“ಉಡುಪಿಯ ವಿದುಷಿ ದೀಕ್ಷಾಅವರು ಭರತನಾಟ್ಯ ಕ್ಷೇತ್ರದಲ್ಲಿ “ಬಿ ” ಗ್ರೇಡ್ ಕಲಾವಿದೆಯಾಗಿ ಆಯ್ಕೆ”

ಉಡುಪಿಯ ವಿದುಷಿ ದೀಕ್ಷಾ ರಾಮಕೃಷ್ಣ ಇವರು ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ “ಬಿ ” ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿತ್ತಾರೆ. ಇವರು ವಿದುಷಿ ಶ್ರೀಮತಿ ಯಶಾ ರಾಮಕೃಷ್ಣ ಮತ್ತು ಡಾ.ರಾಮಕೃಷ್ಣ ಹೆಗ್ಡೆ ಇವರ ಪುತ್ರಿ ಹಾಗೂ ಶಿಷ್ಯೆಯಾಗಿದ್ದು, ಉಡುಪಿಯ ಹೆಜ್ಜೆ-ಗೆಜ್ಜೆ(ರಿ.) ನೃತ್ಯ ಸಂಸ್ಥೆಯ ಸಹ ನಿರ್ದೇಶಕಿಯಾಗಿದ್ದಾರೆ. ಇತ್ತೀಚಿಗೆ ಪುರಂದರ ಗಾನ ನರ್ತನದ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ನಿರ್ಮಿಸಿದ್ದ ಇವರು, ನೃತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಹಲವಾರು ಸಾಧನೆಯನ್ನು ಮಾಡಿರುತ್ತಾರೆ.
“ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜು ಪ್ರಾರಂಭೋತ್ಸವ; ಅರ್ಹ ವಿದ್ಯಾರ್ಥಿಗಳಿಗೆ 29.88 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ”

ಮಣಿಪಾಲ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮೇ.28 ರಂದು ನಡೆಯಿತು. ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಉತ್ತಮ ಸ್ನೇಹಿತರ ಪಾತ್ರ ಮಹತ್ವವಾದುದು, ಜ್ಞಾನಸುಧಾ ಕೊಡಮಾಡುವ ಮೌಲ್ಯಯುತ ಶಿಕ್ಷಣದ ಸದ್ಬಳಕೆ ಮಾಡಿ ವಿದ್ಯಾರ್ಥಿಗಳು ಪೋಷಕರಿಗೆ ಶೈಕ್ಷಣಿಕ ಸಾಧನೆಯ ಉಡುಗೊರೆ ಕೊಡಿ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ […]
ಮೇ 30ರಂದು ಸುಶಾನ್ ಟ್ರಸ್ಟ್ ನಿಂದ ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ, ಬಹುಮಾನ ವಿತರಣೆ ಕಾರ್ಯಕ್ರಮ

ಉಡುಪಿ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಸ್ಥಾಪಿಸಿರುವ ಸುಶಾನ್ ಟ್ರಸ್ಟ್ ಕೊಡ್ಲಾಡಿ ಇದರ ವತಿಯಿಂದ ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ ಹಾಗು ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಮೇ 30 ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಸಂಚಾಲಕ ಕಿರಣ್ ಶೆಟ್ಟಿ ಕೊಡ್ಲಾಡಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದಾರೆ. […]
ಮಣಿಪಾಲ ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’ನಲ್ಲಿ ಗರಿಷ್ಠ ಉದ್ಯೋಗ ಭರ್ತಿಯ ಸಾಧನೆ

ಮಣಿಪಾಲ: ಕಳೆದ 14 ವರ್ಷಗಳಿಂದ ಕಾರ್ಯಚರಿಸುತ್ತಿರುವ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲ, ೨೦೨೫-೨೬ ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಉದ್ಯೋಗ ಲಭಿಸಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು, ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರವನ್ನು ನೀಡುತ್ತದೆ. ಈ ಕೋರ್ಸಿಗೆ ಪ್ರವೇಶಾತಿ (2026-27)ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು […]
ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ,.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwdನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 […]