ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೀಲ್ಸ್ ಸ್ಪರ್ಧೆ

ಉಡುಪಿ: ವಿಶ್ವ ಪರಿಸರ ದಿನಾಚರಣೆ – 2026 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ಪರಿಸರ ಜಾಗೃತಿ ಹಾಗೂ ಹವಾಮಾನ ಕ್ರಮಗಳಿಗೆ ಸಾರ್ವಜನಿಕರ ಸಕ್ರೀಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ವಿಶೇಷ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ; ನಮ್ಮ ಭವಿಷ್ಯಕ್ಕಾಗಿ ಎಂಬ ಧ್ಯೇಯವಾಕ್ಯದಡಿ ನಡೆಯಲಿರುವ ಈ ಸ್ಪರ್ಧೆಯ ಮೂಲಕ ಪರಿಸರ ಸಂರಕ್ಷಣೆ, ಸುಸ್ಥಿರ ಜೀವನಶೈಲಿ, ಹವಾಮಾನ ಬದಲಾವಣೆಯ ಬಗ್ಗೆ ಅರಿವು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ […]

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ – 2026 ರ ಅಂಗವಾಗಿ ಜೂನ್ 2 ರಂದು ಬೆಳಗ್ಗೆ 10 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಮಣಿಪಾಲದ ಶಿವಳ್ಳಿ ಗ್ರಾಮದ ವಿದ್ಯಾನಗರ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ.ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಕುಂದಾಪುರ: ತಿರಸ್ಕೃತ ಬೆಳೆ ವಿಮೆ ಪಟ್ಟಿ ಪ್ರಕಟ – ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಕೃಷಿ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿಗಳ ಫಸಲ್ ಭಿಮಾ ಯೋಜನೆಯಡಿ ಬೈಂದೂರು ತಾಲೂಕಿನ 58 ಹಾಗೂ ಕುಂದಾಪುರ ತಾಲೂಕಿನ 38 ಪ್ರಸ್ತಾವನೆಗಳು ವಿಮಾ ಸಂಸ್ಥೆಯಿoದ ತಿರಸ್ಕೃತಗೊಂಡಿದ್ದು, ತಿರಸ್ಕೃತಗೊಂಡ ರೈತರ ಪ್ರಸ್ತಾವನೆಯ ಪಟ್ಟಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ ಹಾಗೂ ಸಂಬoಧಿತ ಗ್ರಾಮ ಪಂಚಾಯತ್ ಕಚೇರಿಗಳ ನೋಟೀಸ್ ಬೋರ್ಡಿನಲ್ಲಿ ರೈತರ ಮಾಹಿತಿಗಾಗಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕಲ್ಪಿಸಿದ್ದು, ಈವರೆಗೂ […]

ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಟಿ. ರಘು ಮೂರ್ತಿ

ಉಡುಪಿ: ಉಡುಪಿ ನಗರ ಹಾಗೂ ಕೆಲವು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಕಾಮಗಾರಿಯ ಪ್ರಗತಿಯ ವಿಳಂಬದಿoದ ಸಾರ್ವಜನಿಕರಿಗೆ ತೊಂದರೆಗಳು ಉಂಟಾಗುತ್ತವೆ. ಇವುಗಳನ್ನು ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಿ ಕುಡಿಯುವ ನೀರನ್ನು ಒದಗಿಸಬೇಕು ಎಂದು ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾದ ಟಿ. ರಘು ಮೂರ್ತಿರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ […]

ಉಡುಪಿ: 6 ಸ್ಪೀಡ್ ರ್ಯಾಡರ್ ಕ್ಯಾಮೆರಾಗಳ ಕಾರ್ಯಾಚರಣೆ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಆರು ಕಡೆಗಳಲ್ಲಿ ಸ್ಥಾಪಿಸಿರುವ ಸ್ಪೀಡ್ ರ್ಯಾಡರ್ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಬಗ್ಗೆ ಕಣ್ಗಾವಲು ಇರಿಸಿದ್ದು, ಕಳೆದ ಒಂದು ವಾರದಲ್ಲಿ ನಿಯಮ ಉಲ್ಲಂಘಿಸಿದ ಒಟ್ಟು 46753 ವಾಹನಗಳನ್ನು ಪತ್ತೆ ಹಚ್ಚಿವೆ. ಈ ಸಂಬಂಧ ಈವರೆಗೆ 235 ಮಂದಿಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಚ್ಚಿಲ, ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದಂಡತೀರ್ಥ, ಕೋಟ ಪೊಲೀಸ್ […]