ತ್ರಿಶಾ ವಿದ್ಯಾ ಪಿ ಯು ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿಯ ತ್ರಿಶಾ ವಿದ್ಯಾ ಪಿ ಯು ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮವು ಕಟಪಾಡಿಯ ಎ ಆರ್ ಕಾಮತ್ ಮೆಮೋರಿಯಲ್ ಹಾಲ್ ನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿ ಎ ಗೋಪಾಲ ಕೃಷ್ಣ ಭಟ್ ಇವರು ವಿದ್ಯಾರ್ಥಿಗಳಿಗೆ ಕಲಿಕೆಯ ಹತ್ತು ಸೂತ್ರಗಳನ್ನು, ಮುಖ್ಯವಾಗಿ ಯೋಜನೆಮತ್ತು ಅಭ್ಯಾಸದ ಪ್ರಾಮುಖ್ಯತೆಯನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಕಾಲೇಜಿನ ನಿಯಮ ಮತ್ತು ನಿಬಂಧನೆಗಳನ್ನು ತಿಳಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಪ್ರೊ. ಧೀರಜ್ […]
ಕೆರೆಮನೆ ಶಿವಾನಂದ ಹೆಗಡೆ ಗುಣವಂತೆ ಅವರಿಗೆ ಪ್ರಶಸ್ತಿ ಪ್ರಧಾನ.

ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಶ್ರೀ ಜನಾರ್ದನ ಹಾಗೂ ಮಹಾಕಾಳಿ ದೇವಸ್ಥಾನ, ಅಂಬಲಪಾಡಿ, ಉಡುಪಿ ಇವರ ಸಹಯೋಗದೊಂದಿಗೆ ಇಲ್ಲಿ ಮೇ.03 ರಂದು 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದ್ದು, ಸದರಿ ಸಾಲಿನ 2024ನೇ ಸಾಲಿನ ಪುಸ್ತಕ ಪ್ರಶಸ್ತಿ ಪುರಸ್ಕೃತರಾದ ಕೆರೆಮನೆ ಶಿವಾನಂದ ಹೆಗಡೆ, ಗುಣವಂತೆ ಇವರು ಮೇಲ್ಕಂಡ ದಿನಾಂಕದಂದು ವೈಯುಕ್ತಿಕ ಕಾರಣಗಳಿಂದ ಕಾರ್ಯಕ್ರಮಕ್ಕೆ ಹಾಜರಾಗಿರುವುದಿಲ್ಲ. ಆದುದರಿಂದ ಜೂ.10 2026ರಂದು ಅಕಾಡೆಮಿಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಆಯೋಜಿಸಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಕಚೇರಿಯಲ್ಲಿ ಅಕಾಡೆಮಿಯ […]
ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಡಿ ಪರಿಶಿಷ್ಟ ಜಾತಿಯ 2026-27 ನೇ ಸಾಲಿನಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ವೃತ್ತಿಪರ ತರಬೇತಿ, ಬಿ.ಎ, ಬಿ.ಎಸ್ಸಿ, ಬಿ.ಕಾಂ., ಬಿ.ಬಿ.ಎ, ಬಿ.ಬಿ.ಎಂ, ಬಿ.ಸಿ.ಎ, ಇತರ ಪದವಿ, ಬಿ.ಎಡ್, ಬಿ.ಪಿ.ಎಡ್, ಎಂ.ಎ., ಎಂ.ಎಸ್ಸಿ, ಎಂ.ಕಾo, ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ, ಎಂ.ಎಡಿ, ಎಂ.ಪಿ.ಐ.ಡಿ, ಜೆ.ಇ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಎಂ.ಟೆಕ್, ಎಂ.ಇ, ಎಂ.ಡಿ., ಎಂ.ಎಸ್ ಇತರ ಇನ್ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಆಸಕ್ತ ವಿದ್ಯಾರ್ಥಿಗಳು […]
ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣಕ್ಕೆ ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಸದಸ್ಯರಿಗೆ ವಿತರಿಸಲಾದ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ಅನ್ನು ಪ್ರತೀ ವರ್ಷದಂತೆ ಈ ವರ್ಷವೂ ನವೀಕರಿಸಲಾಗುತ್ತಿದ್ದು, ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಸದಸ್ಯರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಬಗ್ಗೆ ಮುಚ್ಚಳಿಕೆ ಪತ್ರ ಹಾಗೂ ಹಳೆ ಆರೋಗ್ಯ ಕಾರ್ಡ್ ಪ್ರತಿಯೊಂದಿಗೆ ಜುಲೈ 1 ರ ಒಳಗಾಗಿ ಉಡುಪಿ ನಗರಸಭಾ ಕಛೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಬೇಕು. ದಾಖಲೆ ಸಲ್ಲಿಸಿದವರ ಕಾರ್ಡ್ಗಳನ್ನು ಮಾತ್ರ […]
ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು – 4 ಹುದ್ದೆಗಳ ನೇಮಕಾತಿಗಾಗಿ, ಕೃಷಿ / ಕೃಷಿ ಸಂಬoಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಎರಡು ವರ್ಷ ಹೆಚ್ಚಿನ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಷರತ್ತಿಗೊಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ. ಸದರಿ ನೇಮಕಾತಿಯು 2027 ರ ಮಾರ್ಚ್ 31 ರ ವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿoದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ […]