ಕಲಾತಂಡ ಮತ್ತು ಕಲಾವಿದರಿಂದ ಅರ್ಜಿ ಆಹ್ವಾನ

ಉಡುಪಿ: ಭಾರತೀಯ ಸಾಂಸ್ಕೃತಿಕ ಸಂಬoಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬoಧಿಸಿದoತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದ್ದು, ಸಂಸ್ಥೆಯ ವತಿಯಿಂದ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪಾನೆಲ್ ಮಾಡುವ ಜೊತೆಗೆ ಅವರ ಪ್ರತಿಭೆಯನ್ನು ಹೆಚ್ಚು ಪ್ರಚರಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ಜೂನ್ 12 ರ ಒಳಗಾಗಿ ವೆಬ್‌ಸೈಟ್ www.kannadasiri.karnataka.gov.in […]
ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಪುವಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಮಾನ್ಯತೆ ಪಡೆದಿರುವ 3 ವರ್ಷಗಳ ಅವಧಿಯ ಡಿಪ್ಲೋಮಾ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ, ಪಿ.ಯು.ಸಿ ಪಾಸ್/ ಫೇಲ್ ಆಗಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.dte.kar.nic.inನಲ್ಲಿ ಅಥವಾ ನೇರವಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆಧುನಿಕ ಉದಯೋನ್ಮುಖ ಕೋರ್ಸುಗಳಾದ ಆಟೋಮೇಷನ್ & ರೊಬೋಟಿಕ್ಸ್ ವಿಭಾಗ, ಗಣಕಯಂತ್ರ ವಿಭಾಗ, ಯಾಂತ್ರಿಕ ವಿಭಾಗ ಮತ್ತು ವಿದ್ಯುನ್ಮಾನ ವಿಭಾಗಗಳಲ್ಲಿ ಸೀಟುಗಳು ಲಭ್ಯವಿದ್ದು, ಜೂನ್ 30 ರ […]
ಉಡುಪಿ: ಯುವತಿ ನಾಪತ್ತೆ

ಉಡುಪಿ: ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆ ನಿವಾಸಿ ಸೌಂದರ್ಯ ಹೆಚ್ ಎ, (20) ಎಂಬ ಯುವತಿಯು ಮೇ 30 ರಂದು ತನ್ನ ಕಾಲೇಜಿನ ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದವರು, ಪ್ರವಾಸಕ್ಕೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ. ಯುವತಿಯು 4 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈ ಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂ: 0820-2520444, […]
ಅಂಬಾಗಿಲು: ರಸ್ತೆ ಬದಿಯ ಮಣ್ಣು ಕುಸಿತ: ಮಣ್ಣಿನಲ್ಲಿ ಸಿಲುಕಿದ ತಂಪುಪಾನೀಯ ಸಾಗಾಟದ ವಾಹನ

ಉಡುಪಿ: ರಸ್ತೆ ಬದಿಯ ಮಣ್ಣು ಕುಸಿದ ಪರಿಣಾಮ ತಂಪು ಪಾನೀಯ ಸಾಗಾಟದ ವಾಹನವೊಂದು ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ಅಂಬಾಗಿಲು–ಮಣಿಪಾಲ ರಸ್ತೆಯ ಸುಜಾತಾ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಶನಿವಾರ ನಡೆದಿದೆ. ಮಣ್ಣಿನಲ್ಲಿ ಸಿಲುಕಿದ ವಾಹನವನ್ನು ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಯಿತು. ಚರಂಡಿ ಕಾಮಗಾರಿಗಾಗಿ ರಸ್ತೆ ಬದಿಯಲ್ಲಿ ಹೊಂಡವನ್ನು ತೋಡಲಾಗಿದ್ದು, ಕಾಮಗಾರಿ ಬಳಿಕ ಅದನ್ನು ಸಮರ್ಪಕವಾಗಿ ಮುಚ್ಚದಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇತ್ತೀಚಿನ ಮಳೆಯಿಂದ ನೀರು ಹರಿದು ಮಣ್ಣು ಸಡಿಲಗೊಂಡಿದ್ದು, ರಸ್ತೆಯ ಅಂಚಿನಲ್ಲಿ ದೊಡ್ಡ ಗುಂಡಿ ನಿರ್ಮಾಣವಾಗಿದೆ. ರಸ್ತೆಯ ಅಂಚಿನ […]
ಜನಸಾಮಾನ್ಯರಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಜನಸಾಮಾನ್ಯರಲ್ಲಿ ರೋಗಗಳ ಹರಡುವುದು, ಅವುಗಳ ನಿಯಂತ್ರಣದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವ ಬಗ್ಗೆ, ಆರೋಗ್ಯ ಶಿಕ್ಷಣವನ್ನು ನೀಡಿ ಎಚ್ಚರದಿಂದಿರಲು ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಗಳನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂ / ಮಲೇರಿಯಾ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮುಂಗಾರು ಮಳೆ ಈಗಾಗಲೇ ಜಿಲ್ಲೆಯಲ್ಲಿ […]