ಬಾಳೆಹಣ್ಣಿನ ಸಿಪ್ಪೆ ಮೇಲೆ ಕಾಲಿಟ್ಟರೆ ಜಾರಿ ಬೀಳೋದ್ರ ಹಿಂದಿದೆ ವಿಜ್ಞಾನ! ಅಚ್ಚರಿಯ ಈ ಸಂಗತಿ ನಿಮಗೆ ಗೊತ್ತೇ?

ಬಾಳೆಹಣ್ಣಿನ Banana ಸಿಪ್ಪೆ ಮೇಲೆ ಕಾಲಿಟ್ಟು ಜಾರಿಬೀಳುವ ದೃಶ್ಯಗಳನ್ನು ನಾವು ಸಿನಿಮಾಗಳಲ್ಲಿ ಮಾತ್ರವಲ್ಲ ನಿಜಜೀವನದಲ್ಲೂ ಹಲವಾರು ಬಾರಿ ನೋಡಿದ್ದೇವೆ. ನಿಮ್ಮದೇ ಅನುಭವಕ್ಕೂ ಬಂದಿರಬಹುದು. ಇದರ ಹಿಂದೆ ಒಂದು ಕುತೂಹಲಕರ ವೈಜ್ಞಾನಿಕ ಕಾರಣವಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಬಾಳೆಹಣ್ಣು ಆರೋಗ್ಯಕ್ಕೆ ಅತ್ಯಂತ ಉತ್ತಮ ಹಣ್ಣುಗಳಲ್ಲಿ ಒಂದಾಗಿದೆ. ಇದರಲ್ಲಿ ಪೊಟ್ಯಾಸಿಯಮ್, ವಿಟಮಿನ್ ಬಿ6 ಹಾಗೂ ಫೈಬರ್ ಸಮೃದ್ಧವಾಗಿವೆ. ಆದರೆ ಅದರ ಸಿಪ್ಪೆಯನ್ನು ನಿರ್ಲಕ್ಷ್ಯವಾಗಿ ರಸ್ತೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡಿದರೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಈ ಬಗ್ಗೆ Kitasato […]
ಖಾಸಗಿ ಬಸ್‌ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಪಾರು

ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ತಾಲೂಕಿನ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ಏಕಾಏಕಿ ಬೆಂಕಿ ತಗುಲಿದ ಘಟನೆ ನಡೆದಿದೆ. ಬಸ್‌ನ ಟೈಯರ್ ಸ್ಫೋಟಗೊಂಡ ಪರಿಣಾಮ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ಅರಿತ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಒಳಗಿದ್ದ 36 ಮಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ […]
ಜನರಿಗೆ ಮಾಡಬೇಡಿ ಅನ್ನೋದಾಯ್ತು, ಇವರೇನು ಮಾಡಿದ್ದಾರೆ ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೋದಿಯವರು ಗಂಟೆ ಬಾರಿಸಬೇಕು ಅಂದ್ರೆ ನಾವು ಗಂಟೆ ಬಾರಿಸುತ್ತೇವೆ. ಚಪ್ಪಾಳೆ ಹೊಡೀರಿ ಅಂದ್ರೆ ಹೊಡೀತೇವೆ. ಪೆಟ್ರೋಲ್ ಡೀಸೆಲ್ ಜಾಸ್ತಿ ಬಳಸಬೇಡಿ ಅಂದ್ರೆ ನಾವು ಪಾಲಿಸುತ್ತೇವೆ. ಬಂಗಾರ ಖರೀದಿಸಬೇಡಿ ಎಂದರೆ ಬಿಡುತ್ತೇವೆ. ದೇಶಕ್ಕಾಗಿ ಇತಿ ಮಿತಿಯನ್ನು […]
ಹಿಜಾಬ್‌ಗೆ ನ್ಯಾಯಾಲಯದಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ: ಸಚಿವ ರಾಮಲಿಂಗರೆಡ್ಡಿ

ಉಡುಪಿ: ಮೊದಲಿನಿಂದಲೂ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಿದ್ದರು. ಹಿಂದುಗಳು ಕೂಡ ಜನಿವಾರ ಧರಿಸುತ್ತಾರೆ ಮತ್ತು ಕುಂಕುಮ ಇಟ್ಟುಕೊಳ್ಳುತ್ತಾರೆ. ಅದರಲ್ಲಿ ತಪ್ಪೇನು ಇಲ್ಲ. ನ್ಯಾಯಾಲಯದಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ. ತಡೆಯಾಜ್ಞೆ ಇಲ್ಲದೆ ಇರುವುದರಿಂದ ನ್ಯಾಯಾಲಯದಲ್ಲಿ ತೀರ್ಪು ಬರಲು 10-20 ವರ್ಷವೂ ಆಗಬಹುದು ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದಾವಣಗೆರೆ ಮುಸ್ಲಿಂ ಮುನಿಸಿಗೂ ಈ ಆದೇಶಕ್ಕೂ ಸಂಬಂಧ ಇಲ್ಲ. ದಾವಣಗೆರೆಯಲ್ಲಿ ಮುಸ್ಲಿಮರು ನಮಗೆ ಮತ ಹಾಕಿದ್ದಾರೆ. […]
ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕುರಿತು ಕ್ರಿಯಾ ಯೋಜನೆ: ತರಬೇತಿ ಕಾರ್ಯಕ್ರಮ

ಉಡುಪಿ: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಇವರ ಸಹಯೋಗದೊಂದಿಗೆ ಹವಾಮಾನ ಬದಲಾವಣೆ ಕುರಿತು ಕ್ರಿಯಾ ಯೋಜನೆ ತರಬೇತಿ ಕಾರ್ಯಕ್ರಮವು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು. ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಎಂಪ್ರಿ ಹವಾಮಾನ ಬದಲಾವಣೆ ವಿಭಾಗದ ಹಿರಿಯ ಸಮಾಲೋಚಕಿ ಡಾ. ಸರಿತಾ ಬೋಯಾ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿ, […]