ಕ್ರೈಸ್ಟ್ ಕಿಂಗ್: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆರಂಭೋತ್ಸವ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆರಂಭೋತ್ಸವ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ಕ್ರೈಸ್ಟ್ ಕಿಂಗ್: ಚರ್ಚ್ನ ಧರ್ಮಗುರುಗಳಾದ ರೆ.ಫಾ.ಕ್ಲೆಮೆಂಟ್ ಮಸ್ಕರೇನ್ಹಸ್ ಅವರು ದೀಪ ಬೆಳಗುವುದರ ಮೂಲಕ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆರಂಭೋತ್ಸವವನ್ನು ನಡೆಸಿಕೊಟ್ಟರು. ನಂತರ ಮಾತನಾಡಿದ ಅವರು “ವಿದ್ಯಾರ್ಥಿಗಳು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳಬೇಕಾದರೆ ನಿರಂತರ ಪರಿಶ್ರಮಿಗಳಾಗಬೇಕು. ನಾವು ಭಾವನೆಗಳಿಲ್ಲದ ರೊಬೋಟ್‌ಗಳಾಗದೆ ಮೃದು ಹೃದಯದವರಾಗಬೇಕು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಮಾಜದಲ್ಲಿ ಸಹಬಾಳ್ವೆ ನಡೆಸಬೇಕು” ಎಂದು ಹೇಳಿದರು. […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಅಫ್ರಿದ್ಅವರು ೨೪ ಮೇ ೨೦೨೬ರಂದು ಮೈಸೂರಿನ ಚಾಮುಂಡಿ ವಿಹಾರ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ೬ ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿಅತ್ಯುತ್ತಮ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಅವರು ಪಾಯಿಂಟ್ ಫೈಟ್ (89 ಕೆಜಿ) ವಿಭಾಗ ಹಾಗೂ ಎಂ/ಎಫ್ ವೆಪನ್(ತಂಡ) ಸೀನಿಯರ್ ವಿಭಾಗದಲ್ಲಿಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕಗಳನ್ನು ಪಡೆದಿರುತ್ತಾರೆ. ಅಲ್ಲದೆ ಎಂ/ಎಫ್ […]

ಉಡುಪಿ: ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು. ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದರು. ಎಸ್‌ಐಆರ್ ಪ್ರಕ್ರಿಯೆ, ನೀಟ್ ಹಗರಣ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಭವನದಿಂದ ಹೊರಟ ಮೆರವಣಿಗೆಯು ಬ್ರಹ್ಮಗಿರಿ ವೃತ್ತದ ಮೂಲಕ ಅಜ್ಜರಕಾಡಿನ ಹುತಾತ್ಮ ಸ್ಮಾರಕದವರೆಗೆ ಸಾಗಿತು. ಅಲ್ಲಿ ಪ್ರತಿಭಟನೆ […]

ಮತ್ತೆ ಸಿಎನ್‌ಜಿ ದರ ಏರಿಕೆ: ಪ್ರತಿ ಕೆಜಿಗೆ ₹2 ಹೆಚ್ಚಳ

ಮುಂಬೈ: ಪೆಟ್ರೋಲ್ ಮತ್ತು ಡೀಸೆಲ್ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರವೂ ಮತ್ತೆ ಏರಿಕೆಯಾಗಿದೆ. ಸರ್ಕಾರಿ ಅನಿಲ ವಿತರಕ ಸಂಸ್ಥೆಯಾದ Mahanagar Gas Limited (ಎಂಜಿಎಲ್) ಮುಂಬೈನಲ್ಲಿ ಸಿಎನ್‌ಜಿ ಬೆಲೆಯನ್ನು ಪ್ರತಿ ಕೆಜಿಗೆ ₹2 ಹೆಚ್ಚಿಸಿರುವುದಾಗಿ ಘೋಷಿಸಿದೆ.ಇದರ ಪರಿಣಾಮ ಎಲ್ಲಾ ರಾಜ್ಯಗಳಿಗೂ ತಟ್ಟಲಿದೆ. ಪರಿಷ್ಕೃತ ದರದಂತೆ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ ₹86ಕ್ಕೆ ಏರಿಕೆಯಾಗಿದೆ. ಜೊತೆಗೆ ಗೃಹ ಬಳಕೆಯ ಪೈಪ್ ನೈಸರ್ಗಿಕ ಅನಿಲ (ಪಿಎನ್‌ಜಿ) ದರವನ್ನು ಪ್ರತಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ (SCM) 50 […]

ಫೇಸ್ಬುಕ್, ವಾಟ್ಸಾಪ್ ಬಳಕೆಗೂ ಶುಲ್ಕ ಕೊಡ್ಬೇಕು, ಏನ್ ಮಾಡೋಕೆ ಹೊರಟಿದೆ Meta !

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆದಾರರಿಗಾಗಿ ಹೊಸ ಪ್ರೀಮಿಯಂ ಸೇವೆಗಳನ್ನು ಪರಿಚಯಿಸುವತ್ತ ಮೆಟಾ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. Facebook, Instagram ಮತ್ತು WhatsApp ಸೇರಿದಂತೆ ತನ್ನ ವಿವಿಧ ವೇದಿಕೆಗಳ ಹೆಚ್ಚುವರಿ ವೈಶಿಷ್ಟ್ಯಗಳನ್ನು ಒಂದೇ ಚಂದಾದಾರಿಕೆ ವ್ಯವಸ್ಥೆಯ ಅಡಿಯಲ್ಲಿ ತರಲು ಕಂಪನಿ ಮುಂದಾಗಿದ್ದು, ಇದಕ್ಕೆ ‘ಮೆಟಾ ಒನ್’ ಎಂದು ಹೆಸರಿಟ್ಟಿದೆ. ಹೆಚ್ಚುವರಿ ಸೌಲಭ್ಯಕ್ಕೆ ಹಣ ಕೊಡಿ: ಸಾಮಾನ್ಯವಾಗಿ ಬಳಕೆದಾರರು ಈಗ ಬಳಸುತ್ತಿರುವ Facebook, Instagram ಮತ್ತು WhatsApp ಸೇವೆಗಳು ಎಂದಿನಂತೆ ಉಚಿತವಾಗಿಯೇ ಮುಂದುವರಿಯಲಿವೆ. ಆದರೆ ಹೆಚ್ಚುವರಿ ಸೌಲಭ್ಯಗಳು […]