ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿಯಿರುವ 13 ವೈದ್ಯಾಧಿಕಾರಿಗಳ ಹಾಗೂ 04 ಪಿ.ಹೆಚ್.ಸಿ.ಒ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪುಸ್ತಕಗಳ ಮರು ಮುದ್ರಣ ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶನಾಲಯದ ಆದೇಶದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಸಾಲಿನಲ್ಲಿ ಈ ಹಿಂದೆ ಮುದ್ರಿತವಾಗಿ ಹಾಲಿ ಲಭ್ಯವಿಲ್ಲದಿರುವ ಕೆಲವು ಪ್ರಮುಖ ಕೃತಿಗಳನ್ನು ಮರು ಮುದ್ರಣ ಮಾಡುವ ಯೋಜನೆಯನ್ನು ಸಿದ್ದಪಡಿಸಿದ್ದು, ಅದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮರು ಮುದ್ರಿಸಬೇಕಾದ ಕೃತಿಗಳ ಸಂಬoಧ ಸಾರ್ವಜನಿಕರಿಂದಲೂ ಕೋರಿಕೆ ಮತ್ತು ಅಭಿಪ್ರಾಯ ಪಡೆಯುವ ನಿಟ್ಟಿನಲ್ಲಿ ಇಲಾಖೆಯ ವೆಬ್‌ಸೈಟ್: kannadasiri.karnataka.gov.in ನಲ್ಲಿ ಸಾಹಿತ್ಯಾಸಕ್ತರಿಂದ ಅಭಿಪ್ರಾಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ […]
ಕುಂದಾಪುರ : ಪ್ರಾಕೃತಿಕ ವಿಕೋಪ ನಿರ್ವಹಣೆ – ತುರ್ತು ಸೇವಾ ಕೇಂದ್ರ ಸ್ಥಾಪನೆ

ಉಡುಪಿ: ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಮಳೆಗಾಲದ ಸಮಯದಲ್ಲಿ ಅವಘಡಗಳನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕುಂದಾಪುರ ಪುರಸಭೆಯ ವತಿಯಿಂದ 24×7 ಕಾರ್ಯನಿರ್ವಹಿಸುವ ಹೆಲ್ಪ್ಲೈನ್ ಕೇಂದ್ರವನ್ನು ತೆರೆಯಲಾಗಿದ್ದು, ಮಳೆಗಾಲದಲ್ಲಿ ಎದುರಾಗಬಹುದಾದ ಪ್ರವಾಹ, ಸಾಂಕ್ರಾಮಿಕ ರೋಗಗಳು ಮತ್ತು ಇತರೆ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸಾರ್ವಜನಿಕರು ಹೆಲ್ಪ್ಲೈನ್ ಸಂಖ್ಯೆ :08254-230410 ಗೆ ಕರೆ ಮಾಡಬಹುದಾಗಿದೆ. ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು: ಅಪಾಯಕಾರಿ ಕಟ್ಟಡಗಳಿಂದ ದೂರವಿರಬೇಕು – ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಹಳೆಯ ಗೋಡೆ ಅಥವಾ ಕಟ್ಟಡಗಳ ಆಸುಪಾಸಿನಲ್ಲಿ ಆಶ್ರಯ ಪಡೆಯಬಾರದು. […]
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ / ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ, ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. […]
ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಡಿ “ಸರ್ವರಿಗೂ ಸೂರು” ಒದಗಿಸಲು 2024 ರ ಸೆಪ್ಟಂಬರ್ 01 ರಿಂದ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡoತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ಯೋಜನೆಯಡಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, […]