ಸಮಾಜಮುಖಿ ಚಿಂತನೆಯಿಂದ ದೇಶದ ಅಭಿವೃದ್ಧಿ ಸಾಧ್ಯ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಉದ್ಯಮಿಗಳು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಮಹಾರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಿದ್ದ ಮಹಾರುದ್ರಯಾಗದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಎಲ್ಲವನ್ನೂ ಸರ್ಕಾರದಿಂದ ಮಾಡಲು ಸಾಧ್ಯವಿಲ್ಲ. ಹೀಗಾಗಿ ನನ್ನಂತಹ ಉದ್ಯಮಿಗಳು ಸಮಾಜಮುಖಿ ಚಿಂತನೆ ಬೆಳೆಸಿಕೊಂಡು ಸಾಮಾಜಿಕ ಕಾರ್ಯಗಳನ್ನು ಹೆಚ್ಚೆಚ್ಚು ಕೈಗೊಳ್ಳಬೇಕು. ಧಾರ್ಮಿಕತೆಯ ಜೊತೆಗೆ ಮಕ್ಕಳಲ್ಲಿ ಸಾಮಾಜಿಕ ಕಲ್ಪನೆ ಮತ್ತು […]
“ಸೈಟ್ ಮಾರಾಟಕ್ಕಿದೆ”

ಬ್ರಹ್ಮಾವರ ಕುಂಜಾಲ್ ನಲ್ಲಿ ಎಲ್ಲಾ ಸೌಲಭ್ಯಗಳನೊಳಗೊಂಡ ಲೇಔಟ್ ನಲ್ಲಿ ನೀರು ಸರಬರಾಜು ವಿದ್ಯುತ್ ಕಾಂಕ್ರೀಟ್ ರಸ್ತೆ ಮಳೆ ನೀರು ಒಳಚರಂಡಿ ಎಲ್ಲ ಸೌಲಭ್ಯಗಳು ಉಳ್ಳ ಸೈಟ್ ವಿಸ್ತಾರ5,6,9 ಸೆಂಟ್ಸ್ ಸೈಟ್ಗಳು ಮಾರಾಟಕ್ಕಿದೆ,ಸೈಟ್ ಪ್ರತಿ ಸೆಂಟ್ಸ್ ಗೆ 3ಲಕ್ಷಹೆಚ್ಚಿನ ಮಾಹಿತಿಗೆ. ಸಂಪರ್ಕಿಸಿ:81970 35017….
ಸಾಕಾನೆಗಳ ಕಾಳಗ: ದುಬಾರೆಯಲ್ಲಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಇನ್ನಿಲ್ಲ!

ಮಡಿಕೇರಿ: ಕುಶಾಲನಗರದ ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಎಂಬ ಆನೆಯಿಂದ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಮಂಗಳವಾರ ಮೃತಪಟ್ಟಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅದು ಮೃತಪಟ್ಟಿತು ಎಂದು ವಲಯ ಅರಣ್ಯಾಧಿಕಾರಿ ರಕ್ಷಿತ್ ತಿಳಿಸಿದರು. ಸೋಮವಾರ ಕಂಜನ್ ಆನೆಯು ಸ್ನಾನ ಮಾಡಿಸುತ್ತಿದ್ದ ವೇಳೆ ಏಕಾಏಕಿ ಮಾರ್ತಾಂಡ ಆನೆ ಮೇಲೆ ದಾಳಿ ನಡೆಸಿತು. ಮಾರ್ತಾಂಡ ಆನೆ ಬಿದ್ದು ಅದರಡಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದೀಗ ಗಾಯಗೊಂಡಿದ್ದ ಮಾರ್ತಾಂಡ […]
ಸಾರಿಗೆ ನೌಕರರ ಮುಷ್ಕರಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್!

ಬೆಂಗಳೂರು: ರಾಜ್ಯ ಹೈಕೋರ್ಟ್, ರಾಜ್ಯದ ಸಾರಿಗೆ ನೌಕರರ ಸಂಘಟನೆಗಳು ಘೋಷಿಸಿದ್ದ ಮುಷ್ಕರಕ್ಕೆ ತಾತ್ಕಾಲಿಕ ತಡೆ ನೀಡಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಸಂಘಟನೆಗಳು ಕರೆ ನೀಡಿದ್ದ ಮುಷ್ಕರವನ್ನು ನಡೆಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ನ್ಯಾ. ಸುರಜ್ ಗೋವಿಂದರಾಜ್ ಮತ್ತು ನ್ಯಾ. ಕೆ. ಮನ್ಮಥ ರಾವ್ K. ಅವರಿದ್ದ ಪೀಠ, ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ಪ್ರತಿಭಟನೆ ನಡೆಸಬಾರದು ಎಂದು ಸೂಚಿಸಿದೆ. ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಾರಿಗೆ ಸಂಘಟನೆಗಳಿಗೆ ಕೋರ್ಟ್ ಸಲಹೆ ನೀಡಿದೆ. […]
ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿ.ಐ.ಟಿ.ಎನ್.ಡಿ.ಪಿ.ಎಸ್. ಕಾಯ್ದೆಯಡಿ ಆರೋಪಿಯ ಬಂಧನ

ಉಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್ (26) ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಸೋಮವಾರ ಬಂಧಿಸಲಾಗಿದೆ. ಈತನ ವಿರುದ್ಧ ದಾಖಲಾಗಿರುವ ವಿವಿಧ ಮಾದಕ ದ್ರವ್ಯ ಪ್ರಕರಣಗಳ ಹಿನ್ನೆಲೆ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಮೇ 18ರಂದು ಬಂಧನ ಆದೇಶ […]