ಶ್ರವಣ ದೋಷಗಳಿಗಿನ್ನು ಗುಡ್ ಬೈ ಅನ್ನಿ: ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ನಲ್ಲಿದೆ ನಿಮ್ಮೆಲ್ಲಾ ಶ್ರವಣ ದೋಷಗಳಿಗೆ ಪರಿಹಾರ

ಶ್ರವಣ ಸಮಸ್ಯೆಗಳು ಈ ಆಧುನಿಕ ಕಾಲದಲ್ಲಿ ಜಾಸ್ತಿಯಾಗುತ್ತಿದೆ. ಮಂದವಾಗಿ ಕಿವಿ ಕೇಳುವುದು, ಯಾರೋ ಮಾತಾಡುವಾಗ ಸರಿಯಾಗಿ ಕೇಳದೇ ಇರುವುದು ಇಂತಹ ಸಣ್ಣಪುಟ್ಟ ಸಮಸ್ಯೆಗಳೇ ಕೊನೆಗೆ ದೊಡ್ಡದ್ದಾಗಿ ಬೆಳೆದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಅದಕ್ಕೋಸ್ಕರವೇ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಇಂತಹ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುತ್ತದೆ. ಯಾವೆಲ್ಲಾ ಸಮಸ್ಯೆಗಳಿಗೆ ಪರಿಹಾರ? ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುವುದುನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುವುದುನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ […]

ಮುಂದಿನ ಕೆಲವೇ ಗಂಟೆಗಳಲ್ಲಿ ಕರಾವಳಿ, ಮಲೆನಾಡಿನಲ್ಲಿ ಭಾರೀ ಬಿರುಗಾಳಿ,ಗುಡುಗು, ಸಹಿತ ಮಳೆ!

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಜನರಿಗೆ ಹವಾಮಾನ ಇಲಾಖೆ ತುರ್ತು ಎಚ್ಚರಿಕೆ ನೀಡಿದೆ. India Meteorological Department ಬೆಂಗಳೂರು ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ಗಂಟೆಗಳ ಕಾಲ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದ ಕರಾವಳಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆಯಾಗಲಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ […]

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದ ಶಂಕಿತ ಎಬೋಲಾ ಪ್ರಕರಣಕ್ಕೆ ಇದೀಗ ತೆರೆ ಬಿದ್ದಿದೆ. ಉಗಾಂಡಾದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯ ಲ್ಯಾಬ್ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಸ್ಪಷ್ಟನೆ ನೀಡಿದ್ದಾರೆ. ಉಗಾಂಡಾದಿಂದ ಬಂದ ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಕೆಲವು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಬೆಂಗಳೂರಿನ Rajiv Gandhi Institute of Chest Diseases ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಮಹಿಳೆಯ ರಕ್ತ ಹಾಗೂ ಇತರ ಮಾದರಿಗಳನ್ನು […]

ಬೈಜುಸ್ ಸಂಸ್ಥಾಪಕ ರವೀಂದ್ರನ್ ಗೆ ಆರು ತಿಂಗಳು ಜೈಲು,ನ್ಯಾಯಾಲಯ ನಿಂದನೆ ಆರೋಪದಡಿ ಬಂಧನ

ಸಿಂಗಾಪುರ: ಒಂದು ಕಾಲದಲ್ಲಿ ಭಾರತದ ಅತ್ಯಂತ ಮೌಲ್ಯಯುತ ಎಡ್ಟೆಕ್ ಸಂಸ್ಥೆಗಳಲ್ಲೊಂದಾಗಿದ್ದ BYJU’S ಸಂಸ್ಥೆಯ ಸ್ಥಾಪಕ ರವೀಂದ್ರನ್ Byju Raveendran ಅವರಿಗೆ ಸಿಂಗಾಪುರ ನ್ಯಾಯಾಲಯದಿಂದ ಭಾರೀ ಹಿನ್ನಡೆ ಎದುರಾಗಿದೆ. ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಅವರನ್ನು ನ್ಯಾಯಾಲಯ ನಿಂದನೆ ಆರೋಪದಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಿಂಗಾಪುರ ನ್ಯಾಯಾಲಯದ ಪ್ರಕಾರ, ಏಪ್ರಿಲ್ 2024ರಿಂದ ತಮ್ಮ ಆಸ್ತಿಪಾಸ್ತಿಗಳಿಗೆ ಸಂಬಂಧಿಸಿದಂತೆ ನೀಡಲಾಗಿದ್ದ ಹಲವು ಆದೇಶಗಳನ್ನು ಬೈಜು ರವೀಂದ್ರನ್ ಉದ್ದೇಶಪೂರ್ವಕವಾಗಿ ಪಾಲಿಸಿಲ್ಲ. ನ್ಯಾಯಾಲಯದ ಸೂಚನೆಗಳಿಗೆ ಸ್ಪಂದಿಸಲು ವಿಫಲವಾದ ಹಿನ್ನೆಲೆಯಲ್ಲಿ […]

ಪುತ್ತೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಎಲ್ಲ ಹಂತದಲ್ಲೂ ಸಂತ್ರಸ್ತೆಯ ಪರವಾಗಿ ನಿಲ್ಲುತ್ತೇವೆ- ಡಾ.ನಾಗಲಕ್ಷ್ಮೀ ಚೌಧರಿ

ಉಡುಪಿ: ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಕೊಟ್ಟಿರುವ ತೀರ್ಮಾನದ ಬಗ್ಗೆ ನನಗೆ ಶಾಕ್ ಆಗಿದೆ. ಸಂತ್ರಸ್ತೆಗೆ ಕೇವಲ ಪರಿಹಾರ ನೀಡುವುದರಿಂದ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ತೀರ್ಮಾನದ ಬಗ್ಗೆ ಮತ್ತೆ ಮೇಲ್ಮನವಿ ಸಲ್ಲಿಸಬೇಕಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಂಡು ಹೋಗಬೇಕಾಗುತ್ತದೆ. ನಾವು ಎಲ್ಲ ಹಂತದಲ್ಲೂ ಸಂತ್ರಸ್ತೆಯ ಪರವಾಗಿ […]