ಕಾಪು ತಾಲೂಕು ಕೃಷಿಕ ಸಮಾಜ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ

ಉಡುಪಿ: ಕರ್ನಾಟಕ ಪ್ರದೇಶ ಕೃಷಿಕ ಸಮಾಜದ 5 ವರ್ಷಗಳ ಅವಧಿಗೆ ಕಾಪು ತಾಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆಯನ್ನು, ಜುಲೈ 11 ರ ಶನಿವಾರ ದಂದು ರೈತ ಸಂಪರ್ಕ ಕೇಂದ್ರ, ಕಾಪು ತಾಲೂಕು ಇಲ್ಲಿ ಬೆಳಗ್ಗೆ 8 ರಿಂದ ಅಪರಾಹ್ನ 3.00 ಘಂಟೆಯ ವರೆಗೆ ನಿಗದಿಪಡಿಸಲಾಗಿದೆ. ಸದರಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಉಮೇದುದಾರರಿಗೆ ಜೂನ್ 30 ರಿಂದ ಕೃಷಿ ಅಧಿಕಾರಿಯವರ ಕಚೇರಿ, ರೈತ ಸಂಪರ್ಕ ಕೇಂದ್ರ, ಕಾಪು ಇಲ್ಲಿ ನಾಮಪತ್ರ ವಿತರಿಸಲಾಗುವುದು. ಆಕಾಂಕ್ಷಿಗಳು ಚುನಾವಣಾಧಿಕಾರಿಗಳಿಗೆ ಅರ್ಜಿ ಮೂಲಕ […]

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಮೂಡಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್” ಪ್ರವೇಶಾತಿಗಾಗಿ ಹತ್ತನೇ ತರಗತಿ ಉತ್ತೀರ್ಣರಾದ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾoಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08258-236561, 7022429440, 8971361396 […]

ಬಾಲಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪಣ ತೊಡೋಣ: ನ್ಯಾ. ಎಂ ಪುರುಷೋತ್ತಮ್

ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದ ಅನಿಷ್ಠ ಪದ್ಧತಿಗಳಲ್ಲಿ ಒಂದಾಗಿದ್ದು, ಇದು ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಸವಿಯುವುದನ್ನು ಮೊಟಕುಗೊಳಿಸುವುದರ ಜೊತೆಗೆ ಶಿಕ್ಷಣ ವಂಚಿತರನ್ನಾಗಿ ಮಾಡುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ತಳ ಮಟ್ಟದಲ್ಲಿ ನಿರ್ಮೂಲನೆ ಮಾಡುವ ಮೂಲಕ ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಮ್. ಪುರುಷೋತ್ತಮ್ ಹೇಳಿದರು.   ಅವರು ಇಂದು ನಗರದ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, […]

ತೆಂಗಿನ ಕಾಯಿ ಬಿದ್ದು ಮೃತಪಟ್ಟ ಮಗು ದಕ್ಷ್ ಮನೆಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಸಾಂತ್ವಾನ

ಉಡುಪಿ: ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹೆರಂಜೆಯಲ್ಲಿ ತೆಂಗಿನ ಕಾಯಿ ಬಿದ್ದು 1.5 ವರ್ಷದ ಮಗು ದಕ್ಷ್ ಮೃತ ಪಟ್ಟ ಹಿನ್ನೆಲೆಯಲ್ಲಿ ಅವರ ಮನೆಗೆ ಶಾಸಕ ಯಶ್ ಪಾಲ್ ಸುವರ್ಣ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು, ಘಟನೆಯ ಬಗ್ಗೆ ತಕ್ಷಣ ಸರ್ಕಾರಕ್ಕೆ ವರದಿ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ, ಸರಕಾರದ ಮೂಲಕ ಗರಿಷ್ಠ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಹೇಳಿದರು. ಘಟನೆ […]

ಕೊಲ್ಲೂರಿನಲ್ಲಿ ಸಿಎಂ ವಿಜಯ್ ಗೆ ಜೈಕಾರ ಕೂಗಿದ ಅಭಿಮಾನಿಗಳು!

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದ ಬಳಿಕ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ದೇವಸ್ಥಾನದ ಹೊರಭಾಗದಲ್ಲಿ ನೆರೆದಿದ್ದ ಅಭಿಮಾನಿಗಳತ್ತ ತೆರಳಿ ನಮಸ್ಕರಿಸಿದರು. ವಿಜಯ್ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಜಮಾಯಿಸಿದ್ದರು. ವಿಜಯ್ ದೇಗುಲದಿಂದ ಹೊರಬರುತ್ತಿದ್ದಂತೆಯೇ ಅಭಿಮಾನಿಗಳು ಜೈಕಾರ ಕೂಗಿ ಸಂಭ್ರಮ ವ್ಯಕ್ತಪಡಿಸಿದರು. ಭದ್ರತಾ ಸಿಬ್ಬಂದಿಯ ಸಮ್ಮುಖದಲ್ಲೇ ಅವರು ಅಭಿಮಾನಿಗಳತ್ತ ತೆರಳಿ ಶುಭಾಶಯ ವಿನಿಮಯ ಮಾಡಿಕೊಂಡರು. ಈ ವೇಳೆ ಅಭಿಮಾನಿಗಳತ್ತ ಕೈಮುಗಿದು ನಮಸ್ಕರಿಸಿದ ವಿಜಯ್, ಬಳಿಕ ದೇವಸ್ಥಾನದ ಮುಂಭಾಗದ […]