ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ twd.karnataka.gov.in (Post matric(PUC /Degree / PG)prize money) ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ […]

ವಿಕಲಚೇತನರ ರಾಷ್ಟ್ರ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ 6 ವಿಭಾಗಗಳಲ್ಲಿ ಮತ್ತು ಸಂಸ್ಥೆಗಳಿoದ 9 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿ ವೆಬ್‌ಸೈಟ್ www.award.gov.in ನಲ್ಲಿ ಆನ್‌ಲೈನ್ ಮೂಲಕ ನಾಮ ನಿರ್ದೇಶನ / ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಸಂಕೀರ್ಣ, […]

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆ: ಎಂ.ಪುರುಷೋತ್ತಮ್

ಉಡುಪಿ: ಮನುಷ್ಯ ಸಂಕುಲ ಉಳಿವಿಗಾಗಿ ಪ್ರಕೃತಿ ಹಾಗೂ ಜೀವ ವೈವಿಧ್ಯಗಳು ತನ್ನದೇ ರೀತಿಯಲ್ಲಿ ಕೊಡುಗೆ ನೀಡುತ್ತಾ ಬರುತ್ತಿದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸುವ ಕೆಲಸವನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ನಿಷ್ಠೆಯಿಂದ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಮ್ ಪುರುಷೋತ್ತಮ್ ಹೇಳೀದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ […]

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷ ಪತ್ತೆ ಪ್ರಕರಣ: ಓರ್ವ ಆರೋಪಿಯ ಬಂಧನ

ಉಡುಪಿ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 1ರಂದು ಹೊಳೆಯಲ್ಲಿ ಜಾನುವಾರದ ಅವಶೇಷಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಮರಬದ ಅವರು ಕಾಪು ಪಶುವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಪರಿಶೀಲನಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಜಾನುವಾರದ ಮೇಲ್ದವಡೆಯ ಭಾಗ, ಎರಡು ಗೆರಸುಗಳು, ಮಾಂಸ […]

ಕುಂದಾಪುರ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೇ 23ರಂದು ಬೆಳಿಗ್ಗೆ 11.47ರಿಂದ ರಾತ್ರಿ 9.10 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಒಡೆದು ಒಳನುಗ್ಗಿ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಮಾಡಿದ್ದರು. ಈ ಸಂಬಂಧ ಕುಂದಾಪುರ ಗ್ರಾಮಾಂತರ […]