ಗೃಹಲಕ್ಷ್ಮೀ ಹಣದ ದುರುಪಯೋಗ ತಡೆಗಟ್ಟಲು ಸರ್ಕಾರದಿಂದ ಹೊಸ ರೂಲ್ಸ್! ಮುಂದಿನ ತಿಂಗಳಿಂದ ಜಾರಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣದ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಫಲಾನುಭವಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಪ್ರಕ್ರಿಯೆ ಆರಂಭವಾಗಲಿದೆ. ಪ್ರಸ್ತಾವಿತ ವ್ಯವಸ್ಥೆಯಂತೆ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಬಯೋಮೆಟ್ರಿಕ್ ಪೂರ್ಣಗೊಳಿಸದಿದ್ದರೆ ಯೋಜನೆಯಡಿ ನೀಡಲಾಗುವ ಮಾಸಿಕ ₹2,000 ಆರ್ಥಿಕ ಸಹಾಯಧನ ಪಡೆಯಲು ತೊಂದರೆಯಾಗಬಹುದು ಎನ್ನಲಾಗಿದೆ. ಬಯೋಮೆಟ್ರಿಕ್ ನೋಂದಣಿಗಾಗಿ ಪ್ರತಿ ಫಲಾನುಭವಿಯಿಂದ ₹5 ಶುಲ್ಕ ವಸೂಲಿ ಮಾಡುವ ಪ್ರಸ್ತಾಪವೂ ಸರ್ಕಾರದ ಪರಿಶೀಲನೆಯಲ್ಲಿದೆ. ಇದೇ ವೇಳೆ […]

ಅಂಗಾಂಗ, ಚರ್ಮ ಹಾಗೂ ಕೂದಲು ದಾನ ಜಾಗೃತಿ ಅಭಿಯಾನಕ್ಕಾಗಿ ಹಿಮಾಲಯ ಪ್ರದೇಶದಲ್ಲಿ ಬೈಕ್ ರೈಡ್

ಮಣಿಪಾಲ: ಅಂಗಾಂಗ ದಾನ, ಚರ್ಮದಾನ ಹಾಗೂ ಕೂದಲು ದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರೋಟರಿ ಕ್ಲಬ್ ಮಣಿಪಾಲ ಟೌನ್ ಹಾಗೂ ಮಾಹೆ ಮಣಿಪಾಲದ ಸಹಯೋಗದಲ್ಲಿ ವಿಶೇಷ ಬೈಕ್ ರೈಡ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಮಣಿಪಾಲ ಟೌನ್ ಅಧ್ಯಕ್ಷರು ಹಾಗೂ ಈ ಅಭಿಯಾನದ ಮುಂದಾಳತ್ವ ವಹಿಸಿರುವ ರೋ. ಡಾ. ದೀಪಕ್ ರಾಮ್ ಬಾಯಿರಿ ತಿಳಿಸಿದ್ದಾರೆ. ಜೂನ್ 12 ರಿಂದ 24, 2026ರವರೆಗೆ ನಡೆಯಲಿರುವ ಈ ಅಭಿಯಾನವು ಚಂಡೀಗಢದಿಂದ ಆರಂಭಗೊಂಡು ಹಿಮಾಲಯದ […]

ಫಿಲಿಪೈನ್ಸ್‌ನಲ್ಲಿ ಭೀಕರ ಭೂಕಂಪ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ತತ್ತರಿಸಿದ ದ್ವೀಪ ರಾಷ್ಟ್ರ!

ಮನಿಲಾ: ದಕ್ಷಿಣ ಫಿಲಿಪೈನ್ಸ್‌ ನ ಮಿಂಡನಾವೊ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಸಾವನ್ನಪ್ಪಿದವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರಿಕ್ಟರ್ ಮಾಪಕದಲ್ಲಿ 7.8 ರಷ್ಟು ತೀವ್ರತೆಯ ಈ ವಿನಾಶಕಾರಿ ಭೂಕಂಪದಿಂದಾಗಿ ನೂರಾರು ಕಟ್ಟಡಗಳು ನೆಲಸಮಗೊಂಡಿದ್ದು, ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ಭೂಕಂಪದ ಬೆನ್ನಲ್ಲೇ ಕರಾವಳಿ ಭಾಗದಲ್ಲಿ ಸುನಾಮಿ ಮುನ್ನೆಚ್ಚರಿಕೆ ನೀಡಲಾಗಿದ್ದು, ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿತ್ತು.ಪ್ರಸ್ತುತ ಲಭ್ಯವಿರುವ ಮಾಹಿತಿಯ ಪ್ರಕಾರ, ಭೂಕಂಪದಲ್ಲಿ 450 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ವಿಪತ್ತು ನಿರ್ವಹಣಾ ಪಡೆಗಳು ಯುದ್ಧೋಪಾದಿಯಲ್ಲಿ ರಕ್ಷಣಾ […]

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಉಡುಪಿ: ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ–ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್ ಬಳಿ ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುತ್ತಿದ್ದ ವೇಳೆ, ಪೇಟೆ […]

ಉಡುಪಿಯಲ್ಲಿದೆ ಮಹಿಳೆಯರಿಗಾಗಿ ಎಂಎನ್‌ಸಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ: ನಗರದಲ್ಲಿ ಮಹಿಳೆಯರಿಗಾಗಿ ಬಹುರಾಷ್ಟ್ರೀಯ ಕಂಪನಿ (MNC)ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 30 ರಿಂದ 45 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಭಾಗಕಾಲಿಕ (Part-time) ಹುದ್ದೆಗಳಿಗೆ 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಶಾಶ್ವತ ಹುದ್ದೆಗಳಿಗೆ ಪದವೀಧರರು (Graduates) ಮಾತ್ರ ಅರ್ಹರಾಗಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ರಿಂದ ₹60,000 ವರೆಗೆ ವೇತನ, ಬೋನಸ್ ಸೌಲಭ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರವಾಸಗಳ ಅವಕಾಶ ಸೇರಿದಂತೆ ವಿವಿಧ ಕಾರ್ಪೊರೇಟ್ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು […]