ಗೃಹಲಕ್ಷ್ಮಿ ಯೋಜನೆ: 4.30 ಲಕ್ಷ ಫಲಾನುಭವಿಗಳ ಹೆಸರು ಡಿಲೀಟ್,ಮೃತರ ಖಾತೆಗೂ ಜಮೆಯಾಗುತ್ತಿತ್ತು ಹಣ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಬಳಿಕ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ“ ಹೆಸರಿನಲ್ಲಿ ವಿಶೇಷ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿತ್ತು. ಪರಿಶೀಲನೆ ವೇಳೆ ಹಲವು ಅಕ್ರಮಗಳು ಬೆಳಕಿಗೆ ಬಂದಿದ್ದು, ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರ ಕುಟುಂಬಗಳು, […]

ಮಂಗಳೂರು: ಶೀಘ್ರವೇ ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿ, ಜಿಲ್ಲಾಧಿಕಾರಿ ಖಡಕ್ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ರಸ್ತೆ ಡಿವೈಡರ್‌ಗಳ ಮೇಲೆ ಅಳವಡಿಸಲಾಗಿರುವ ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್‌ಗಳನ್ನು ತಕ್ಷಣ ತೆರವುಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಸೂಚನೆ ನೀಡಿದ್ದಾರೆ. ಮಳೆಗಾಲದಲ್ಲಿ ಬಿರುಗಾಳಿ ಹಾಗೂ ಮಳೆಯ ಪರಿಣಾಮದಿಂದ ರಸ್ತೆ ಡಿವೈಡರ್‌ಗಳಿಗೆ ಅಳವಡಿಸಲಾದ ಫ್ಲೆಕ್ಸ್, ಬ್ಯಾನರ್‌ಗಳು ಕಳಚಿ ವಾಹನಗಳು ಹಾಗೂ ಪಾದಚಾರಿಗಳ ಮೇಲೆ ಬೀಳುವ ಸಾಧ್ಯತೆ ಇದ್ದು, ಇದರಿಂದ ಅಪಘಾತಗಳು ಹಾಗೂ ಜೀವಹಾನಿ ಸಂಭವಿಸುವ ಅಪಾಯವಿದೆ ಎಂದು ಅವರು ತಿಳಿಸಿದ್ದಾರೆ. […]

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು

ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್ ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ […]