ಮಣಿಪಾಲ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

ಉಡುಪಿ: ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಮಣಿಪಾಲದಲ್ಲಿ ಸಾವಿರಾರು ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿದರು. ಮಣಿಪಾಲದ ಟೈಗರ್ ಸರ್ಕಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಎಸಿ ಮೂಲಕ ರಾಜ್ಯದ […]
ಕುಕ್ಕುಂದೂರು ನಕ್ರೆ ಪೊಸನೊಟ್ಟು ರಸ್ತೆ ಕಾಮಗಾರಿಗೆ ವಿ ಸುನಿಲ್ ಕುಮಾರ್ ರವರಿಂದ ಚಾಲನೆ.

ಕಾರ್ಕಳ: ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 70ಲಕ್ಷ ರೂಪಾಯಿ ಅನುದಾನವನ್ನು ಒದಗಿಸಿ ಮೇ 27 ರಂದು ನಮನಪುರ ಪೊಸನೊಟ್ಟು ಕ್ರಾಸ್ ಬಳಿ ಗುದ್ದಲಿ ಪೂಜೆ ನೆರವೇರಿಸಿ ಕಾಯಿ ಒಡೆದು ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜ್ಯೋತಿ ನಗರ ಕೊಂಡೇನಾಕ್ಯಾರು ಗುಳಿಗ ಸ್ಥಾನ ರಸ್ತೆ ಕಾಮಗಾರಿಗೆ […]
ನಾಳೆ ಶಾಸಕಾಂಗ ಪಕ್ಷದ ಸಭೆ, ಸೋಮವಾರವೇ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ?

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಶನಿವಾರ (ಮೇ 30) ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಹೊಸ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ನಡೆಯಲಿದ್ದು, ಬಳಿಕ ಸರ್ಕಾರ ರಚನೆ ಹಕ್ಕು ಮಂಡನೆ ಪ್ರಕ್ರಿಯೆ ನಡೆಯಲಿದೆ. ಸಭೆಯಲ್ಲಿ ಡಿ.ಕೆ.ಶಿವಕುಮಾರ್ […]
ಭಾರತದ ಮಾವಿಗೆ ಜಪಾನ್ ನಿಂದ ಹೊಡೆತ: ಜಪಾನ್ ನಲ್ಲಿ ಭಾರತೀಯ ಮಾವಿಗೆ ನಿರ್ಬಂಧ, ಕಾರಣ ಏನು?

ನವದೆಹಲಿ: ದೇಶದ ಮಾವು ಬೆಳೆಗಾರರಿಗೆ ಹಾಗೂ ರಫ್ತುದಾರರಿಗೆ ದೊಡ್ಡ ಆಘಾತ ಎದುರಾಗಿದೆ. ಸುಮಾರು 20 ವರ್ಷಗಳ ಬಳಿಕ ಮೊದಲ ಬಾರಿಗೆ Japan ಸರ್ಕಾರವು ಭಾರತದ ಮಾವಿನ ಹಣ್ಣಿನ ಆಮದು ಮೇಲೆ ನಿರ್ಬಂಧ ಹೇರಿದೆ. ಈ ವರ್ಷದ ಆರಂಭದಲ್ಲಿ ಭಾರತೀಯ ಸಂಸ್ಕರಣಾ ಘಟಕಗಳಲ್ಲಿ ಕೀಟ ನಿಯಂತ್ರಣ ಕ್ರಮಗಳಲ್ಲಿ ದೋಷಗಳು ಪತ್ತೆಯಾಗಿದ್ದ ಹಿನ್ನೆಲೆ, ಭಾರತದಿಂದ ಮಾವಿನ ಹಣ್ಣುಗಳ ಆಮದುಗಳನ್ನು ಜಪಾನ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರಿಂದ ಬೇಸಿಗೆ ಕಾಲದ ಪ್ರಮುಖ ರಫ್ತು ಹಂಗಾಮಿಗೆ ತೀವ್ರ ಹೊಡೆತ ಬಿದ್ದಿದೆ. ಅಲ್ಫೋನ್ಸೊ, ಕೇಸರ್, ಲಂಗ್ರಾ […]
ಒಂದೇ ವಾಕ್ಯದಲ್ಲಿ ರಾಜೀನಾಮೆ ಪತ್ರ ಬರೆದಿದ್ದ ಸಿದ್ದರಾಮಯ್ಯ! ಸದ್ದು ಮಾಡಿದ ಸಿದ್ದು ರಾಜೀನಾಮೆ ಪತ್ರ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ Siddaramaiah ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Thaawarchand Gehlot ಅವರು ರಾಜೀನಾಮೆಯನ್ನು ಅಂಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವೂ ವಿಸರ್ಜನೆಯಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಸಲ್ಲಿಸಿದ ಪತ್ರ ಇದೀಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಾಮಾನ್ಯವಾಗಿ ರಾಜೀನಾಮೆ ಪತ್ರಗಳಲ್ಲಿ ಕಾರಣಗಳು, ಸರ್ಕಾರದ […]