ಅನಗತ್ಯ ರಸ್ತೆ ಅಗೆತ ಮಾಡಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜಾರಿ

ಉಡುಪಿ: ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ, ಉಡುಪಿ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಯಾವುದೇ ರಾಜ್ಯ ಹೆದ್ದಾರಿ/ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹಾಗೂ ಅಕ್ಕಪಕ್ಕದಲ್ಲಿ ಅಗೆತ ಮಾಡುವುದನ್ನು ಅಕ್ಟೋಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ. ರಸ್ತೆ ಅಗೆತಕ್ಕೆ ಈಗಾಗಲೇ ಇಲಾಖೆಯಿಂದ ಅನುಮತಿ ನೀಡಲಾಗಿದ್ದರೂ ಸುರಕ್ಷತಾ ದೃಷ್ಠಿಯಿಂದ ಅಕ್ಟೋಬರ್ ಅಂತ್ಯದವರೆಗೆ ರಸ್ತೆ ಹಾಗೂ ರಸ್ತೆ ಬದಿಯಲ್ಲಿ ಯಾವುದೇ ಅಗೆತವನ್ನು ನಿಷೇಧಿಸಿದೆ ಮತ್ತು ಅಕ್ಟೋಬರ್ ಅಂತ್ಯದವರೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ. ಅನಗತ್ಯವಾಗಿ ರಸ್ತೆ ತುಂಡರಿಸುವುದು, ಅಗೆತ ಮಾಡುವುದು ಕಂಡುಬಂದಲ್ಲಿ ಅಂಥವಹ ವಿರುದ್ಧ ನಿಯಮಾನುಸಾರ ಸೂಕ್ತ […]

ಕೋಕಾ ಕಾಯ್ದೆಯಡಿ ಕುಖ್ಯಾತ ರೌಡಿಗಳಾದ ಮನೋಜ್ ಕೋಡಿಕೆರೆ ಮತ್ತು ಚೇತು ಪಡೀಲ್ ಬಂಧನ

ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೋಕಾ (KCOCA) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಮಾಹಿತಿ ನೀಡಿದ ಬಾತ್ಮೀದಾರರಿಗೆ ಘೋಷಿಸಲಾಗಿದ್ದ ನಗದು ಬಹುಮಾನವನ್ನು ಪೊಲೀಸ್ ಇಲಾಖೆ ವಿತರಿಸಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಕೋಕಾ ಕಾಯ್ದೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆ ಹಾಗೂ ಚೇತನ್ @ ಚೇತು ಪಡೀಲ್ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಸಾರ್ವಜನಿಕರಿಂದ ಮಾಹಿತಿ ಕೋರಿದ್ದ ಪೊಲೀಸರು, ಮಾಹಿತಿ ನೀಡುವವರಿಗೆ *50,000 ನಗದು […]

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಕ್ರಮ

ಉಡುಪಿ: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರ ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ವಿಭಾಗಗಳ ಮೇಲ್ವಿಚಾರಕಿಯರಿಗೆ ಸೌರಶಕ್ತಿ, ಸಾವಯವ ಕೃಷಿ ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಯೋಗ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಒಂದು ದಿನದ ಮಾಹಿತಿ ಕಾರ್ಯಕ್ರಮವು ಬುಧವಾರ ಉಡುಪಿಯ ಬಾಲಭವನ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನಿ ಉದ್ಘಾಟಿಸಿ ಮಾತನಾಡಿ, […]

ಆಹಾರ ಪೊಟ್ಟಣಕ್ಕೆ ದಿನಪತ್ರಿಕೆ ಬೇಡವೇ ಬೇಡ ಎಂದ ಆಹಾರ ಪ್ರಾಧಿಕಾರ,ಬಳಸಿದ್ರೆ ಏನಾಗುತ್ತೆ? ಯಾಕೆ ಈ ಎಚ್ಚರಿಕೆ?

ನವದೆಹಲಿ: ಬೀದಿ ಬದಿ ಅಂಗಡಿಗಳಲ್ಲಿ ಬಜ್ಜಿ, ಬೋಂಡಾ, ಚುರುಮುರಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಾಮಾನ್ಯವಾಗಿ ದಿನಪತ್ರಿಕೆಗಳಲ್ಲಿ ಪೊಟ್ಟಣ ಮಾಡಿ ನೀಡಲಾಗುತ್ತದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕಾಗದದ ಬಳಕೆ ಉತ್ತಮವೆಂದು ಪರಿಗಣಿಸಲಾದರೂ, ಆಹಾರವನ್ನು ದಿನಪತ್ರಿಕೆಗಳಲ್ಲಿ ಸುತ್ತುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಎಚ್ಚರಿಕೆ ನೀಡಿದೆ. ಆಹಾರ ಪದಾರ್ಥಗಳ ಪ್ಯಾಕಿಂಗ್‌ಗಾಗಿ ದಿನಪತ್ರಿಕೆಗಳನ್ನು ಬಳಸಬಾರದು ಎಂಬ ನಿಯಮ ಈಗಾಗಲೇ ಜಾರಿಯಲ್ಲಿದೆ. ಆದರೆ ಮುಂಬೈನಲ್ಲಿ ವಡಾ ಪಾವ್ ಸೇರಿದಂತೆ ವಿವಿಧ […]

ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿದೆ  ವಿವಿಧ ಉಪನ್ಯಾಸಕ ಹುದ್ದೆಗಳು, ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ: ನಗರದ ಕುಂಜಿಬೆಟ್ಟುವಿನಲ್ಲಿರುವ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು (UPMC) ಇಲ್ಲಿ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಡಾ. ಟಿ.ಎಂ.ಎ. ಪೈ ಫೌಂಡೇಶನ್ ಘಟಕವಾಗಿದ್ದು, ಉಡುಪಿ ಕುಂಜಿಬೆಟ್ಟುವಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಾಲೇಜಿನಲ್ಲಿ ಬಿಸಿಎ ವಿಭಾಗಕ್ಕೆ ಪೂರ್ಣಕಾಲಿಕ ಉಪನ್ಯಾಸಕರ 2 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಎಂಸಿಎ, ಎಂಎಸ್‌ಸಿ (ಐಟಿ) ಅಥವಾ ಎಂಎಸ್‌ಸಿ (ಕಂಪ್ಯೂಟರ್ ಸೈನ್ಸ್) ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ NET, KSET […]