ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾಗಾoಧಿ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಅಥವಾ ಖಾಯಂ ಶಿಕ್ಷಕರು / ಉಪನ್ಯಾಸಕರು ವರ್ಗಾವಣೆ / ನಿಯೋಜನೆ ಆದೇಶದ ಮೇರೆಗೆ ಹಾಜರಾಗುವವರೆಗೂ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. […]
ಕಾರ್ಕಳ – ಪ್ರಾಕೃತಿಕ ವಿಕೋಪ ನಿರ್ವಹಣೆ: ಕಂಟ್ರೋಲ್ ರೂಂ ಸ್ಥಾಪನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರ ಸೂಚನೆಯಂತೆ ಕಾರ್ಕಳ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ್ದಲ್ಲಿ, ತಾಲೂಕು ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರದ ದೂ.ಸಂಖ್ಯೆ: 08258-230201 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕಾರ್ಕಳ ತಾಲೂಕು ತಹಶೀಲ್ದಾರರ ಕಛೇರಿ ಪ್ರಕಟಣೆ ತಿಳಿಸಿದೆ.
ವಸತಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಜೀವಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ರಸಾಯನಶಾಸ್ತç, ಜೀವಶಾಸ್ತ್ರ ಗಣಿತ ಹಾಗೂ ಗಣಕ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯಾ ವಿಷಯದಲ್ಲಿ […]
ಮುಂಗಾರು ಮಳೆ: ಕಂಟ್ರೋಲ್ ರೂಂ ಸ್ಥಾಪನೆ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2574802, ಟೋಲ್ ಫ್ರೀ ನಂಬರ್ 1077, ತಾಲೂಕು ತಹಶೀಲ್ದಾರರ ಕಚೇರಿಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಬೈಂದೂರು ದೂ.ಸಂಖ್ಯೆ: 08254-251657, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ತಾಲೂಕು ದೂ.ಸಂಖ್ಯೆ: 08253-250201 ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಾದ ಪೌರಾಯುಕ್ತರು ಉಡುಪಿ ನಗರಸಭೆ ದೂ.ಸಂಖ್ಯೆ: 0820-2520306, […]
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. 2025 ರ ಸೆಪ್ಟೆಂಬರ್ 12 […]