ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ನಿಯಮ ಜಾರಿ : ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಇದೀಗ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಗಿದೆ. ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ 2,000 ರೂ. ಜಮೆ ಮಾಡುವ ಈ ಯೋಜನೆಯಲ್ಲಿ ಅನರ್ಹರು ಹಾಗೂ ಮೃತಪಟ್ಟವರ ಹೆಸರಿನಲ್ಲಿ ಹಣ ಹೋಗುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಯೋಜನೆಯ ಎಲ್ಲಾ ಫಲಾನುಭವಿಗಳು ‘ಒನ್-ಟೈಮ್ ಬಯೋಮೆಟ್ರಿಕ್’ ಮರು-ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಜೊತೆಗೆ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಖಾತೆಗೆ ಜೋಡಣೆ ಮಾಡಬೇಕಾಗುತ್ತದೆ. ಸರ್ಕಾರ […]

ಉಡುಪಿ: ಟೈಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ; ಚಾಲಕ ಪಾರು

ಉಡುಪಿ: ಟೈಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಗರದ ಅಂಬಾಗಿಲು ಜಂಕ್ಷನ್ ಸಮೀಪ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಕುಂದಾಪುರದತ್ತ ಸಾಗುತ್ತಿದ್ದ ಲಾರಿ ಅಂಬಾಗಿಲು ಜಂಕ್ಷನ್ ಬಳಿ ತಲುಪುತ್ತಿದ್ದಂತೆ ಹಿಂಬದಿಯ ಟೈಯರ್ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಬದಿಗೆ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಮೀನುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿಗೆ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಉಡುಪಿ ಸಂಚಾರ […]

ಕುಂದಾಪುರ- ಗುಡ್ಡೆಯಂಗಡಿಯಲ್ಲಿ ಎಸ್ ಕೆಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್‌ ಉದ್ಘಾಟನೆ

ಉಡುಪಿ: ಡಾ. ಜಿ. ರಾಮಕೃಷ್ಣ ಆಚಾರ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್ ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ.ಲಿ. ವತಿಯಿಂದ ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗ ಹಾಗೂ ಸ್ವಾವಲಂಬನೆ ಕಲ್ಪಿಸುವ ಉದ್ದೇಶದಿಂದ ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಸಮೀಪದ ಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್‌ನ ಉದ್ಘಾಟನಾ ಸಮಾರಂಭವು ಸಂಸ್ಥೆಯ ಕ್ಯಾಂಪಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಾನು ಮತ್ತು ಡಾ.ಜಿ. […]

ಶಾಲಾ ಆರಂಭಕ್ಕೆ ದಿನಗಣನೆ, ಸರಕಾರದಿಂದ ಬಂದ Update ಗಳೇನು?

ಬೆಂಗಳೂರು : ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲು ದಿನಗಣನೆ ಆರಂಭವಾಗಿರುವ ನಡುವೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈ ವರ್ಷದಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಡಿಜಿಟಲ್ ಹಾಜರಿ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಶಾಲಾ ಸುರಕ್ಷತೆ, ಸ್ವಚ್ಛತೆ ಮತ್ತು ದ್ವಿಭಾಷಾ ಬೋಧನಾ ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡಗಳ ಸುರಕ್ಷತೆಯನ್ನು ಪರಿಶೀಲಿಸಲು ಇಲಾಖೆ ಸೂಚಿಸಿದೆ. ಶಿಥಿಲಗೊಂಡಿರುವ ಕಟ್ಟಡಗಳು, ಶೌಚಾಲಯಗಳು ಹಾಗೂ ಅಡುಗೆ […]

“ಉಡುಪಿ ವಿಭಾಗ ಅಂಚೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ”

ಉಡುಪಿ ವಿಭಾಗ ಗ್ರಾಮೀಣ ಅಂಚೆ ಕಛೇರಿಯ ಸುಮಾರು ಉತ್ತರ ವಿಭಾಗ ದ 23 ಕಚೇರಿ ಹಾಗೂ ದಕ್ಷಿಣ ವಿಭಾಗದ 10 ಕಛೇರಿ ಇವರು ಒಂದೇ ದಿನದಲ್ಲಿ 100 ಮಿಕ್ಕಿ ಸೇವಿಂಗ್ ಖಾತೇ ತೆಗೆದಿದ್ದು 33 ಅಂಚೆ ಪಾಲಕರು ಹಾಗೂ ಸಹಾಯಕರಿಗೆ ಕರ್ನಾಟಕ ರಾಜ್ಯ ಚೇಫ್ ಜನರಲ್ ಪೋಸ್ಟಮಾಸ್ಟರ್ ಪ್ರಕಾಶ್ ಇವರು ಅಂಚೆ ಪ್ರಶಸ್ತಿ ಹಾಗೂ ಅಂಚೆ ಪ್ರಶಸ್ತಿ ಪತ್ರ ನೀಡಿ ಉಡುಪಿ ಯಕ್ಷಗಾನ ಕಲಾ ಸಭಾ ಭವನದಲ್ಲಿ ನೀಡಿ ಗೌರವಿಸಿದರು ಉಡುಪಿ ಅಂಚೆ ಸುಪೆರಿಡೆಂಟ್ ರಮೇಶ್ ಪ್ರಭು […]