ಧರ್ಮಸ್ಥಳ: ವೃದ್ಧೆಗೆ ಲಡ್ಡು–ಜ್ಯೂಸ್ ನೀಡಿ ವಂಚನೆ; ಚಿನ್ನಾಭರಣದೊಂದಿಗೆ ಪರಾರಿ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಯೊಬ್ಬರಿಗೆ ಲಡ್ಡು ಪ್ರಸಾದ ಮತ್ತು ಜ್ಯೂಸ್ ನೀಡಿ ಅಸ್ವಸ್ಥಳನ್ನಾಗಿಸಿ ಸುಮಾರು ₹10 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆ Dharmasthala Police Station ನಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ ಕೆ. (70) ಅವರು ಮೇ 23ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ಸಂಬಂಧಿಕರ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಳಿಕ ಮೇ 25ರಂದು ಶ್ರೀ ಕ್ಷೇತ್ರ […]

ಬೆಳುವಾಯಿ–ಕಾಂತಾವರ ಮಾರ್ಗದಲ್ಲಿ ಗೊಂದಲ; ಬಸ್–ಕಾರು ಮುಖಾಮುಖಿ

ಮೂಡಬಿದಿರೆ: ಸಮೀಪದ ಕಾಂತಾವರ ಕ್ರಾಸ್‌ನಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಯು-ಟರ್ನ್ ತಾತ್ಕಾಲಿಕವಾಗಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಏಕಾಏಕಿ ಬದಲಾವಣೆ ಉಂಟಾಗಿ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕಾಂತಾವರದಿಂದ ಬೆಳುವಾಯಿ ಕಡೆಗೆ ಸಾಗುವ ವಾಹನ ಸವಾರರು ಈಗ ಚಿಲಿಂಬಿವರೆಗೆ ತೆರಳಿ ಯು-ಟರ್ನ್ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ […]

ಮೆದುಳು ಬೆಳವಣಿಗೆಯ ಸಮಸ್ಯೆ ಹೊಂದಿರುವ ಮಕ್ಕಳು ಮತ್ತು ಅವರ ಪೋಷಕರಿಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ “ಪ್ರಗತಿ” ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ.

ಮಣಿಪಾಲ 2026: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮನೋವೈದ್ಯಶಾಸ್ತ್ರ ವಿಭಾಗದ ನ್ಯೂರೋಡೆವಲಪ್ ಮೆಂಟಲ್ ಚಿಕಿತ್ಸಾಲಯವು ಮೆದುಳು ಅಭಿವೃದ್ಧಿ ಸಮಸ್ಯೆ ಹೊಂದಿರುವ ಮಕ್ಕಳಿಗಾಗಿ “ಪ್ರಗತಿ” ಎಂಬ ಕುಟುಂಬ ಕಾರ್ಯಕ್ರಮವನ್ನು ಮತ್ತು 2026 ರಂದು ಆಯೋಜಿಸಿತ್ತು. ಕೆಎಂಸಿ ಮಣಿಪಾಲದ ಅಸೋಸಿಯೇಟ್ ಡೀನ್ ಡಾ. ಪ್ರಸಾದ್ ಎಸ್.ಎಸ್. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಸುಧಾಕರ್ ಕಂಟಿಪುಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮತ್ತು ಮಣಿಪಾಲ […]