“ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓರಿಯಂಟೇಶನ್ ಕಾರ್ಯಕ್ರಮ”

*ಇಂದಿನ ಕಲಿಕೆಯೇ ನಾಳಿನ ನಾಯಕತ್ವದ ಅಡಿಪಾಯ:ಪ್ರೊ. ನರೇಂದ್ರ ಎಲ್ ನಾಯಕ್* ಮಂಗಳೂರು: ವಿದ್ಯಾರ್ಥಿಗಳು ಇಂದು ಪಡೆಯುವ ಜ್ಞಾನ, ಉತ್ತಮ ಅಭ್ಯಾಸಗಳು ಮತ್ತು ಮೌಲ್ಯಗಳೇ ಅವರ ಭವಿಷ್ಯವನ್ನು ರೂಪಿಸುತ್ತವೆ. ಪ್ರತಿದಿನ ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ಮತ್ತು ಪರಿಶ್ರಮ ಬೆಳೆಸಿಕೊಂಡಾಗ ಅವರು ನಾಳೆ ಆತ್ಮ ವಿಶ್ವಾಸದಿಂದ ಸಮಾಜವನ್ನು ಮುನ್ನಡೆಸುವ ನಾಯಕರಾಗುತ್ತಾರೆ.ವಿದ್ಯಾರ್ಥಿಗಳು ಜ್ಞಾನ , ಶಿಸ್ತು, ಸಮಯ ಪರಿಪಾಲನೆ ಮತ್ತು ಪರಿಶ್ರಮವನ್ನು ಜೀವನದ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಆತ್ಮವಿಶ್ವಾಸ ಮತ್ತು ನಿರಂತರ ಅಧ್ಯಯನ ಪ್ರಧಾನವಾದ ಅಂಶವಾಗಿದೆ. ವಿದ್ಯಾರ್ಥಿ ಜೀವನವು […]
“ನಾಗರಮಠ ಮರಳು ದಕ್ಕೆ: ಲೋಕಾಯುಕ್ತ ಸೂಚನೆ ಮೇರೆಗೆ ತಜ್ಞರ ಸಮಿತಿ ಪರಿಶೀಲನೆ”

ಉಡುಪಿ: ಉಡುಪಿ ಜಿಲ್ಲೆಯ ಕೋಟ ಸಮೀಪದ ನಾಗರಮಠ ಮರಳು ದಕ್ಕೆಯಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಗಂಭೀರ ಸ್ವರೂಪ ಪಡೆದಿದೆ. ಸ್ಥಳೀಯರ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಸೂಚನೆಯಂತೆ ತಜ್ಞರ ಸಮಿತಿ ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಿದ್ಧಪಡಿಸಿದೆ.ಬಾರಕೂರು ಸಮೀಪದ ಹೊಸಾಳ ಗ್ರಾಮದ ಸೀತಾನದಿ ವ್ಯಾಪ್ತಿಯಲ್ಲಿ ಮರಳುಗಾರಿಕೆ ಕಾನೂನು ನಿಯಮಗಳನ್ನು ಉಲ್ಲಂಘಿಸಿ ಹಾಗೂ ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಸ್ಥಳೀಯರಾದ ಗಣೇಶ್ ಶೆಟ್ಟಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.ದೂರಿನ ಗಂಭೀರತೆಯನ್ನು ಪರಿಗಣಿಸಿದ […]
ಮಣಿಪಾಲದ MSDC ಯಲ್ಲಿದೆ ಕಾಸ್ಮೆಟಾಲಜಿ ಪದವಿ ಕೋರ್ಸ್; ಪ್ರವೇಶಾತಿ ಆರಂಭ

ಉಡುಪಿ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ಮತ್ತು ಓರೇನ್ ಇಂಟರ್‌ನ್ಯಾಷನಲ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾಸ್ಮೆಟಾಲಜಿ ಕ್ಷೇತ್ರದಲ್ಲಿ ಬ್ಯಾಚುಲರ್ ಪದವಿ ಕೋರ್ಸ್‌ಗಳಿಗೆ 2026–27ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿವೆ. ಸೌಂದರ್ಯ ವೃತ್ತಿಪರರ ಮುಂದಿನ ಪೀಳಿಗೆಯನ್ನು ಸಬಲಗೊಳಿಸುವ ಉದ್ದೇಶದಿಂದ ರೂಪಿಸಲಾದ ಈ ಕೋರ್ಸ್‌ನಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತರಬೇತಿ ನೀಡಲಾಗುತ್ತದೆ. ಯುಜಿಸಿ ಮಾನ್ಯತೆ ಪಡೆದ ಪದವಿಯಾಗಿರುವುದರಿಂದ ಸರ್ಕಾರ ಹಾಗೂ ಖಾಸಗಿ ವಲಯಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.ಈ ಕೋರ್ಸ್‌ನಲ್ಲಿ ಮಾಸ್ಟರ್ ಕಾಸ್ಮೆಟಾಲಜಿ, ಮೇಕಪ್, ಕೂದಲು ಆರೈಕೆ, ನೇಲ್ ಆರ್ಟ್ ಸೇರಿದಂತೆ ಹಲವು ವಿಷಯಗಳಲ್ಲಿ […]
ಉಡುಪಿ ಜಿಲ್ಲೆಯ 6 ಕಡೆ ಸ್ಪೀಡ್ ರಾಡಾರ್ ಕ್ಯಾಮರಾ ಕಾರ್ಯಾರಂಭ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಕಡೆಗಳಲ್ಲಿ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ.ಇವುಗಳ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳನ್ನು ಜಿಲ್ಲಾ ನಿಯಂತ್ರಣ ಕೊಠಡಿಗಳಲ್ಲಿ ಮಾನಿಟರ್ ಮಾಡಿ ನಿಯಮ ಉಲ್ಲಂಘನೆ ಗಳಿಗೆ ಸಂಬಂಧಿಸಿದ ಚಲನ್‌ಗಳನ್ನು ಪೋಸ್ಟ್ ಮೂಲಕ ಕಳುಹಿಸಲಾಗುತ್ತದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.ಸದ್ಯ ಆರು ಕಡೆಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇನ್ನೂ 14 ಸ್ಥಳಗಳನ್ನು ಇದಕ್ಕಾಗಿ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರದಲ್ಲೇ ವರ್ಕ್ […]
‘ಟಾಕ್ಸಿಕ್’ ಸಿನಿಮಾ ತಡವಾಗಲು ಬಲವಾದ ಕಾರಣಗಳಿವೆ- ನಟಿ ತಾರಾ ಸುತಾರಿಯಾ

ರಾಕಿಂಗ್ ಸ್ಟಾರ್ ಯಶ್ Yash ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್ Toxic ಬಿಡುಗಡೆಯ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿರುವ ನಡುವೆಯೇ, ನಟಿ ತಾರಾ ಸುತಾರಿಯಾ Tara Sutaria ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಚಿತ್ರದ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ಹಲವು ತಾರ್ಕಿಕ ಮತ್ತು ಬಲವಾದ ಕಾರಣಗಳಿವೆ ಎಂದು ಅವರು ಹೇಳಿದ್ದಾರೆ. ಆರಂಭದಲ್ಲಿ ‘ಟಾಕ್ಸಿಕ್’ ಚಿತ್ರವನ್ನು ಮಾರ್ಚ್ 19ರಂದು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ನಂತರ ಮಧ್ಯಪ್ರಾಚ್ಯದಲ್ಲಿ ನಡೆದ ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆ ಬಿಡುಗಡೆಯನ್ನು ಜೂನ್ 4ಕ್ಕೆ ಮುಂದೂಡಲಾಯಿತು. […]