ಅಜೆಕಾರ್ ಜ್ಞಾನಸುಧಾ: ದೇಶಸುಧಾ ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ ಕಾರ್ಕಳ: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರಮೊದಲು ಎಂಬ ಭಾವ ನಮ್ಮೊಳಗೆ ಮೊಳಗಲು ಸಾಧ್ಯವಿದೆ ಎಂದು ಕರ್ನಾಟಕ ವಿಧಾನ ಪರಿಷತ್‍ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.ಅವರು ಅಜೆಕಾರಿನ ಪದ್ಮನಗರದ ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಅಜೆಕಾರ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಅರ್ಪಿಸುವ ತಿಂಗಳ ಸರಣಿ ಮಾಲಿಕೆ ‘ದೇಶಸುಧಾ’ವನ್ನು ಭಾರತೀಯ ಸೇನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಒಂದು ಲಕ್ಷ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಎ ಐ ಆಧಾರಿತ ಶ್ರವಣಸಾಧನ ವಿನ್ಯಾಸ:

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪೂರ್ಣಿತ, ಅನನ್ಯ ಆಚಾರ್ಯ, ಜತ್ತನ್ ಶ್ರದ್ಧಾ ವಸಂತ್ ಮತ್ತು ದೀಪ್ತಿ ಇವರು ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಪವಿತ್ರ ಪೂರ್ಣಿಮಾ ಮತ್ತು ರಘುನಾಥ್ ಇವರ ಮಾರ್ಗದರ್ಶನದಲ್ಲಿ ಎ ಐ ಆಧಾರಿತ ಶ್ರವಣ ಸಾಧನ “ಹಿಯರ್ ಪ್ಯೂಶನ್” ಅನ್ನು ಅಭಿವೃದ್ಧಿ ಪಡಿಸಿದ್ದಾರೆ. ಶ್ರವಣ ದೋಷವು ಪರಿಣಾಮಕಾರಿ ಸಂವಹನ ಮತ್ತು ಜೀವನದ ಗುಣಮಟ್ಟ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಾಮಾನ್ಯ ಶ್ರವಣ ಸಾಧನಗಳು […]

ಹಸಿರಲೆ ಗೊಬ್ಬರ ಬೀಜಗಳ ಬಳಕೆಯಿಂದ ಮಣ್ಣಿನ ಆರೋಗ್ಯ ವೃದ್ಧಿ.

ಕೃಷಿಯಲ್ಲಿ ಗುಣಮಟ್ಟದ ಆಹಾರ ಉತ್ಪಾದಿಸುವ ದೃಷ್ಟಿಯಿಂದ ಸರ್ಕಾರವು ಸಮಗ್ರ ಪೋಷಕಾಂಶ ನಿರ್ವಹಣೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಮಣ್ಣಿನ ಫಲವತ್ತತೆಯನ್ನು ಉತ್ತಮ ಪಡಿಸುವ ಸಲುವಾಗಿ ಮಣ್ಣಿಗೆ ಹೆಚ್ಚಿನ ಪ್ರಮಾಣದಲ್ಲಿ ವಿವಿಧ ಸಾವಯವ ಗೊಬ್ಬರಗಳನ್ನುಸೇರಿಸುವುದು ಅವಶ್ಯಕವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಣ್ಣಿನಲ್ಲಿ ಸಾವಯವ ಅಂಶವು ಕಡಿಮೆಯಾಗುತ್ತಾ ಬಂದಿದ್ದು, ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿದೆ. ರಾಜ್ಯದಲ್ಲಿ ಸುಮಾರು 58.00 ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಮಣ್ಣಿನಲ್ಲಿ ಶೇ.0.5ಕ್ಕೂ ಕಡಿಮೆ ಸಾವಯವ ಇಂಗಾಲ ಇರುವುದು ಮಣ್ಣು ಮಾದರಿಗಳ ವಿಶ್ಲೇಷಣೆಯಿಂದ ಕಂಡುಬಂದಿರುತ್ತದೆ. ಆದ್ದರಿಂದ ಮಣ್ಣಿಗೆ […]

ಡಿಕೆ ಸರ್ಕಾರ್ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ !!!

ಮೊದಲ ಶಾಕ್.. ಕೆರಳಿದ ಹಿರಿಯ ನಾಯಕ… ಅಸಮಾಧಾನ ಸ್ಪೋ…!!!ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲುಗಳ ಮೇಲೆ ಸವಾಲುಗಳು ಎಂಬಂತೆ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. “ನನಗೆ ಬೆಂಗಳೂರು ಉಸ್ತುವಾರಿ ಖಾತೆ ನೀಡುವುದಾಗಿ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದರು. ಆದರೆ ನೀಡಿಲ್ಲ..ನಾನು ಆತ್ಮ ಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡುವುದಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ. […]

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ.

ಬೆಂಗಳೂರು, ಜೂ.05: ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಬೇಸರಗೊಂಡ ರಾಮಲಿಂಗಾರೆಡ್ಡಿ ಅವ್ರು ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದು, ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಣೆ ಮಾಡಿದ್ದಾರೆ.