ಮಂಗಳೂರು ಲಿಫ್ಟ್ ಅವಘಡ: ಮಾರ್ಟ್ ಉದ್ಯೋಗಿ ದುರ್ಮರಣ

ಮಂಗಳೂರು: ನಗರದ ಕುಂಟಿಕಾನ ಪ್ರದೇಶದ ಮಾರ್ಟ್ ಒಂದರಲ್ಲಿ ಶನಿವಾರ ಸಂಜೆ ಸಂಭವಿಸಿದ ಲಿಫ್ಟ್ ಅವಘಡದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ ನೌಫಾಲ್ Naufal (28) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮಾರ್ಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ನೌಫಾಲ್ ಲಿಫ್ಟ್ ಅವಘಡಕ್ಕೆ ಸಿಲುಕಿದರು. ತಕ್ಷಣ ಸಹೋದ್ಯೋಗಿಗಳು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ. ನೌಫಾಲ್ ಅವಿವಾಹಿತರಾಗಿದ್ದು, ಅವರ ಅಕಾಲಿಕ ನಿಧನ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ದುಃಖ ಮೂಡಿಸಿದೆ. […]
ಉಪ್ಪಿನಂಗಡಿಯಲ್ಲಿ ಸರಣಿ ಕಳ್ಳತನ: ವೈದ್ಯರ ಕ್ಲಿನಿಕ್‌ಗಳು, ವಕೀಲರ ಕಚೇರಿ ದೋಚಿದ ಕಳ್ಳರು

ಉಪ್ಪಿನಂಗಡಿ: ಪಟ್ಟಣದ ಹೃದಯ ಭಾಗದಲ್ಲಿರುವ ಮೂರು ವೈದ್ಯರ ಕ್ಲಿನಿಕ್‌ಗಳು ಹಾಗೂ ಒಂದು ನೋಟರಿ ವಕೀಲರ ಕಚೇರಿಗೆ ನುಗ್ಗಿದ ಕಳ್ಳರು ಒಟ್ಟು ₹71,500 ನಗದು ಹಣವನ್ನು ದೋಚಿದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಖ್ಯಾತ ಮಕ್ಕಳ ತಜ್ಞ ಡಾ. ಎಂ.ಎನ್. ಭಟ್ Dr. M. N. Bhat ಅವರ ಕ್ಲಿನಿಕ್‌ನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಕ್ಲಿನಿಕ್‌ನಲ್ಲಿ ಇಡಲಾಗಿದ್ದ ₹55,000 ನಗದು ಹಣವನ್ನು ಕಳವು ಮಾಡಿದ್ದಾರೆ. ಶನಿವಾರ ರಜೆ ದಿನವಾಗಿದ್ದರಿಂದ ಸಂಜೆ ವೇಳೆ ಕಳವು ಪ್ರಕರಣ ಬೆಳಕಿಗೆ ಬಂದಿದೆ. […]
ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ಡಿಂಪಲ್ ಕ್ವೀನ್ ರಚಿತಾ ರಾಮ್

ಬಂಟ್ವಾಳ: ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್ ಎಂದೇ ಖ್ಯಾತಿ ಪಡೆದಿರುವ ನಟಿ Rachita Ram ತುಳುನಾಡಿನ ಆರಾಧ್ಯ ದೈವ ಕೊರಗಜ್ಜ Koragajja ಹರಕೆ ಕೋಲ ಸಲ್ಲಿಸಿ ಭಕ್ತಿ ಸಮರ್ಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವುದಲ್ಲಿರುವ ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿದ ರಚಿತಾ ರಾಮ್, ತಮ್ಮ ಮನಸ್ಸಿನ ಆಶಯಗಳು ಈಡೇರಿದ ಹಿನ್ನೆಲೆ ಹರಕೆ ಕೋಲ ಸೇವೆ ಸಲ್ಲಿಸಿದರು. ತಾವು ಕೈಗೊಂಡಿದ್ದ ಕೆಲವು ಮಹತ್ವದ ಕೆಲಸಗಳು ಯಶಸ್ವಿಯಾದರೆ ಕೊರಗಜ್ಜ ದೈವಕ್ಕೆ ಕೋಲ ನೀಡುವುದಾಗಿ ಅವರು ಹರಕೆ ಹೊತ್ತಿದ್ದರು. […]
ಕೊಡವೂರು ಮಹಾರುದ್ರಯಾಗ- ಇಂದು ಮಲ್ಪೆ ಬೀಚ್ ನಲ್ಲಿ ಕ್ರೀಡಾಕೂಟ, ಗಂಗಾರತಿ; ರಾತ್ರಿ 8ಕ್ಕೆ ಖ್ಯಾತ ಹಾಡುಗಾರ್ತಿ ಮಂಗ್ಲಿ ಅವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಪ್ರಯುಕ್ತ ಇಂದು (ಮೇ 17) ಮಲ್ಪೆ ಬೀಚ್ ನಲ್ಲಿ ವಿವಿಧ ಸಾಂಪ್ರದಾಯಿಕ ಕ್ರೀಡಾಕೂಟ ಸ್ಪರ್ಧೆಗಳು, ಸಂಜೆ 6 ಗಂಟೆಗೆ ಮಲ್ಪೆ ಕಡಲ ತೀರದಲ್ಲಿ ವಾರಣಾಸಿಯ ಪುರೋಹಿತರಿಂದ ಗಂಗಾರತಿ ನೆರವೇರಲಿದೆ.ರಾತ್ರಿ 8ಕ್ಕೆ ದಕ್ಷಿಣ ಭಾರತದ ಖ್ಯಾತ ಹಾಡುಗಾರ್ತಿ ಮಂಗ್ಲಿ ಅವರು ಸಂಗೀತ ರಸಮಂಜರಿ ಕಾರ್ಯಕ್ರಮ ಪ್ರಸ್ತುಪಡಿಸಲಿದ್ದಾರೆ.
ರುದ್ರ ದೇವರಲ್ಲಿ ಭಕ್ತಿಯಿಂದ ಪ್ರಾರ್ಥಿಸಿದರೆ ಕಷ್ಟ ಕಾರ್ಪಣ್ಯ ದೂರವಾಗಲಿದೆ- ಕಾಣಿಯೂರು ಶ್ರೀ

ಉಡುಪಿ: ರುದ್ರ ದೇವರು ತನ್ನನ್ನು ನಂಬಿದ ಭಕ್ತರ ದುಃಖವನ್ನು ಪರಿಹರಿಸುವ ಕೆಲಸ ಮಾಡುತ್ತಾರೆ. ರುದ್ರ ದೇವರಲ್ಲಿ ಅತ್ಯಂತ ಭಕ್ತಿಯಿಂದ ಪ್ರಾರ್ಥಿಸುವ ಭಕ್ತರ ಎಲ್ಲ ಕಷ್ಟಕಾರ್ಪಣ್ಯವನ್ನು ದೂರ ಮಾಡುತ್ತಾರೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು.ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಮಹಾ ರುದ್ರಯಾಗದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.ಉಡುಪಿ ಪರ್ಯಾಯ ಮಹೋತ್ಸವದ ಮಾದರಿಯಲ್ಲೇ ಕೊಡವೂರಿನಲ್ಲಿ ಈ ಮಹಾರುದ್ರಯಾಗ ನಡೆಯುತ್ತಿರುವುದು ಬಹಳ ಸಂತೋಷದ ವಿಚಾರ. […]