ನಕಲಿ ಬಿಕಿನಿ ಫೋಟೋ ವೈರಲ್: “ಅದು ನನ್ನ ಫೋಟೋ ಅಲ್ಲ” ಸ್ಪಷ್ಟನೆ ನೀಡಿದ ರುಕ್ಕಿಣಿ ವಸಂತ್

ಬೆಂಗಳೂರು: ರುಕ್ಮಿಣಿ ವಸಂತ್ Rukmini Vasanth ಅವರ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ನಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸ್ವಿಮ್ಮಿಂಗ್ ಪೂಲ್ ಬಳಿ ಮಹಿಳೆಯೊಬ್ಬರು ಕಾಣಿಸಿಕೊಂಡಿರುವ ಕೆಲವು ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ಅವು ರುಕ್ಕಿಣಿ ವಸಂತ್ ಅವರದ್ದೇ ಎಂಬ ರೀತಿಯಲ್ಲಿ ಪ್ರಚಾರ ಮಾಡಲಾಗಿತ್ತು. ಆದರೆ, ಈ ಎಲ್ಲಾ ಫೋಟೋಗಳು ಮತ್ತು ವಿಡಿಯೋಗಳು ಡೀಪ್‌ಫೇಕ್ ಹಾಗೂ ಎಐ ತಂತ್ರಜ್ಞಾನ ಬಳಸಿ […]
ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ : 10 ದಿನಗಳಲ್ಲಿ ಮೂರನೇ ಬಾರಿ ಬೆಲೆ ಏರಿಕೆ!

ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಮತ್ತೆ ಏರಿಕೆ ಮಾಡಲಾಗಿದೆ. ಜಾಗತಿಕ ಕಚ್ಚಾ ತೈಲ ದರ ಏರಿಕೆ ಹಾಗೂ ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಇಂಧನ ದರಗಳನ್ನು ಮತ್ತೊಮ್ಮೆ ಹೆಚ್ಚಿಸಿವೆ, ಸರಕಾರ ಘೋಷಿಸಿದೆ. ಕೇಂದ್ರ ಸರಕಾರದ ಈ ನಡೆಯ ಕುರಿತು ಆಕ್ರೋಶವೂ ವ್ಯಕ್ತವಾಗಿದೆ. ಹೊಸ ದರಗಳ ಪ್ರಕಾರ, ಪೆಟ್ರೋಲ್ ಪ್ರತಿ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ New Delhiಯಲ್ಲಿ […]
“ಯುನೈಟೆಡ್ ಹೋಮ್ಸ್ – ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗಾಗಿ ಒಂದು ಆಶ್ರಯ ತಾಣ”

ಮಂಗಳೂರು: ಬಿಜೈಯ ‘ಯುನೈಟೆಡ್ ಫ್ರೆಂಡ್ಸ್ ಟ್ರಸ್ಟ್’ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗಾಗಿ ಹಮ್ಮಿಕೊಳ್ಳಲಾದ ‘ಯುನೈಟೆಡ್ ಹೋಮ್ಸ್’ ವಸತಿ ಯೋಜನೆಯನ್ನು ಅಬ್ಬೆಟ್ಟುವಿನಲ್ಲಿ ಉದ್ಘಾಟಿಸಲಾಯಿತು. 10 ವಸತಿ ಘಟಕಗಳನ್ನು ಒಳಗೊಂಡಿರುವ ಈ ಅಪಾರ್ಟ್‌ಮೆಂಟ್ ಕಟ್ಟಡವನ್ನು ಬಿಜೈಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಡಾ. ಜೆ. ಬಿ. ಸಲ್ಡಾನ್ಹಾ ಅವರು ಆಶೀರ್ವದಿಸಿದರು. ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ಶ್ರೀ ವಾಲ್ಟರ್ ನಂದಳಿಕೆ ಮತ್ತು ದಾನಿ ಶ್ರೀ ಮೈಕಲ್ ಡಿಸೋಜಾ ಅವರ ಪ್ರತಿನಿಧಿಯಾದ ಶ್ರೀ ಸ್ಟೀವನ್ ಪಿಂಟೊ […]
ಉಡುಪಿ: ನಿರ್ಮಾಣ ಹಂತದ ಬಾವಿಯ ದಂಡೆಯ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು

ಉಡುಪಿ: ನಿರ್ಮಾಣ ಹಂತದ ಬಾವಿ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಲ್ಪೆ ಕೊಡವೂರು ಸಮೀಪದ ಉದ್ದಿನಹಿತ್ಲು ಎಂಬಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದೆ.ಕಾರ್ಮಿಕ ಕೊಪ್ಪಳ ಮೂಲದ ರಮೇಶ್ (25) ಮೃತದುರ್ದೈವಿ. ಕಾರ್ಮಿಕರು ಬಾವಿಯಿಂದ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಬಿಡುವ ವೇಳೆ ರಮೇಶ ಬಾವಿಯಲ್ಲಿ ಮಣ್ಣು ತೆಗೆಯುತ್ತಿರುವಾಗ ಬಾವಿಯ ದಂಡೆಯ ಮಣ್ಣು ಒಮ್ಮೆಲೆ ಕುಸಿದಿದ್ದು, ಇದರಿಂದ ರಮೇಶ ಅವರ ಮೈಮೇಲೆ ಮಣ್ಣು ಬಿದ್ದು, ಅವರು ಮಣ್ಣಿನಲ್ಲಿ ಹೂತು […]
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರದ ಸಂಪೂರ್ಣ ಹವಾನಿಯಂತ್ರಿತ 12ನೇ ಶಾಖೆ ಅದ್ದೂರಿ ಉದ್ಘಾಟನೆ.

ಕುಂದಾಪುರ: ಅವಿಭಜಿತ ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ಬ್ಯಾಂಕುಗಳು ವಿಲೀನಗೊಂಡು ಬ್ಯಾಂಕ್ ಹೆಸರೇ ಇಲ್ಲವಾಗಿದೆ. ಪ್ರಸ್ತುತ ದೇಶದಲ್ಲಿಯೇ ಸಹಕಾರಿ ಸಂಘಗಳು ಜನರಿಗೆ ಬೇಕಾದ ಸೇವೆ ನೀಡುವಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದೆ. ಸಹಕಾರಿ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಗೆ ವಿಶೇಷ ಸ್ಥಾನವಿದೆ. ಜನರ ಬೆಳವಣಿಗೆಯ ಒಂದು ಭಾಗವಾಗಿ ಸಹಕಾರಿ ಕ್ಷೇತ್ರ ಬೆಳೆಯುತ್ತಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ. ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಡುಪಿ […]