ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಾವ್ಯ (20) ಎಂಬ ಯುವತಿಯು ಪಿ.ಯು.ಸಿ ವ್ಯಾಸಾಂಗ ಮುಗಿಸಿ ಮನೆಯಲ್ಲಿದ್ದು, ಮೇ 19 ರಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಣಿಪಾಲದ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.4 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ […]
ಮಣಿಪಾಲ: ಕಲ್ಲು ಎತ್ತು ಹಾಕಿ ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ

ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಯೋಗೀತಾಳ ಪಕ್ಕದ ರೂಮಿನಲ್ಲಿಯೇ ವಾಸವಾಗಿದ್ದ ಸ್ನೇಹಿತೆಯನ್ನೇ ಬಂಧಿಸಿದ್ದಾರೆ.ಅಂಕೋಲಾ ತಾಲೂಕಿನ ಖೇಣಿ ಬಾವಿಕೇರಿ ಗ್ರಾಮದ ಸುಷ್ಮಾ ಅಣ್ಣಪ್ಪ ನಾಯ್ಕ(31) ಬಂಧಿತ ಆರೋಪಿ. ಯೋಗೀತಾ ತನ್ನ ಇಬ್ಬರು ಗೆಳತಿಯರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅವರಿಬ್ಬರು ಮೇ 12ರಂದು ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ಹೋಗಿದ್ದರು. ಇವರು ಕೆಲಸ ಮುಗಿಸಿ ಬುಧವಾರ ಬೆಳಗ್ಗೆ […]
ಸೇನೆಯ ರಹಸ್ಯ ಮಾಹಿತಿಗಳನ್ನು ಬಹಿರಂಗಪಡಿಸಿದ ಆರೋಪ, “ಧುರಂಧರ್ 2” ಸಿನಿಮಾ ವಿರುದ್ಧ ಪರಿಶೀಲನೆಗೆ ಕೋರ್ಟ್ ಆದೇಶ

ನವದೆಹಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಚಿತ್ರದ ಕುರಿತು ಭದ್ರತಾ ಪಡೆಗಳ ಕಾರ್ಯಾಚರಣೆ ಸಂಬಂಧಿತ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ದೆಹಲಿ ಹೈ ಕೋರ್ಟ್ Delhi High Court ಕೇಂದ್ರ ಸರ್ಕಾರಕ್ಕೆ ಪರಿಶೀಲನೆ ನಡೆಸುವಂತೆ ಸೂಚಿಸಿದೆ. ಸಶಸ್ತ್ರ ಸೀಮಾ ಬಲ್ (SSB) ಹೆಡ್ ಕಾನ್‌ಸ್ಟೆಬಲ್ ದೀಪಕ್ ಕುಮಾರ್ Deepak Kumar ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ನ್ಯಾಯಾಲಯ, ಸಿನಿಮಾ ಕಾಲ್ಪನಿಕ ಕಥೆಯಾಗಿರಬಹುದು. ಆದರೆ ಭದ್ರತಾ ಪಡೆ […]
ಇಲೆಕ್ಟ್ರಿಕ್ ಗಾಡಿ ಹೆಸರಿನಲ್ಲಿ ನಡೆಯುತ್ತಿದೆ ಮಹಾಮೋಸ, ಶೋರೂಂ ಗಳ ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಈ ಅಂಶಗಳನ್ನು ನೆನಪಲ್ಲಿಡಿ!

“ಲೈಸೆನ್ಸ್ ಬೇಡ, ಆರ್‌ಟಿಒ ರಿಜಿಸ್ಟ್ರೇಷನ್ ಬೇಡ” ಎಂಬ ಆಮಿಷಗಳಿಗೆ ಮಾರು ಹೋಗಿ ಇವಿ ಬೈಕ್ ಖರೀದಿಸಲು ಮುಂದಾಗುತ್ತಿದ್ದರೆ ಗ್ರಾಹಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ, ಅನಧಿಕೃತ ಇವಿ ಬೈಕ್ ಶೋರೂಮ್‌ಗಳು ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ ವಾಹನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಕೆಲವು ಕಂಪನಿಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ, ರಿಜಿಸ್ಟ್ರೇಷನ್ ಮತ್ತು ಲೈಸೆನ್ಸ್ ಕಡ್ಡಾಯವಾಗಿರುವ ಬೈಕ್‌ಗಳನ್ನೇ “ಯಾವ ದಾಖಲೆಗಳೂ ಬೇಡ” ಎಂದು ಹೇಳಿ ಮಾರಾಟ ಮಾಡುತ್ತಿರುವುದಾಗಿ ದೂರುಗಳು ದಾಖಲಾಗಿವೆ. ಮಂಡ್ಯದಲ್ಲಿ […]
ಕಾದು ನೋಡಿ ಪಾತಾಳಕ್ಕೆ ಕುಸಿಯುತ್ತೆ ತೈಲ ಬೆಲೆ, ಜಾಗತಿಕ ಮಾರುಕಟ್ಟೆ ಬಗ್ಗೆ ಡೊನಾಲ್ಡ್ ಟ್ರಂಪ್ ಭವಿಷ್ಯ!

ಅಮೆರಿಕದ ಅಧ್ಯಕ್ಷ Donald Trump ಜಾಗತಿಕ ತೈಲ ಮಾರುಕಟ್ಟೆ ಬಗ್ಗೆ ಮತ್ತೊಮ್ಮೆ ದೊಡ್ಡ ಹೇಳಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತವಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಅವರ ಹಿಂದಿನ ಹೇಳಿಕೆಗಳು ಮತ್ತು ನೀತಿಗಳ ಬದಲಾವಣೆಗಳನ್ನು ಗಮನಿಸಿದರೆ, ಈ ಹೇಳಿಕೆಯನ್ನು ಎಷ್ಟು ನಂಬಬೇಕು ಎಂಬ ಪ್ರಶ್ನೆ ಕೂಡ ಮೂಡಿದೆ. ತೈಲ ಮಾರುಕಟ್ಟೆ ಬಗ್ಗೆ ಟ್ರಂಪ್ ಹೇಳಿದ್ದೇನು? ವಾಷಿಂಗ್ಟನ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಟ್ರಂಪ್, “ಜಾಗತಿಕ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ತೈಲ ಲಭ್ಯವಿದೆ. ಯಾವುದೇ […]