ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮೀ ಹೆಬ್ಬಾಳಕರ್ ಭಾವನಾತ್ಮಕ ಪೋಸ್ಟ್

ಬೆಳಗಾವಿ: ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮತ್ತು ವ್ಯಕ್ತಿತ್ವ ನೆನೆದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಮೈಸೂರಿನ ನೆಲದ ಒಂದು ಸಾಮಾನ್ಯ ರೈತ ಕುಟುಂಬದಿಂದ ಹೊರಟು, ಕರ್ನಾಟಕದ ಅತ್ಯುನ್ನತ ಹುದ್ದೆಯಾದ ಮುಖ್ಯಮಂತ್ರಿಯ ಸ್ಥಾನವನ್ನು ಅಲಂಕರಿಸಿದರೂ, ತಮ್ಮ ಅಧಿಕಾರದ ಕೊನೆಯ ಕ್ಷಣದವರೆಗೂ ಬಡವರ, ಹಿಂದುಳಿದವರ, ಶೋಷಿತರ ಮತ್ತು ದುರ್ಬಲರ […]

ಜೂ. 3 ರಂದು ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಬಹುದಿನಗಳ ಕುತೂಹಲಕ್ಕೆ ತೆರೆ ಬೀಳುವ ಸಮಯ ನಿಗದಿಯಾಗಿದ್ದು ಡಿಕೆ ಶಿವಕುಮಾರ್ D. K. Shivakumar ಅವರು ಜೂನ್ 3ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸಮಾರಂಭವು ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಸರಳವಾಗಿ ನಡೆಯಲಿದ್ದು, ಯಾವುದೇ ಅದ್ಧೂರಿ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ತೊಂದರೆಯಾಗದಂತೆ ಕಾರ್ಯಕ್ರಮವನ್ನು ರಾಜಭವನ ಆವರಣದಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಮೊದಲಿಗೆ […]

ಮಹಿಳಾ ಸಮೃದ್ಧಿ ಯೋಜನೆ: ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ 1.40 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿ ಸಾಲ; ಅರ್ಜಿ ಸಲ್ಲಿಕೆ ಹೇಗೆ?

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಿಳಾ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಮಹಿಳಾ ಸಮೃದ್ಧಿ ಯೋಜನೆಯು ಗ್ರಾಮೀಣ ಮತ್ತು ಹಿಂದುಳಿದ ಸಮುದಾಯಗಳ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಲು ಮತ್ತು ಸಮಾಜದ ಮುಖ್ಯವಾಹಿನಿಗೆ ಬರಲು ಒಂದು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ಯೋಜನೆಯು ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಗಳನ್ನು ಒದಗಿಸಿ, ಸ್ವಯಂ ಉದ್ಯೋಗ ಮತ್ತು ಆದಾಯ-ಉತ್ಪಾದಕ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸುತ್ತದೆ. ಈ ಹಿನ್ನೆಲೆಯಲ್ಲಿ ಏನಿದು ಮಹಿಳಾ ಸಮೃದ್ಧಿ ಯೋಜನೆ? ಈ ಯೋಜನೆಯಡಿ ದೊರೆಯುವ […]

ಮುಂಗಾರು ಮಳೆ ವಿಳಂಬ, ಈ ವರ್ಷ ಶೇ.4ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆ: ಐಎಂಡಿ

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಮಳೆ ದೇಶಕ್ಕೆ ವಾಡಿಕೆಗಿಂತ ಸ್ವಲ್ಪ ತಡವಾಗಿ ಪ್ರವೇಶಿಸುವ ಸಾಧ್ಯತೆ ಇದ್ದು, ಒಟ್ಟಾರೆ ಮಳೆಯ ಪ್ರಮಾಣವೂ ಸಾಮಾನ್ಯಕ್ಕಿಂತ ಶೇ.10ರಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ. ಹವಾಮಾನ ತಜ್ಞರ ಅಂದಾಜಿನ ಪ್ರಕಾರ, ಈ ವರ್ಷದ ದೀರ್ಘಾವಧಿ ಸರಾಸರಿ ಮಳೆಯು ಶೇ.90ರಷ್ಟಿರಲಿದ್ದು, ಇದರಲ್ಲಿ ಶೇ.4ರಷ್ಟು ಹೆಚ್ಚು-ಕಡಿಮೆಯಾಗುವ ಸಾಧ್ಯತೆಯಿದೆ. 1971ರಿಂದ 2020ರವರೆಗಿನ ಅಂಕಿ-ಅಂಶಗಳ ಆಧಾರದ ಮೇಲೆ ದೇಶದ ಸರಾಸರಿ ಮಳೆಯ ಪ್ರಮಾಣವನ್ನು 87 ಸೆಂ.ಮೀ. ಎಂದು ಪರಿಗಣಿಸಲಾಗಿದೆ. ಮಳೆಯ ಪ್ರಮಾಣವು ಈ ಮಟ್ಟಕ್ಕಿಂತ ಕಡಿಮೆಯಾದರೆ ಅದನ್ನು […]