ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಾಮೆಂಟ್; ಓರ್ವ ಬಂಧನ

ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಹಾಗೂ ಜಾತಿನಿಂದನಾತ್ಮಕ ಕಾಮೆಂಟ್ ಮಾಡಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಕಾರ್ಕಳ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಬಂಧಿತ ಆರೋಪಿ. ‘ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಭಾವಚಿತ್ರದೊಂದಿಗೆ ಅವರ ಹೇಳಿಕೆಯೊಂದನ್ನು ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್‌ಗೆ ಜೂನ್ 6ರಂದು ಸುಧೀರ ಬಂಗೇರ […]
ಉಡುಪಿ: ನಿರಂತರ ಬೆಲೆ ಏರಿಕೆ – ಕೇಂದ್ರ ಸರ್ಕಾರ ಜನಾಕ್ರೋಶಕ್ಕೆ ಬಲಿಯಾಗಲಿದೆ -ರಮೇಶ್ ಕಾಂಚನ್

ಉಡುಪಿ: ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸ್ಲೋ ಪಾಯ್ಸನ್ ನೀಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಅಚ್ಚೇ ದಿನ್ ಕೊಡುತ್ತೇವೆ ಎಂದು ದೇಶದ ಜನರಿಗೆ ಭರವಸೆ ನೀಡಿದ ಮೋದಿ ಅಧಿಕಾರಕ್ಕೆ ಬಂದ ಬಳಿಕ ದಿನಂಪ್ರತಿ ಬೆಲೆ ಏರಿಕೆಯನ್ನು ಮಾಡುವ ಮೂಲಕ ದೇಶದ ಜನರಿಗೆ ದ್ರೋಹವನ್ನು ಬಗೆದಿದ್ದಾರೆ.ಅದಾನಿ, ಅಂಬಾನಿ ಅವರ ಹಿತಾಸಕ್ತಿಗಾಗಿ ದೇಶದ ಜನರ ಬದುಕು ದುಸ್ತರಗೊಳ್ಳುವಂತೆ ಮಾಡುತ್ತಿದ್ದಾರೆ. […]
ಸಿಇಟಿ ಟಾಪ್-10ರಲ್ಲಿ ಎಕ್ಸ್ಪರ್ಟ್ ವಿದ್ಯಾರ್ಥಿಗಳ ಪ್ರಭುತ್ವ: 15 ರ‍್ಯಾಂಕ್‌ಗಳ ಐತಿಹಾಸಿಕ ಸಾಧನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ಸಿಇಟಿ ಪರೀಕ್ಷೆಯ ಆರು ವಿಭಾಗದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೊದಲ 10 ರ‍್ಯಾಂಕ್‌ಗಳಲ್ಲಿ 15 ರ‍್ಯಾಂಕ್ ಪಡೆದು ಹೊಸ ಇತಿಹಾಸವನ್ನು ಸಂಸ್ಥೆಯು ನಿರ್ಮಾಣ ಮಾಡಿದೆ. ಮೊದಲ 10 ರ‍್ಯಾಂಕ್‌ಗಳಲ್ಲಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೊದಲ 3ನೇ ರ‍್ಯಾಂಕ್, ಮೂವರು ವಿದ್ಯಾರ್ಥಿಗಳು ನಾಲ್ಕನೇ ರ‍್ಯಾಂಕ್, ಓರ್ವ ವಿದ್ಯಾರ್ಥಿ ಆರನೇ ರ‍್ಯಾಂಕ್, ಮೂವರು ವಿದ್ಯಾರ್ಥಿಗಳು ಏಳನೇ ರ‍್ಯಾಂಕ್, ಐವರು ವಿದ್ಯಾರ್ಥಿಗಳು ಎಂಟನೇ ರ‍್ಯಾಂಕ್ ಪಡೆದು […]
ಕ್ರೈಸ್ಟ್ ಕಿಂಗ್: ವಿಶ್ವ ಪರಿಸರ ದಿನಾಚರಣೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಸ್ಥೆಯ ಫಾ.ಎಫ್.ಪಿ.ಎಸ್. ಮೋನಿಸ್ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಧ್ಯಾಯರಾದ ಐ.ಕ್ರಿಸ್ಟೋಫರ್ ಕೋಟ್ಯಾನ್‌ರವರು ಅವರು ಮಾತನಾಡಿ “ಈ ದಿನವು ಪ್ರಕೃತಿಯ ಹುಟ್ಟು ಹಬ್ಬವಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ತಾಯಿಯ ಹೆಸರಿನಲ್ಲಿ ಒಂದು ಗಿಡವನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸೋಣ” ಎಂದು ಹೇಳಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ದೀಪ್ತಿ ಹಾಗೂ ಏಳನೇ ತರಗತಿಯ ವಿದ್ಯಾರ್ಥಿಯಾದ ಆ್ಯಶ್ನನ್ […]
ಐಟಿಐ ಗ್ರೇಡಿಂಗ್ ನಲ್ಲಿ ನೇಶನಲ್ ಐಟಿಐ ಬಾರ್ಕೂರಿಗೆ ಉಡುಪಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ

ಉಡುಪಿ: 2026-2027 ನೇ ಸಾಲಿನಲ್ಲಿ ಕೌಶಲ್ಯಾಭಿವ್ರಧ್ಧಿ ಮತ್ತು ಉದ್ಯಮ ಶೀಲತೆ ಇಲಾಖೆಯು ರಾಷ್ಟ್ರೀಯ ಮಟ್ಟದಲ್ಲಿ ನಡೆಸಿದ ಐಟಿಐ ಸಂಸ್ಥೆಗಳ ಗುಣಮಟ್ಟ, ವಿದ್ಯಾರ್ಥಿಗಳ ದಾಖಲಾತಿ, ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶವನ್ನು ಪರಿಗಣಿಸಿ ಐಟಿಐ ಗ್ರೇಡಿಂಗ್ ನ ಲ್ಲಿ ನೇಶನಲ್ ಐಟಿಐ ಬಾರ್ಕೂರು ಸಂಸ್ಥೆ ತೃತೀಯ ಬಾರಿಗೆ ಉಡುಪಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದಿರುತ್ತದೆ. ಸಂಸ್ಥೆಯನ್ನು ಮುನ್ನೆಡೆಸುವಲ್ಲಿ ಸಲಹೆ ಸಹಕಾರಗಳನ್ನು ನೀಡುತ್ತಾ ಬಂದಿರುವ ಸಂಸ್ಥೆಯ ಆಡಳಿತ ಮಂಡಳಿ, ದಿ ಬಾರ್ಕೂರು ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಶಾಂತಾರಾಮ ಶೆಟ್ಟಿ,ಉಪಾಧ್ಯಕ್ಷರಾದ ವಿಠ್ಠಲ ಶೆಟ್ಟಿ […]