ಉಡುಪಿ: ಜೂ. 30ರಿಂದ ಮತಗಟ್ಟೆ ಅಧಿಕಾರಿಗಳಿಂದ ಮನೆ ಭೇಟಿ

ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸಹಿತ 10ಕ್ಕೂ ಹೆಚ್ಚು ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – 2026 ನಡೆಯಲಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಜೂ. 20ರಂದು ಈ ಪ್ರಕ್ರಿಯೆ ಆರಂಭವಾಗಲಿದ್ದು ಜೂ. 30ರಿಂದ ಬಿಎಲ್‌ಒಗಳು ಮನೆ ಮನೆ ಭೇಟಿ ಶುರು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಪೂರ್ವತಯಾರಿ, ತರಬೇತಿ ಹಾಗೂ ಮುದ್ರಣ ಪ್ರಕ್ರಿಯೆಗಳು […]

ಬ್ರಹ್ಮಾವರದ ಪ್ರಖ್ಯಾತ ಶಿಕ್ಷಣ ಸಂಸ್ಥೆ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆಯು (Vidyalaxmi Group of Institution) ‘ಎಸ್ವಿ ರೆಕ್ರೂಟೆಕ್’ (ESSVEE RECRUITECH) ಸಂಸ್ಥೆಯ ಸಹಯೋಗದೊಂದಿಗೆ ನಾಳೆ (ಜೂನ್ 6, 2026, ಶನಿವಾರ) ಬೃಹತ್ ಉದ್ಯೋಗ ಮೇಳ

ಉಡುಪಿ: ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗದ ಸುವರ್ಣ ಅವಕಾಶವೊಂದನ್ನು ಕಲ್ಪಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆಯು (Vidyalaxmi Group of Institution) ‘ಎಸ್ವಿ ರೆಕ್ರೂಟೆಕ್’ (ESSVEE RECRUITECH) ಸಂಸ್ಥೆಯ ಸಹಯೋಗದೊಂದಿಗೆ ನಾಳೆ (ಜೂನ್ 6, 2026, ಶನಿವಾರ) ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆ ಹೊಂದಿರುವ ಹಾಗೂ AICTE ಮತ್ತು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಈ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ […]

ಅಶ್ವಥ ಎಲೆಯಲ್ಲಿ ಮೂಡಿಬಂದ ಡಿಕೆಶಿ ಭಾವಚಿತ್ರ

ಉಡುಪಿ: ಮಹೇಶ್ ಮರ್ಣೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕಲಾವಿದ. ಅಶ್ವಥ ಎಲೆಯಲ್ಲಿ ಭಾವಚಿತ್ರ ಮೂಡಿಸುವುದರಲ್ಲಿ ಇವರು ಎತ್ತಿದ ಕೈ. ಅನೇಕ ಗಣ್ಯರು ಮತ್ತು ರಾಜಕೀಯ ನಾಯಕರ ಭಾವಚಿತ್ರಗಳನ್ನು ಎಲೆಯಲ್ಲಿ ಮೂಡಿಸಿ ಸೈ ಎನಿಸಿದ್ದಾರೆ. ಇದೀಗ ನೂತನ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರ ಭಾವಚಿತ್ರ ವನ್ನು ಅಶ್ವಥ ಎಲೆಯಲ್ಲಿ ರಚಿಸುವ ಮೂಲಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಮಹೇಶ್ ಮರ್ಣೆ ಯವರು ನೂತನ ಮುಖ್ಯಮಂತ್ರಿ ಯವರಿಗೆ ಅಭಿನಂದಿಸಿದ್ದಾರೆ. ಇದು ಕಲಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದೆ.

ಕೊನೆಗೂ ಬಿಜೆಪಿಗೆ ಗುಡ್‌ಬೈ ಹೇಳಿದ ಕೆ. ಅಣ್ಣಾಮಲೈ, ರಾಜೀನಾಮೆ ಅಂಗೀಕಾರ

ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಅಂಗೀಕರಿಸಿದೆ. ಇದರೊಂದಿಗೆ ಬಿಜೆಪಿಯೊಂದಿಗಿನ ಅವರ ಆರು ವರ್ಷಗಳ ಸುದೀರ್ಘ ಸಂಬಂಧಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಜೂನ್ 2ರಂದು ಅಣ್ಣಾಮಲೈ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆಯ ನಂತರವೂ ಅವರು ಬಿಜೆಪಿಯಲ್ಲೇ ಮುಂದುವರಿಯಲಿದ್ದಾರೆ ಹಾಗೂ […]

ಆಯುಷ್ಮಾನ್ ಯೋಜನೆಯಡಿ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ

ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬAಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಮುಂತಾದ ಲಕ್ಷಣಗಳನ್ನು ಹೊಂದಿರುವವರು ತಕ್ಷಣ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ತಜ್ಞ ವೈದ್ಯರ […]