ರಾಜ್ಯಪಾಲರ ಅನುಪಸ್ಥಿತಿಯಲ್ಲಿ ರಾಜೀನಾಮೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಹಲವು ತಿಂಗಳಿಂದ ಚರ್ಚೆಯಾಗುತ್ತಿದ್ದ ನಾಯಕತ್ವ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಲಾಗಿದೆ ಎನ್ನಲಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಪಕ್ಷದಲ್ಲಿ ಆರಂಭದಿಂದಲೂ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾಗುತ್ತಿತ್ತು. ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ನಡೆದಿದ್ದರೂ, ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ […]
ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿವೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಂದಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ, ಮಂಜುನಾಥ ಭಂಡಾರಿ ಅವರು ಕಳೆದ 40 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ರಾಜ್ಯದ ವಿವಿಧ ಮಂತ್ರಿಗಳೊಂದಿಗೆ ಅವರು ನಿಕಟ ಸಂಪರ್ಕ ಹೊಂದಿದ್ದು, […]
ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರಾಜ್ಯ ಮಟ್ಟದ ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಪೋಷಕರ ಸಭೆ.

ಕುಂದಾಪುರ: ಮೇ 27 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ವಹಿಸಿದ್ದರು. ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಿರಂತರ ಪ್ರಯತ್ನ ಯಶಸ್ಸಿಗೆ ದಾರಿ. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಲು ನಿರಂತರ […]
“ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಈದುಲ್ ಅಲ್ಹ ಹಬ್ಬ ಆಚರಣೆ”

ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಈದುಲ್ ಅಲ್ಹ ಹಬ್ಬದ ಪ್ರಾರ್ಥನೆ ಹಾಗೂ ನಮಾಜ್ ಖತೀಬರಾದ ಅಬ್ದುಲ್ ರಶೀದ್ ಸಖಾಫಿ ನೆರವೇರಿಸಿದರು ಈ ಸಂದರ್ಭದಲ್ಲಿ ಬದ್ರಿಯ ಜುಮ್ಮಾ ಮಸ್ಜಿದ್ ಅಧ್ಯಕ್ಷರಾದ ಡಾ.ಫಾರೂಕ್ ಚಂದ್ರನಗರ ಈದ್ ಶುಭಾಶಯದ ಮಾತುಗಳನ್ನಡಿದರು ಮಸ್ಜಿದ್ ಉಪಾಧ್ಯಕ್ಷರಾದ ಹಸನಬ್ಬ ಮಜೂರು ಪ್ರ.ಕಾರ್ಯದರ್ಶಿ ಅಶ್ರಫ್ ಮೂಸ,ಕಾರ್ಯದರ್ಶಿಗಳಾದ ಅಶ್ರಫ್ ಕರಂದಾಡಿ,ರಜಬ್ ಕರಂದಾಡಿ, ಕೋಶಾಧಿಕಾರಿ ಪಿ.ಎಂ ಇಬ್ರಾಹಿಂ ಜಮಾತ್ ಕಮಿಟಿ ಸದಸ್ಯರು ಹಾಗೂ ಜಮಾತ್ ಬಾಂದವರು ಇನ್ನಿತರರು ಉಪಸ್ಥಿತರಿದ್ದರು.
ಹೊಸ ಸಚಿವ ಸಂಪುಟ ಸೇರುವ ಸಂಭಾವ್ಯ ಸಚಿವರು ಯಾರು?

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ ಎನ್ನುವ ಮಾತುಗಳು ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತ ಚರ್ಚೆಗಳು ತೀವ್ರಗೊಂಡಿವೆ. ಗುರುವಾರ ಸಂಜೆ ಅವರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತೊರೆದರೆ, ಪ್ರಸ್ತುತ ಸಚಿವ ಸಂಪುಟವೂ ವಿಸರ್ಜನೆಯಾಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ D. K. Shivakumar ಸೇರಿದಂತೆ ಎಲ್ಲ ಸಚಿವರು ತಮ್ಮ ಸ್ಥಾನ ಕಳೆದುಕೊಳ್ಳಲಿದ್ದು, ಹೊಸ ಮುಖ್ಯಮಂತ್ರಿ ಹೊಸ ಸಂಪುಟ ರಚನೆ ಮಾಡಬೇಕಾಗುತ್ತದೆ. ಈ ಬೆಳವಣಿಗೆಯ ನಡುವೆ ಮುಂದಿನ ಸಚಿವ […]