಿಕೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ.ಭಾರತದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತೀವ್ರವಾಗಿ ಏರಬಹುದು ಎಂಬ ಎಚ್ಚರಿಕೆ ಹೊರಬಿದ್ದಿದೆ. ಕಚ್ಚಾ ತೈಲದ ಜಾಗತಿಕ ಬೆಲೆಗಳು ಹೆಚ್ಚುತ್ತಿರುವುದರಿಂದ ಭಾರತದಲ್ಲಿ ತೈಲ ಸಂಸ್ಕರಣಾಗಾರಗಳ ಮೇಲೆ ದೊಡ್ಡ ಒತ್ತಡ ನಿರ್ಮಾಣವಾಗಿದೆ. […]

ಕುಂದಾಪುರ: ಸಿಡಿಲು ಬಡಿದು ಕಾರ್ಮಿಕ ಮೃತ್ಯು- ಇನ್ನೋರ್ವನಿಗೆ ಗಂಭೀರ‌ ಗಾಯ

ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸಂಜೆ ವೇಳೆಗೆ ತಾಲೂಕಿನಲ್ಲಿ ಗುಡುಗು-ಮಿಂಚು ಸಹಿತ […]

ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖ್ ಸಮುದಾಯದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರುವ ಕಾನೂನು ಪದವೀಧರ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3,50,000 ಗಳ ಮಿತಿಯಲ್ಲಿರಬೇಕು. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ […]