ಕಾರ್ಕಳ ಕ್ರೈಸ್ಟ್ ಕಿಂಗ್: ಕೆಸಿಇಟಿಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ; ಅಗ್ರ 500’ರ ಒಳಗೆ ಒಂದು ಹಾಗೂ 1000’ದ ಒಳಗೆ ಇಬ್ಬರು ವಿದ್ಯಾರ್ಥಿಗಳಿಗೆ ರ್ಯಾಂಕ್.

ಕಾರ್ಕಳ: ಕರ್ನಾಟಕ ಪರೀಕ್ಷಾ ಪ್ರಾಧೀಕಾರವು ಇಂಜಿನಿಯರಿಂಗ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್‍ಗಳ ಪ್ರವೇಶಾತಿಗಾಗಿ ನಡೆಸುವ ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಈ ಬಾರಿ ಒಟ್ಟು 152 ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆ ಬರೆದಿದ್ದು ವಿಜ್ಞಾನ ವಿಭಾಗಕ್ಕೆ ಅಂಕಗಳ ಯಾವುದೇ ಮಿತಿ ಇಲ್ಲದೆ ದಾಖಲಾತಿ ನೀಡಿಯೂ ಅಗ್ರ ಇಪ್ಪತ್ತು ಸಾವಿರದ ಒಳಗೆ 129 ರ್ಯಾಂಕ್‍ಗಳನ್ನು ಪಡೆದಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಸಂಸ್ಥೆಯ ವಿದ್ಯಾರ್ಥಿ ವಿಜೇತ್ ಶೆಟ್ಟಿಗಾರ್ 236 ನೇ ರ್ಯಾಂಕ್ ಪಡೆದುಕೊಂಡಿದ್ದಾನೆ. […]

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ|ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ.

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಅಂಗಸಂಸ್ಥೆಯಾದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮಂಗಳೂರಿನ ಡೀನ್ ಹಾಗೂ ಸಮುದಾಯ ಆರೋಗ್ಯ ವಿಭಾಗದ ಪ್ರೊಫೆಸರ್ ಡಾ| ಬಿ. ಉನ್ನಿಕೃಷ್ಣನ್ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಉಪ ವೈದ್ಯಕೀಯ ಅಧೀಕ್ಷಕ ಹಾಗೂ ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗದ ಪ್ರೊಫೆಸರ್ ಡಾ| ಶಿರನ್ ಶೆಟ್ಟಿ ಅವರು ಪ್ರತಿಷ್ಟಿತ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್, ಎಡಿನ್ ಬರ್ಗ್ (FRCP Edin) ಸಂಸ್ಥೆಯ ಗೌರವಾನ್ವಿತ ಫೆಲೋ ಆಗಿ ಆಯ್ಕೆಯಾದ ನಿಮಿತ್ತ, ಮಣಿಪಾಲದಲ್ಲಿ ಮಂಗಳವಾರ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಿಂದ ಕೆಇಎ – ಸಿಇಟಿ 2026 ಪ್ರವೇಶ ಪ್ರಕ್ರಿಯೆಕುರಿತು ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ.

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇದರ ವತಿಯಿಂದ ಕೆಇಎ – ಸಿಇಟಿ 2026 ಪ್ರವೇಶ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೆಇಎ- ಸಿಇಟಿ 2026ರ ಪ್ರವೇಶ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಯ್ಕೆ ನಮೂದು ಸೀಟು ಹಂಚಿಕೆ , ಶುಲ್ಕ ಪಾವತಿ ಹಾಗೂ ಕಾಲೇಜಿಗೆ ವರದಿ ಮಾಡುವ ಪ್ರಕ್ರಿಯೆ ಸೇರಿದಂತೆ ಸಿ […]

ಸೈಟ್ ಮಾರಾಟಕ್ಕಿದೆ.

ಬ್ರಹ್ಮಾವರ ಕುಂಜಾಲ್ ನಲ್ಲಿ ನೀರು ಸರಬರಾಜು ವಿದ್ಯುತ್ ಕಾಂಕ್ರೀಟ್ ರಸ್ತೆ ಮಳೆ ನೀರು ಒಳಚರಂಡಿ ಎಲ್ಲಾ ಸೌಲಭ್ಯಗಳನೊಳಗೊಂಡ 5,6,9 ಸೆಂಟ್ಸ್ ಸೈಟ್ಗಳು ಮಾರಾಟಕ್ಕಿದೆ,ಸೈಟ್ ಪ್ರತಿ ಸೆಂಟ್ಸ್ ಗೆ 3ಲಕ್ಷ.ಹೆಚ್ಚಿನ ಮಾಹಿತಿಗಾಗಿ ಕೂಡ ಸಂಪರ್ಕಿಸಿ: 8197035017

ಉಡುಪಿ: ವಾಹನಕ್ಕೆ ಸೈಡ್ ನೀಡುವ ವಿಚಾರಕ್ಕೆ ಗಲಾಟೆ: ಪ್ರವಾಸಿಗರು–ಸ್ಥಳೀಯ ವ್ಯಕ್ತಿಯ ನಡುವೆ ಮಾರಾಮಾರಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಮಂಗಳವಾರ ರಾತ್ರಿ ಹೊರರಾಜ್ಯದ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿಯ ನಡುವೆ ಗಲಾಟೆ ನಡೆದು, ದೂರು ಪ್ರತಿದೂರು ದಾಖಲಾಗಿದೆ. ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಅವರು ಕಾರು ಚಲಾಯಿಸುತ್ತಿದ್ದ ವೇಳೆ ಹೈದರಾಬಾದ್ ಮೂಲದ ಪ್ರವಾಸಿಗರೊಂದಿಗೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಕಾರು ಹತ್ತಿಸಲು ಯತ್ನಿಸಿದ್ದಾರೆ ಎಂದು ಪ್ರವಾಸಿಗರು ದೂರಿದ್ದಾರೆ. ಬಳಿಕ ವಾಗ್ವಾದ ತೀವ್ರಗೊಂಡು ಹೊಡೆದಾಟಕ್ಕೆ ತಿರುಗಿದೆ. ಕಾರಿನಲ್ಲಿದ್ದ ಕೋಲಿನಿಂದ ಸುಪ್ರೀತ್ ಅವರು ಪ್ರವಾಸಿಗರ […]