ಉಡುಪಿ: ಸಣ್ಣ ಉದ್ದಿಮೆಗೆ ಸಹಾಯಧನ; ಅರ್ಜಿ ಆಹ್ವಾನ

ಉಡುಪಿ ಮೇ 21: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದಡಿ ಅನುದಾನದ ವ್ಯಕ್ತಿ ಸಂಬoಧಿತ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ನಿಗಧಿತ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಲು ಮೇ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆಳ್ವಾಸ್‌ನಲ್ಲಿ ಮೇ 23ರಂದು ಯೋಗ ಮಹೋತ್ಸವ

ಮೂಡುಬಿದಿರೆ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನವತಿಯಿಂದ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ “ಯೋಗ ಮಹೋತ್ಸವ” ಕಾರ್ಯಕ್ರಮವನ್ನು ಮೇ 23ರಂದು ಮಿಜಾರಿನ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.“ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ” ಎಂಬ ಮಹತ್ವದ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಯೋಗದ ಮೂಲಕ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ಸುಮಾರು 500ಕ್ಕೂ ಹೆಚ್ಚು ಯೋಗಾಸಕ್ತರು, ವಿದ್ಯಾರ್ಥಿಗಳು, […]
ಉಡುಪಿ: ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ; ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ ಮೇ 21: ವಸತಿ ಹಾಗೂ ಬಹುಮಹಡಿ ವಸತಿ ಸಮುಚ್ಛಯಗಳು ಕೊಳಚೆ ಹಾಗೂ ತ್ಯಾಜ್ಯ ನೀರುಗಳನ್ನು ಶುದ್ದೀಕರಣ ನಿರ್ವಹಣೆ ಮಾಡದೇ ತೋಡುಗಳ ಮೂಲಕ ನದಿಗೆ ಬಿಟ್ಟು ಜಲಮಾಲಿನ್ಯ ಉಂಟುಮಾಡಿದರೆ ಅಂತಹ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಲತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ವಸತಿ ಸಮುಚ್ಛಯಗಳು, […]
ಧರ್ಮಸ್ಥಳ ಬಂಗ್ಲೆಗುಡ್ಡೆ ತಲೆಬುರುಡೆ ಪ್ರಕರಣ: ಎಸ್‌ಐಟಿ ಅಧಿಕಾರಿಗಳಿಂದ ಮತ್ತೆ ಸ್ಥಳ ಪರಿಶೀಲನೆ, ಕಾರ್ಯಾಚರಣೆ

ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮತ್ತೆ ಸ್ಥಳ ಪರಿಶೀಲನೆ ಮತ್ತು ಮಹಜರು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಸಾಕ್ಷಿದಾರ ಹಾಗೂ ದೂರುದಾರನಾಗಿ ಗುರುತಿಸಿಕೊಂಡಿರುವ ಚಿನ್ನಯ್ಯ ಮೊದಲಿಗೆ ನ್ಯಾಯಾಲಯಕ್ಕೆ ತಂದಿದ್ದ ಮಾನವನ ತಲೆಬುರುಡೆಯನ್ನು ಇದೇ ಬಂಗ್ಲೆಗುಡ್ಡೆ ಪ್ರದೇಶದಿಂದ ತೆಗೆದಿರುವುದಾಗಿ ಹೇಳಲಾಗಿತ್ತು. ಈ ಹಿನ್ನೆಲೆ, ಘಟನೆಯ ಮರುಸೃಷ್ಟಿ (reconstruction) ನಡೆಸುವ ಉದ್ದೇಶದಿಂದ ಎಸ್‌ಐಟಿ ತಂಡ ಮತ್ತೆ ಕಾರ್ಯಾಚರಣೆಗೆ ಇಳಿದಿದೆ. ಈ ಪ್ರಕರಣದಲ್ಲಿ ಸೌಜನ್ಯಾಳ ಮಾವ ವಿಠಲ ಗೌಡ […]
ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ನವೀಕರಿಸಿದ ಮತ್ತು ಉತ್ತಮ ಮೂಲಸೌಕರ್ಯದೊಂದಿಗೆ ಹೊಸ ಸ್ಥಳಕ್ಕೆ ಸ್ಥಳಾಂತರ: ಜೂನ್ 1 ರಿಂದ ಕಾರ್ಯಾಚರಣೆ ಪ್ರಾರಂಭ.

ಉಡುಪಿ, ಮೇ 21, 2026: ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಜೂನ್ 1, 2026 ರಿಂದ ಕಡೆಕಾರ್ ಸ್ವಾಗತ ಗೋಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ತನ್ನ ಹೊಸ, ನವೀಕರಿಸಿದ ಸೌಲಭ್ಯದೊಂದಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಆಸ್ಪತ್ರೆಯು ಮೇ 22 ರಿಂದ 24 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಸಾರ್ವಜನಿಕರಿಗೆ ಮುಕ್ತ ಭೇಟಿಗೆ ಅವಕಾಶ ನೀಡುತ್ತದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. 1984 ರಲ್ಲಿ ಸ್ಥಾಪನೆಯಾದ ಈ ಆಸ್ಪತ್ರೆಯು ಉಡುಪಿ ಮತ್ತು […]